Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:13 - ಕನ್ನಡ ಸಮಕಾಲಿಕ ಅನುವಾದ

13 ಜನರ ಶ್ರಮೆಯು ಬೆಂಕಿಗೆ ತುತ್ತಾಗುವುದು. ಜನಾಂಗಗಳು ವ್ಯರ್ಥವಾಗಿ ದಣಿದುಕೊಳ್ಳುತ್ತವೆ. ಇದು ಸೇನಾಧೀಶ್ವರ ಯೆಹೋವ ದೇವರ ಚಿತ್ತವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು, ಈ ರೀತಿಯಾಗಿ ಜನರು ಪಟ್ಟ ಪರಿಶ್ರಮವು ವ್ಯರ್ಥವಾಗುವುದು ಎಂದು ಯೆಹೋವನು ನುಡಿದ್ದರಿಂದಲೇ ಅಲ್ಲವೇ; ಇದೆಲ್ಲ ಸೇನಾಧೀಶ್ವರನ ಚಿತ್ತವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಜನಗಳು ದುಡಿದದ್ದು ಬೆಂಕಿಗೆ ತುತ್ತಾಗುವದು, ಜನಾಂಗಗಳು ಪಟ್ಟ ಪರಿಶ್ರಮವು ವ್ಯರ್ಥವಾಗುವದು, ಆಹಾ, ಇದೆಲ್ಲಾ ಸೇನಾಧೀಶ್ವರನಾದ ಯೆಹೋವನಿಂದಲೇ ಸಂಭವಿಸುವದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ಜನರು ಕಟ್ಟುವ ಪ್ರತಿಯೊಂದನ್ನೂ ಸರ್ವಶಕ್ತನಾದ ಯೆಹೋವನು ಬೆಂಕಿಯಿಂದ ನಾಶಮಾಡುವ ತೀರ್ಮಾನವನ್ನು ಮಾಡಿರುತ್ತಾನೆ. ಅವರು ಮಾಡಿದ ಕೆಲಸವೆಲ್ಲವೂ ವ್ಯರ್ಥವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:13
12 ತಿಳಿವುಗಳ ಹೋಲಿಕೆ  

ಮಾತ್ರವಲ್ಲದೆ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಬಾಬಿಲೋನಿನ ಅಗಲವಾದ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅವಳ ಎತ್ತರವಾದ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗುವುವು; ಜನರು ವ್ಯರ್ಥಕ್ಕಾಗಿಯೂ, ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸಪಡುವರು.”


ಕಿಡಿಗಳಿಂದ ಆವರಿಸಿಕೊಳ್ಳುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಕೈಯಿಂದ ನಿಮಗಾಗುವುದು ಇದೇ. ನೀವು ಯಾತನೆಯಲ್ಲಿ ಬಿದ್ದುಕೊಂಡಿರುವಿರಿ.


ಎದೋಮ್ಯರು, “ನಾವು ಬಡಕಲಾದೆವು, ಆದರೆ ನಾವು ಮತ್ತೆ ಹಾಳಾದ ಸ್ಥಳಗಳನ್ನು ಕಟ್ಟುವೆವು,” ಎಂದು ಹೇಳಬಹುದು. ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು. ಜನರು ಅವರನ್ನು ದುಷ್ಟತನದ ನಾಡೆಂದೂ, ಯೆಹೋವ ದೇವರು ಎಂದೆಂದಿಗೂ ಸಿಟ್ಟು ಮಾಡುವ ಜನವೆಂದೂ ಕರೆಯುವರು.


ಆಹಾರವಲ್ಲದಕ್ಕೆ ಹಣವನ್ನು ವ್ಯರ್ಥ ಮಾಡುವುದು ಏಕೆ? ತೃಪ್ತಿಪಡಿಸದವುಗಳಿಗೆ ನಿಮ್ಮ ದುಡಿತವನ್ನು ವೆಚ್ಚಮಾಡುವುದು ಏಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯದನ್ನು ನೀವು ಉಣ್ಣಿರಿ. ನೀವು ಮೃಷ್ಟಾನ್ನದಲ್ಲಿ ಆನಂದಿಸಿ!


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


“ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು.


ಹೀಗೆ ಹೇಳು, ‘ಈ ಪ್ರಕಾರ ಬಾಬಿಲೋನ್ ಮುಳುಗಿ ಹೋಗುವುದು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು. ಅವರು ಬೀಳುವರು.’ ” ಇಲ್ಲಿಯ ತನಕ ಯೆರೆಮೀಯನ ವಾಕ್ಯಗಳು.


ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು