Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:11 - ಕನ್ನಡ ಸಮಕಾಲಿಕ ಅನುವಾದ

11 ಗೋಡೆಯೊಳಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಗೋಡೆಯೊಳಗಿಂದ ಕಲ್ಲುಗಳು ನಿನ್ನ ಮೇಲೆ ತಪ್ಪುಹೊರಿಸಿ ಕೂಗುವವು; ಚಾವಣಿಯ ತೊಲೆಗಳು ಸಹ ಅದಕ್ಕೆ ಮಾರ್ದನಿ ಕೊಡುತ್ತವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಗೋಡೆಯಲ್ಲಿ ಇರುವ ಕಲ್ಲುಗಳೇ ನಿನಗೆ ವಿರುದ್ಧವಾಗಿ ಕೂಗುವುವು. ಚಾವಣಿಯ ತೊಲೆಗಳು ಸಹ ಅದಕ್ಕೆ ಮಾರ್ದನಿ ಕೂಡಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಗೋಡೆಯೊಳಗಿಂದ ಕಲ್ಲು [ನಿನ್ನ ಮೇಲೆ ತಪ್ಪುಹೊರಿಸಿ] ಕೂಗುವದು; [ಚಾವಣಿಯ] ಮರಗಳೊಳಗಿಂದ ತೊಲೆಯು ಹೌದೆನ್ನುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಗೋಡೆಯ ಕಲ್ಲುಗಳು ನಿನಗೆ ವಿರುದ್ಧವಾಗಿ ಕೂಗುವವು. ನಿನ್ನ ಮನೆಯ ಮರದ ಜಂತೆಗಳು ಸಹ ನೀನು ಅಪರಾಧಿಯೆಂದು ಸಾಕ್ಷಿ ಹೇಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:11
8 ತಿಳಿವುಗಳ ಹೋಲಿಕೆ  

ಆಗ ಯೇಸು ಅವರಿಗೆ, “ಇವರು ಸುಮ್ಮನಾದರೆ, ಈ ಕಲ್ಲುಗಳು ಕೂಗುವವು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಯೆಹೋಶುವನು ಜನರಿಗೆ, “ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಏಕೆಂದರೆ ಇದು ಯೆಹೋವ ದೇವರು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿದೆ. ಆದ್ದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ,” ಎಂದು ಹೇಳಿದನು.


ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.


ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ, ಪ್ರೋಕ್ಷಿಸಿದ ರಕ್ತದ ಬಳಿಗೂ ಬಂದಿದ್ದೀರಿ.


ಅವರ ಹೃದಯವು ಕರ್ತದೇವರ ಕಡೆಗೆ ಕೂಗಿ, ಚೀಯೋನಿನ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನಿನಗೆ ವಿಶ್ರಾಂತಿ ಬೇಡ, ನಿನ್ನ ಕಣ್ಣ ರೆಪ್ಪೆಯನ್ನು ಮುಚ್ಚಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು