Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:4 - ಕನ್ನಡ ಸಮಕಾಲಿಕ ಅನುವಾದ

4 ಆದರೂ ಈಗ ಯೆಹೋವ ದೇವರು ಹೀಗೆ ಹೇಳಿದರು: ‘ಜೆರುಬ್ಬಾಬೆಲನೇ, ಬಲವಾಗಿರು. ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನೇ, ಬಲವಾಗಿರು. ದೇಶದ ಜನರೆಲ್ಲರೇ, ಬಲವಾಗಿರಿ,’ ಕೆಲಸಮಾಡಿರಿ. ‘ನಾನು ನಿಮ್ಮ ಸಂಗಡ ಇದ್ದೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜೆರುಬ್ಬಾಬೆಲನೇ, ಈಗ ಧೈರ್ಯದಿಂದಿರು. ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನೇ, ಎದೆಗುಂದಬೇಡ. ನಾಡಿನ ಜನರೇ, ನೀವೆಲ್ಲರು ಧೈರ್ಯದಿಂದ ಕೆಲಸಮಾಡಿ. ಇದು ಸೇನಾಧೀಶ್ವರ ಸರ್ವೇಶ್ವರ ಆದ ನನ್ನ ನುಡಿ. ನಾನು ನಿಮ್ಮೊಡನೆ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಇಂತೆನ್ನುತ್ತಾನೆ - ಜೆರುಬ್ಬಾಬೆಲನೇ, ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ; ಇದು ಯೆಹೋವನ ನುಡಿ; ನಾನು ನಿಮ್ಮೊಂದಿಗೆ ಇದ್ದೇನೆಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಜೆರುಬ್ಬಾಬೆಲನೇ, ಯೆಹೋವನು ಹೀಗೆನ್ನುತ್ತಾನೆ, “ನಿರುತ್ಸಾಹಗೊಳ್ಳಬೇಡ! ಮಹಾಯಾಜಕನಾದ ಯೆಹೋಶುವನೇ, ನಿರುತ್ಸಾಹಗೊಳ್ಳಬೇಡ! ಈ ದೇಶದ ಎಲ್ಲಾ ಜನರೇ, ನಿರುತ್ಸಾಹಗೊಳ್ಳಬೇಡಿ, ಕೆಲಸವನ್ನು ಮುಂದುವರಿಸಿರಿ, ಯಾಕೆಂದರೆ ನಾನೇ ನಿಮ್ಮೊಂದಿಗಿದ್ದೇನೆ” ಎಂದು ಯೆಹೋವನು ಹೇಳುತ್ತಾನೆ.’” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:4
20 ತಿಳಿವುಗಳ ಹೋಲಿಕೆ  

ದಾವೀದನು ತನ್ನ ಮಗ ಸೊಲೊಮೋನನಿಗೆ, “ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ದೇವಾಲಯವನ್ನು ಕಟ್ಟುವ ಹಾಗೆ ಸೇನಾಧೀಶ್ವರ ಯೆಹೋವ ದೇವರ ಆಲಯದ ಅಸ್ತಿವಾರವು ಹಾಕಲಾದ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.


ಹೀಗೆಯೇ ಸರ್ವಶಕ್ತರಾದ ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ದಿನದಿನಕ್ಕೆ ಬಲಗೊಳ್ಳುತ್ತಾ ಇದ್ದನು.


ಅವನು ನೂನನ ಮಗನಾದ ಯೆಹೋಶುವನಿಗೆ ಆಜ್ಞಾಪಿಸಿ, “ಶೂರನಾಗಿರು, ಧೈರ್ಯವಾಗಿರು, ಏಕೆಂದರೆ ನೀನು ಇಸ್ರಾಯೇಲರನ್ನು ನಾನು ಅವರಿಗೆ ಪ್ರಮಾಣ ಮಾಡಿದ ದೇಶಕ್ಕೆ ತರುವೆ, ನಾನು ನಿನ್ನ ಸಂಗಡ ಇರುವೆನು,” ಎಂದು ಹೇಳಿದನು.


ಆದ್ದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲಗೊಂಡವನಾಗಿರು.


ಯೆಹೋವ ದೇವರು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನ್ಯಾಯವಿಧಿಗಳನ್ನು ಕೈಗೊಳ್ಳಲು ನೀನು ಜಾಗ್ರತೆಯಾಗಿರು. ಆಗ ಸಫಲನಾಗುವಿ. ಬಲವಾಗಿರು, ದೃಢವಾಗಿರು. ಭಯಪಡಬೇಡ, ಹೆದರಬೇಡ.


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ಎಚ್ಚರವಾಗಿರಿ, ವಿಶ್ವಾಸದಲ್ಲಿ ಸ್ಥಿರವಾಗಿ ನಿಲ್ಲಿರಿ, ಧೈರ್ಯವಾಗಿರಿ, ಬಲಗೊಳ್ಳಿರಿ.


ಆಗ ಯೆಹೋವ ದೇವರ ಸೇವಕನಾದ ಹಗ್ಗಾಯನು, ಯೆಹೋವ ದೇವರ ಜನರಿಗೆ, “ನಾನು ನಿಮ್ಮ ಸಂಗಡ ಇದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ.


“ಈ ಪಿತೃಗಳು ಯೋಸೇಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗಿದ್ದು,


ಶಿಷ್ಯರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು. ಕರ್ತನು ಅವರ ಜೊತೆಯಲ್ಲಿ ಕೆಲಸ ಮಾಡುತ್ತಾ, ಸೂಚಕಕಾರ್ಯಗಳಿಂದ ತಮ್ಮ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದರು.


ಬಲಿಷ್ಠನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರಿಗೆ ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


ಆಗ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ಜನರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದ ಮೇಲೆ ದೇವರಾದ ನನ್ನನ್ನು ಆರಾಧಿಸುವಿರಿ. ನಾನು ನಿನ್ನನ್ನು ಕಳುಹಿಸಿದವನು ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಆಗ ಸೇವಕರಲ್ಲಿ ಒಬ್ಬನು ಅವನಿಗೆ ಉತ್ತರವಾಗಿ, “ವಾದ್ಯ ಬಾರಿಸಲು ನಿಪುಣನಾದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ಕಂಡೆನು. ಅವನು ಧೈರ್ಯಶಾಲಿಯೂ, ಪರಾಕ್ರಮಶಾಲಿಯೂ, ರಣಶೂರನೂ, ವಾಕ್ಚತುರನೂ, ಸುಂದರನೂ ಆಗಿದ್ದಾನೆ. ಇದಲ್ಲದೆ ಯೆಹೋವ ದೇವರು ಅವನ ಸಂಗಡ ಇದ್ದಾರೆ,” ಎಂದನು.


ಯೆಹೋವ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿದಾಗ, ಯೆಹೋವ ದೇವರು ನ್ಯಾಯಾಧಿಪತಿಯ ಸಂಗಡ ಇದ್ದು, ಆ ನ್ಯಾಯಾಧಿಪತಿಯ ದಿವಸಗಳಲ್ಲೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ತಪ್ಪಿಸಿ ರಕ್ಷಿಸುತ್ತಿದ್ದರು. ಏಕೆಂದರೆ ಅವರು ತಮ್ಮನ್ನು ಬಾಧಿಸಿ, ಶ್ರಮೆಪಡಿಸುವವರ ನಿಮಿತ್ತ ಗೋಳಾಡಿದ್ದರಿಂದ ಯೆಹೋವ ದೇವರು ಕನಿಕರಪಟ್ಟರು.


ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಿಸಲು ಪ್ರಾರಂಭಿಸಿದರು. ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.


ಯಾಜಕರ ವಂಶಜರಲ್ಲಿ ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು ಯಾರೆಂದರೆ: ಯೋಚಾದಾಕನ ಮಗ ಯೇಷೂವನು ಮತ್ತು ಅವನ ಸಹೋದರರಲ್ಲಿ: ಮಾಸೇಯನು, ಎಲೀಯೆಜೆರನು, ಯಾರೀಬನು, ಗೆದಲ್ಯನು.


ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು