Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:2 - ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರೇ, ನಾನು ಎಷ್ಟು ಕಾಲ ಸಹಾಯಕ್ಕಾಗಿ ಮೊರೆಯಿಡಬೇಕು. ನೀವು ನನ್ನ ಮೊರೆಗೆ ಎಷ್ಟು ಕಾಲ ಕಿವಿಗೊಡದಿರುವಿರಿ. “ಹಿಂಸೆಯಾಗುತ್ತಿದೆ,” ಎಂದು ಕೂಗುತ್ತಿದ್ದೇನೆ, ಆದರೂ ನೀವು ರಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಿಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನೆಷ್ಟು ಕಾಲ ಸರ್ವೇಶ್ವರಾ, ಮೊರೆ ಇಡುತ್ತಿರಬೇಕು ನಿನಗೆ? ನೀನೆಷ್ಟು ಕಾಲ ಸುಮ್ಮನಿರುವೆ ಕಿವಿಗೊಡದೆ ನನಗೆ? ಹಿಂಸೆಯಾಗುತ್ತಿದೆಯೆಂದು ನಾ ಕೂಗಿದೆ; ಆದರೂ ನೀ ಸುಮ್ಮನಿರುವೆ, ರಕ್ಷಣೆ ನೀಡದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನೇ, ನಾನು ಮೊರೆಯಿಡುತ್ತಿದ್ದರೂ ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೆ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನೇ, ನಾನು ನಿನ್ನಿಂದ ಸಹಾಯವನ್ನು ಕೇಳುತ್ತಲೇ ಇದ್ದೇನೆ. ನನ್ನ ಮೊರೆಯನ್ನು ಯಾವಾಗ ಕೇಳುವೆ? ನಾನು ಹಿಂಸೆಯ ವಿಷಯವಾಗಿ ನಿನ್ನನ್ನು ಕೂಗಿದರೂ ನೀನು ಏನೂ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:2
10 ತಿಳಿವುಗಳ ಹೋಲಿಕೆ  

ನಾನು ಕರೆದು ಕೂಗಿದರೂ ಅವರು ನನ್ನ ಪ್ರಾರ್ಥನೆಯನ್ನು ಲಾಲಿಸುವುದಿಲ್ಲ.


ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವ ದೇವರೇ, ನೀವು ನಮ್ಮ ಮಧ್ಯದಲ್ಲಿರುತ್ತೀರಿ, ನಾವು ನಿಮ್ಮ ಹೆಸರನ್ನು ಹೊಂದಿದ್ದೇವೆ, ನಮ್ಮನ್ನು ಕೈಬಿಡಬೇಡಿರಿ.


ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


ಯೆಹೋವ ದೇವರೇ, ಎಲ್ಲಿಯವರೆಗೆ? ದುಷ್ಟರು ಎಷ್ಟರವರೆಗೆ ಹಿಗ್ಗುತ್ತಿರಬೇಕು?


“ ‘ಹಿಂಸೆ,’ ಎಂದು ನಾನು ಕೂಗಿಕೊಂಡರೂ ನನಗೆ ಉತ್ತರ ಕೊಡುವವರಿಲ್ಲ; ಗಟ್ಟಿಯಾಗಿ ಮೊರೆಯಿಟ್ಟರೂ ನ್ಯಾಯ ದೊರಕುವುದಿಲ್ಲ.


ಆಗ ಯೆಹೋವ ದೇವರ ದೂತನು ಉತ್ತರಕೊಟ್ಟು: “ಸರ್ವಶಕ್ತರಾದ ಯೆಹೋವ ದೇವರೇ, ನೀವು ಯೆರೂಸಲೇಮನ್ನೂ, ಯೆಹೂದದ ಪಟ್ಟಣಗಳನ್ನೂ ಎಷ್ಟರವರೆಗೆ ಕನಿಕರಿಸದೆ ಇರುವಿರಿ? ಅವುಗಳ ಮೇಲೆ ಈ ಎಪ್ಪತ್ತು ವರ್ಷಗಳು ಸಿಟ್ಟು ಮಾಡಿದ್ದೀರಲ್ಲವೋ?” ಎಂದನು.


ನೀವು ಪರಿಶುದ್ಧರು; ನೀವು ಇಸ್ರಾಯೇಲರ ಸ್ತೋತ್ರ ಸಿಂಹಾಸನದಲ್ಲಿರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು