ಹಬಕ್ಕೂಕ 1:10 - ಕನ್ನಡ ಸಮಕಾಲಿಕ ಅನುವಾದ10 ಅವರ ಅರಸನನ್ನು ಧಿಕ್ಕರಿಸುವರು; ಪ್ರಧಾನರು ಅವರನ್ನು ಪರಿಹಾಸ್ಯ ಮಾಡುವರು; ಕೋಟೆಗಳಿಗೆಲ್ಲಾ ಕುಚೋದ್ಯ ಮಾಡುವರು; ಮಣ್ಣಿನ ದಿನ್ನೆಗಳನ್ನು ಮಾಡಿ, ಅವುಗಳನ್ನು ಹಿಡಿಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಅವರು ಅರಸರನ್ನು ಅಪಹಾಸ್ಯಮಾಡುವರು; ಅಧಿಪತಿಗಳನ್ನು ಪರಿಹಾಸ್ಯಕ್ಕೆ ಗುರಿಮಾಡುವರು. ಕೋಟೆಗಳನ್ನು ಧೂಳೀಪಟ ಮಾಡುವರು. ಮಣ್ಣುಗುಡ್ಡೆ ಹಾಕಿ ಆಕ್ರಮಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅರಸರನ್ನು ಧಿಕ್ಕರಿಸುವರು; ಸರದಾರರು ಅವರ ಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ತಾತ್ಸಾರಮಾಡಿ ದೂಳದಿಬ್ಬಹಾಕಿ ಆಕ್ರವಿುಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಇತರ ಜನಾಂಗದ ಅರಸರನ್ನು ಬಾಬಿಲೋನಿನ ಸೈನಿಕರು ಗೇಲಿ ಮಾಡುತ್ತಾರೆ. ಪರದೇಶದ ಅರಸರು ಅವರಿಗೆ ಹಾಸ್ಯಾಸ್ಪದವಾಗಿರುತ್ತಾರೆ. ಕೋಟೆಕೊತ್ತಲುಗಳಿರುವ ನಗರವನ್ನು ನೋಡಿ ಅವರು ನಗಾಡುವರು. ಆ ಸೈನಿಕರು ಕೋಟೆಯ ಗೋಡೆಯ ತನಕ ಮಣ್ಣಿನದಿಬ್ಬವನ್ನೇರಿಸಿ, ಸುಲಭವಾಗಿ ಪಟ್ಟಣಗಳನ್ನು ವಶಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿ |