Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:7 - ಕನ್ನಡ ಸಮಕಾಲಿಕ ಅನುವಾದ

7 ಎಲ್ಲಾ ಜನಾಂಗಗಳನ್ನು ನಡುಗಿಸುವೆನು. ಎಲ್ಲಾ ಜನಾಂಗಗಳ ಇಷ್ಟ ವಸ್ತುಗಳು ಬಂದು ಒದಗಲು, ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಕಲ ಜನಾಂಗಗಳನ್ನು ನಡುಗಿಸುವೆನು. ಆಗ ಎಲ್ಲ ರಾಷ್ಟ್ರಗಳ ಸಿರಿಸಂಪತ್ತು ಇಲ್ಲಿಗೆ ಬರುವುದು. ಈ ಆಲಯವನ್ನು ವೈಭವದಿಂದ ತುಂಬಿಸುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸಕಲಜನಾಂಗಗಳನ್ನು ನಡುಗಿಸುವೆನು; ಆಗ ಸಮಸ್ತಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಆ ಆಲಯವನ್ನು ವೈಭವದಿಂದ ತುಂಬಿಸುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ಜನಾಂಗಗಳನ್ನು ನಡುಗಿಸುವೆನು. ಆಗ ಅವರು ಎಲ್ಲಾ ಜನಾಂಗಗಳ ಐಶ್ವರ್ಯದೊಡನೆ ನಿಮ್ಮಲ್ಲಿಗೆ ಬರುವರು. ಆಗ ನನ್ನ ಈ ಆಲಯವನ್ನು ಮಹಿಮೆಯಿಂದ ತುಂಬಿಸುವೆನು.’ ಸರ್ವಶಕ್ತನಾದ ದೇವರು ಇದನ್ನು ಹೇಳುತ್ತಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:7
36 ತಿಳಿವುಗಳ ಹೋಲಿಕೆ  

“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ಮೂರು ದಿವಸಗಳಾದ ಮೇಲೆ ಯೇಸುವನ್ನು ದೇವಾಲಯದಲ್ಲಿ ಕಂಡರು. ಬೋಧಕರ ನಡುವೆ ಕೂತುಕೊಂಡು, ಬಾಲಕ ಯೇಸು ಅವರ ಮಾತುಗಳನ್ನು ಕೇಳಿಸಿಕೊಳ್ಳುತ್ತಾ, ಪ್ರಶ್ನಿಸುತ್ತಾ ಇರುವುದನ್ನು ಅವರು ಕಂಡರು.


ಅವನು ಪವಿತ್ರಾತ್ಮ ಪ್ರೇರಣೆಯಿಂದ ದೇವಾಲಯದ ಅಂಗಳದೊಳಗೆ ಬಂದನು, ಆಗ ನಿಯಮವನ್ನು ಪೂರೈಸಲು ತಂದೆತಾಯಿಗಳು ಶಿಶು ಯೇಸುವನ್ನು ಒಳಗೆ ತಂದರು.


ಬಾ, ನಾಶನ! ನಾಶನ! ನಾನು ಅದನ್ನು ಪಾಳು ಬೀಳುವಂತೆ ಮಾಡುವೆನು. ಅದು ಯಾರದೋ, ಅವನು ಬರುವವರೆಗೆ ನಾನು ಅದನ್ನು ಪುನಃ ಕಟ್ಟಿಸುವುದಿಲ್ಲ; ಅವನಿಗೆ ನಾನು ಅದನ್ನು ಒಪ್ಪಿಸುವೆನು.’


ಕೇದಾರಿನ ಮಂದೆಗಳೆಲ್ಲಾ ನಿನ್ನಲ್ಲಿ ಸೇರಿಬರುವುವು. ನೆಬಾಯೋತಿನ ಟಗರುಗಳು ನಿನ್ನನ್ನು ಸೇವಿಸುವುವು. ನನ್ನ ಬಲಿಪೀಠದ ಮೇಲೆ ಮೆಚ್ಚಿಕೆಯಿಂದ ಏರುವುವು. ನನ್ನ ಮಹಿಮೆಯ ಆಲಯವನ್ನು ಘನಪಡಿಸುವೆನು.


ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.


ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಜನರೆಲ್ಲರೂ ಬೆಳಗಿನ ಜಾವದಲ್ಲಿ ಎದ್ದು ಯೇಸುವಿನ ಉಪದೇಶವನ್ನು ಕೇಳುವುದಕ್ಕಾಗಿ ದೇವಾಲಯಕ್ಕೆ ಬರುತ್ತಿದ್ದರು.


ಯೇಸು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಿದ್ದರು. ಆದರೆ ಮುಖ್ಯಯಾಜಕರೂ ನಿಯಮ ಬೋಧಕರೂ ಜನರ ಪ್ರಮುಖರೂ ಯೇಸುವನ್ನು ಕೊಲ್ಲುವುದಕ್ಕೆ ಹವಣಿಸುತ್ತಿದ್ದರು.


ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.


ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.


ಆ ದಿವಸಗಳಲ್ಲಿ ಒಂದು ದಿನ ಯೇಸು ದೇವಾಲಯದ ಅಂಗಳದಲ್ಲಿ ಜನರಿಗೆ ಬೋಧಿಸುತ್ತಾ, ಸುವಾರ್ತೆಯನ್ನು ಸಾರುತ್ತಿದ್ದರು. ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೊಂದಿಗೆ ಅವರ ಬಳಿಗೆ ಬಂದು


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಏಕೆಂದರೆ ದೇವರ ಸರ್ವಸಂಪೂರ್ಣತೆಯು ಮಾನವ ದೇಹವಾಗಿ ಕ್ರಿಸ್ತ ಯೇಸುವಿನಲ್ಲಿಯೇ ವಾಸಮಾಡಿದೆ.


ನಿಶ್ಚಯವಾಗಿ ಮಹಿಮೆಯು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ದೇವರಿಗೆ ಭಯಪಡುವವರಿಗೆ ದೇವರ ರಕ್ಷಣೆಯು ಸಮೀಪವಾಗಿದೆ.


ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರಿಗೂ ಅವರ ಮಹಿಮೆಗೂ, ಅವರ ಘನಕ್ಕೂ ಹೆದರಿ, ಬಂಡೆಗಳ ಸಂದುಗಳಿಗೂ, ಭೂಮಿಯ ಗವಿಗಳಿಗೂ ಜನರು ಸೇರಿಕೊಳ್ಳುವರು.


ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು. ಅವರೆಲ್ಲರು ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ. ನಿನ್ನ ಪುತ್ರರು ದೂರದಿಂದ ಬರುವರು, ನಿನ್ನ ಪುತ್ರಿಯರು ಕಂಕುಳಿನಲ್ಲಿ ಕುಳಿತು ಬರುವರು.


ನಾನು ಅದನ್ನು ಕುಳಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು. ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವುವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿಕೊಂಡವು.


ಏಕೆಂದರೆ ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನದಂದು ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗುವುದು.


ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು. ನಾನು ನೋಡಿದೆ ಯೆಹೋವ ದೇವರ ಮಹಿಮೆಯು ಯೆಹೋವ ದೇವರ ಆಲಯವನ್ನು ತುಂಬಿಕೊಂಡಿತು, ನಾನು ಬೋರಲು ಬಿದ್ದೆನು.


ಬೆಟ್ಟಕ್ಕೆ ಹೋಗಿ ಮರವನ್ನು ತಂದು, ಆಲಯವನ್ನು ಕಟ್ಟಿರಿ. ಆಗ ನಾನು ಅದಕ್ಕೆ ಮೆಚ್ಚಿ, ಮಹಿಮೆ ಹೊಂದುವೆನೆಂದು, ಯೆಹೋವ ದೇವರು ಹೇಳುತ್ತಾರೆ.


ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ, ಮೇಘವು ಯೆಹೋವ ದೇವರ ಮಂದಿರವನ್ನು ತುಂಬಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು