ಹಬಕ್ಕೂಕ 1:15 - ಕನ್ನಡ ಸಮಕಾಲಿಕ ಅನುವಾದ15 ದುಷ್ಟ ವೈರಿಯು ಅವುಗಳನ್ನು ಗಾಳದಿಂದ ಎತ್ತಿ, ತನ್ನ ಬಲೆಯಿಂದ ಅವುಗಳನ್ನು ಹಿಡಿದು, ತನ್ನ ಜಾಲದಿಂದ ಅವುಗಳನ್ನು ಕೂಡಿಸಿಡುತ್ತಾನೆ. ಅವನು ಹಿಗ್ಗುತ್ತಾನೆ, ಸಂತೋಷಪಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈ ಕಾರಣ ಆ ಬಾಬಿಲೋನಿಯರು ಮಾನವರನ್ನು ಗಾಳದಿಂದ ಸೆಳೆದುಕೊಳ್ಳುತ್ತಾರೆ; ಬಲೆಯಿಂದ ಬಾಚಿಕೊಳ್ಳುತ್ತಾರೆ; ತಮ್ಮ ಜಾಲದಲ್ಲಿ ರಾಶಿಹಾಕಿಕೊಳ್ಳುತ್ತಾರೆ; ಹಿರಿಹಿರಿ ಹಿಗ್ಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಹಾ, ಅವರನ್ನೆಲ್ಲಾ ತನ್ನ ಗಾಳದಿಂದ ಮೇಲಕ್ಕೆಳೆಯುತ್ತಾನೆ, ತನ್ನ ಬಲೆಯಿಂದ ಬಾಚುತ್ತಾನೆ, ತನ್ನ ಜಾಲದಲ್ಲಿ ಗುಡ್ಡೆ ಮಾಡುತ್ತಾನೆ; ಇದಕ್ಕೆ ಹಿಗ್ಗುತ್ತಾನೆ, ಹೆಚ್ಚಳಪಡುತ್ತಾನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವೆಲ್ಲವನ್ನು ಗಾಳ, ಬಲೆಗಳಿಂದ ವೈರಿಯು ಹಿಡಿಯುತ್ತಾನೆ. ಬಲೆಯಲ್ಲಿ ಅವುಗಳನ್ನು ವೈರಿಯು ಹಿಡಿದು ಎಳೆಯುವನು. ತಾನು ಹಿಡಿದನೆಂದು ವೈರಿಯು ಹರ್ಷಿಸುವನು. ಅಧ್ಯಾಯವನ್ನು ನೋಡಿ |