Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:6 - ಕನ್ನಡ ಸಮಕಾಲಿಕ ಅನುವಾದ

6 ನಾನು ಬಾಬಿಲೋನಿಯರನ್ನು ಎಬ್ಬಿಸುತ್ತೇನೆ. ಅವರು ಉಗ್ರ ಮತ್ತು ಸಾಹಸಿ ಜನರು. ತಮ್ಮದಲ್ಲದ ನಿವಾಸಗಳನ್ನು ವಶಮಾಡಿಕೊಳ್ಳುವುದಕ್ಕೆ ವಿಶಾಲವಾದ ದೇಶದಲ್ಲಿ ಹಾದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಗೋ, ಬಾಬಿಲೋನಿನವರನ್ನು ಹುರಿದುಂಬಿಸಲಿದ್ದೇನೆ. ಅವರು ಭಯೋತ್ಪಾದಕರು ಹಾಗೂ ಉಗ್ರಗಾಮಿಗಳು. ಅವರು ಜಗದ ಉದ್ದಗಲಕ್ಕೂ ಹರಡಿ ತಮ್ಮದಲ್ಲದ ನಾಡುಗಳನ್ನು ಆಕ್ರಮಿಸಿಕೊಳ್ಳಲು ಸಂಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಗೋ, ತೀಕ್ಷ್ಣವೂ ತೀವ್ರವೂ ಆದ ಕಸ್ದೀಯ ಜನಾಂಗವನ್ನು ಎಬ್ಬಿಸುತ್ತಿದ್ದೇನೆ; ಆ ಜನರು ತಮ್ಮದಲ್ಲದ ಸಂಸ್ಥಾನಗಳನ್ನು ವಶಮಾಡಿಕೊಳ್ಳುವ ಹಾಗೆ ಲೋಕದಲ್ಲೆಲ್ಲಾ ಸಂಚರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:6
24 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಬಾಬಿಲೋನಿಯರನ್ನೂ, ಅರಾಮ್ಯರನ್ನೂ, ಮೋವಾಬ್ಯರನ್ನೂ, ಅಮ್ಮೋನಿಯರನ್ನೂ ಅವನ ಮೇಲೆ ಕಳುಹಿಸಿದನು. ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ, ಯೆಹೂದವನ್ನು ನಾಶಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.


ಯೆಹೋವ ದೇವರು ಹೀಗೆ ಹೇಳುತ್ತಾರೆ, “ಓ ಇಸ್ರಾಯೇಲ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆ. ಅದು ಬಲವಾದ ಜನಾಂಗವು. ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಕಸ್ದೀಯರ ದೇಶವು! ಅಸ್ಸೀರಿಯದವರು ಅದನ್ನು ಕಾಡುಮೃಗಗಳಿಗೆ ಈಡು ಮಾಡುವ ತನಕ ಈ ಜನರು ಇರಲಿಲ್ಲ. ಗೋಪುರಗಳನ್ನು ಕಟ್ಟಿಸಿಕೊಂಡು ಅವರು ಅದರ ಅರಮನೆಗಳನ್ನು ಕಟ್ಟಿಸಿಕೊಂಡು ಅದನ್ನು ನಾಶಮಾಡಿದ್ದಾರೆ.


‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬಿಲೋನಿನ ಅರಸನಿಗೂ, ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವುದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನೂ, ನಾನು ಹಿಂದಕ್ಕೆ ತಳ್ಳಿ, ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿಬರುವಂತೆ ಮಾಡುವೆನು.


ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ. ಯೆಹೋವ ದೇವರ ಉಗ್ರಕೋಪದ ಉರಿಯು ನಮ್ಮಿಂದ ಹಿಂದಿರುಗಲಿಲ್ಲ.


ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ವಿಳಂಬವಿಲ್ಲದೆ ಸುರಕ್ಷತೆಗಾಗಿ ಓಡಿಹೋಗಿರಿ. ಏಕೆಂದರೆ ನಾನು ಉತ್ತರದಿಂದ ಕೇಡನ್ನೂ, ದೊಡ್ಡ ನಾಶವನ್ನೂ ತರುತ್ತೇನೆ.”


ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬಿಲೋನಿಗೆ ಒಯ್ಯುವುದಕ್ಕಾಗಿ ಅವನಿಗೆ ಕಂಚಿನ ಸಂಕೋಲೆಗಳನ್ನು ಹಾಕಿಸಿದನು.


ಆ ಸಮಯದಲ್ಲಿ ಈ ಜನರಿಗೂ, ಯೆರೂಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು: “ಒಣ ಗಾಳಿಯು ಮರುಭೂಮಿಯ ಉನ್ನತ ಸ್ಥಳಗಳಿಂದ ನನ್ನ ಜನರ ಪುತ್ರಿಯರ ಕಡೆಗೆ ಬರುತ್ತದೆ. ಅದು ತೂರುವುದಕ್ಕೂ, ಶುದ್ಧಮಾಡುವುದಕ್ಕೂ ಆಗತಕ್ಕದ್ದಲ್ಲ.


ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು, ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡು ಎಲ್ಲಿ?


ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’


ಅವರು ನಿನಗೆ ವಿರುದ್ಧವಾಗಿ ಒಂದು ಗುಂಪನ್ನು ಕರೆದುಕೊಂಡು ಬಂದು, ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಖಡ್ಗಗಳಿಂದ ನಿನ್ನನ್ನು ತಿವಿಯುವರು.


ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರವಾದ ಬೆಂಕಿ ನಿನ್ನ ಮೇಲೆ ಊದಿ ನಾಶಪಡಿಸುವುದರಲ್ಲಿ ಗಟ್ಟಿಗರಾದ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು.


ಆದ್ದರಿಂದ ಭಯಂಕರ ಜನಾಂಗದವರಾದ ವಿದೇಶಿಯರನ್ನು ನಾನು ನಿನ್ನ ಮೇಲೆ ಬೀಳಮಾಡುವೆನು. ಅವರು ನಿನ್ನ ಸೌಂದರ್ಯ ಮತ್ತು ಜ್ಞಾನದ ವಿರುದ್ಧವಾಗಿ ಖಡ್ಗವನ್ನು ಹಿರಿಯುವರು; ನಿನ್ನ ಹೊಳೆಯುವ ವೈಭವವನ್ನು ಕೆಡಿಸುವರು.


ಜನಾಂಗಗಳಲ್ಲಿ ಭಯಂಕರವಾದ ವಿದೇಶಿಯರು ಅದನ್ನು ಕಡಿದುಹಾಕುವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅದರ ಕೊಂಬೆಗಳು ಬೀಳುವುವು. ದೇಶದ ಹಳ್ಳಗಳಲ್ಲೆಲ್ಲಾ ಅದರ ರೆಂಬೆಗಳು ಮುರಿದು ಹೋಗುವುವು. ಭೂಮಿಯ ಜನಗಳೆಲ್ಲಾ ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಡುವರು.


ಯೆಹೋಯಾಕೀಮನ ಆಳಿಕೆಯಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶವನ್ನು ದಾಳಿಮಾಡಿದನು. ಯೆಹೋಯಾಕೀಮನು ಮೂರು ವರ್ಷ ಅವನ ಸೇವಕನಾಗಿದ್ದು, ತರುವಾಯ ಅವನ ಮೇಲೆ ತಿರುಗಿಬಿದ್ದನು.


“ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾವು ನಡುಗುವಿಕೆಯ ಮತ್ತು ಭಯದ ಧ್ವನಿಯನ್ನು ಕೇಳಿದ್ದೇವೆಯೇ ಹೊರತು, ಸಮಾಧಾನದ್ದಲ್ಲ.


ಅವುಗಳ ಮುಂದೆ ಬೆಂಕಿ ದಹಿಸುತ್ತದೆ. ಅವುಗಳ ಹಿಂದೆ ಜ್ವಾಲೆ ಧಗಧಗಿಸುತ್ತದೆ. ಅವುಗಳ ಮುಂದೆ ದೇಶವು ಏದೆನ್ ತೋಟದ ಹಾಗಿದೆ. ಅವುಗಳ ಹಿಂದೆ ಕಾಡು ಹಾಳಾಗಿದೆ. ಯಾವುದೂ ಅವುಗಳಿಂದ ತಪ್ಪಿಸಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು