ಹಬಕ್ಕೂಕ 1:8 - ಕನ್ನಡ ಸಮಕಾಲಿಕ ಅನುವಾದ8 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿಯೂ, ಸಂಜೆಯ ತೋಳಗಳಿಗಿಂತ ಚುರುಕಾಗಿಯೂ ಇವೆ. ಅವರ ಅಶ್ವಸೈನ್ಯ ಎರಗುವುದು. ಅವರ ಕುದುರೆ ಸವಾರರು ದೂರದಿಂದ ಬರುವರು; ನುಂಗುವುದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿ ಬರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಅವರ ಕುದುರೆಗಳು ಚಿರತೆಗಳಿಗಿಂತ ಬಿರುಸು; ಹಸಿದ ತೋಳಗಳಿಗಿಂತ ಚುರುಕು. ಅವರ ರಾಹುತರು ರಭಸದಿಂದ ಹಾರಿಬರುವರು. ಬೇಟೆಯನ್ನು ಕಬಳಿಸಲು ಕಾತರದಿಂದ ಹಾರುವ ರಣಹದ್ದಿನಂತೆ ದೂರದಿಂದ ಧಾವಿಸಿಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅವರ ಸವಾರರು ಕುದುರೆಗಳನ್ನು ಕುಣಿದಾಡಿಸುವರು; ದೂರದಿಂದ ಹತ್ತಿಕೊಂಡು ಬರುವರು; ಕೊಳ್ಳೆಗೆ ಆತುರಪಡುವ ಹದ್ದಿನಂತೆ ಹಾರಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ; ಸೂರ್ಯಸ್ತಮಾನ ಕಾಲದಲ್ಲಿ ತೋಳಗಳಿಗಿಂತ ಭಯಂಕರವಾಗಿವೆ. ಅವರ ರಾಹುತರು ಬಹುದೂರ ದೇಶದಿಂದ ಬಂದರು. ಹಸಿದ ಗಿಡುಗ ಹೇಗೆ ಆಕಾಶದಿಂದ ನೆಲದ ಮೇಲಿರುವ ಆಹಾರದ ಮೇಲೆ ಬೀಳುತ್ತದೋ ಅದೇ ರೀತಿಯಲ್ಲಿ ಅವರ ರಾಹುತರು ವೈರಿಗಳ ಮೇಲೆ ಬೀಳುವರು. ಅಧ್ಯಾಯವನ್ನು ನೋಡಿ |