Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:11 - ಕನ್ನಡ ಸಮಕಾಲಿಕ ಅನುವಾದ

11 ಬಿರುಗಾಳಿಯಂತೆ ಕೊಚ್ಚಿಕೊಳ್ಳುತ್ತಾ ಮುಂದೆ ಸಾಗುವರು. ಅಪರಾಧಿ ಜನರವರು. ಅವರ ಸ್ವಂತ ಬಲ, ಅವರ ದೇವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಿರುಗಾಳಿಯಂತೆ ಬಂದು ಮಾಯವಾಗುವವರು ಅವರು; ಸ್ವಂತ ಶಕ್ತಿಯೇ ದೈವ ಎಂದೆಣಿಸುವಂಥ ಅಪರಾಧಿಗಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೂಡಲೆ ಬಿರುಗಾಳಿಯಂತೆ ಬೀಸುತ್ತಾ ಹಾದುಹೋಗುವರು; ಸ್ವಬಲವೇ ದೇವರು ಎನ್ನುವ ಅಪರಾಧಕ್ಕೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಬಳಿಕ ಅವರು ಗಾಳಿಯಂತೆ ಅಲ್ಲಿಂದ ಬೇರೆ ಸ್ಥಳಗಳ ಮೇಲೆ ದಾಳಿಮಾಡಲು ಹೊರಟುಹೋಗುವರು. ಬಾಬಿಲೋನಿನವರು ಆರಾಧಿಸುವ ಒಂದೇ ವಿಷಯ ಯಾವದೆಂದರೆ ಅವರ ಸ್ವಂತ ಶಕ್ತಿಯನ್ನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:11
10 ತಿಳಿವುಗಳ ಹೋಲಿಕೆ  

ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು.


ಇಸ್ರಾಯೇಲು ಯೆಹೋವ ದೇವರಿಗೆ ಪರಿಶುದ್ಧವೂ, ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿದೆ ಅವಳನ್ನು ತಿಂದು ಬಿಟ್ಟವರೆಲ್ಲರೂ ಅಪರಾಧಿಗಳಾಗುವರು. ಅವರಿಗೆ ಕೇಡು ಬರುವುದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ತಮ್ಮ ಬಲೆಗೆ ಬಲಿ ಅರ್ಪಿಸಿ, ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ. ಏಕೆಂದರೆ ಇವುಗಳಿಂದ ಅವರ ಭೋಜನ ಪುಷ್ಟಿಯಾಗಿಯೂ, ಅವರ ಆಹಾರ ರುಚಿಯುಳ್ಳದ್ದಾಗಿಯೂ ಇದೆ.


ಕಳ್ಳರ ಗುಡಾರಗಳು ವೃದ್ಧಿಯಾಗಿವೆ; ದೇವರನ್ನು ಕೆರಳಿಸುವವರು ನಿಶ್ಚಿಂತರಾಗಿದ್ದಾರೆ; ದೇವರೇ ತಮ್ಮ ಕೈಯಲ್ಲಿ ಇರುವುದಾಗಿ ತಿಳಿಯುತ್ತಾರೆ.


ಏಕೆಂದರೆ ಅಸ್ಸೀರಿಯ ತನ್ನೊಳಗೆ ಹೀಗೆ ಅಂದುಕೊಂಡನು, “ ‘ನನ್ನ ಕೈಯ ಬಲದಿಂದಲೂ ನನ್ನ ಜ್ಞಾನದಿಂದಲೂ ಅದನ್ನು ಮಾಡಿದೆ. ಏಕೆಂದರೆ, ನಾನು ವಿವೇಕಿ. ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿಗಳನ್ನು ಕೊಳ್ಳೆಹೊಡೆದು, ಅದರ ಅರಸರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.


ಯೆಹೋವ ದೇವರು ನನಗೆ ಹೀಗೆಂದರು: “ ‘ಮನುಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳುವುವು. ಧಾನ್ಯ ಕೊಯ್ಯುವವನು ಉಳಿಸಿದ ಕೈಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವುವು.’ ”


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು