ಹಬಕ್ಕೂಕ 2:17 - ಕನ್ನಡ ಸಮಕಾಲಿಕ ಅನುವಾದ17 ಲೆಬನೋನಿನ ಮೇಲೆ ಮಾಡಿದ ಬಲಾತ್ಕಾರವು ನಿನ್ನನ್ನು ಚಕಿತಗೊಳಿಸುವುದು. ಮೃಗಗಳ ನಾಶವು ನಿನ್ನನ್ನು ಹೆದರಿಸುವುದು. ಏಕೆಂದರೆ ನೀನು ಮನುಷ್ಯರ ರಕ್ತ ಸುರಿಸಿದ್ದೀ; ನೀನು ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿರುವ ಎಲ್ಲವುಗಳನ್ನು ನಾಶಮಾಡಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನೀನು ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಲೆಬನೋನ್ ಅರಣ್ಯಗಳನ್ನೂ ಕಡಿದುಹಾಕಿರುವೆ. ಈಗ ನಿನ್ನನ್ನೇ ಕಡಿದುಹಾಕಲಾಗುವುದು. ಅದರ ಪ್ರಾಣಿಪಕ್ಷಿಗಳನ್ನು ನಾಶಮಾಡಿರುವೆ. ಈಗ ಅವು ನಿನಗೆ ಭಯಾನಕವಾಗಿರುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಲೆಬನೋನಿಗೆ ಆದಂಥ ಹಿಂಸೆಗೆ ನೀನೂ ಒಳಗಾಗುವಿ, ಮೃಗಪಶುಗಳ ನಾಶನವು ನಿನ್ನನ್ನೂ ಹೆದರಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಲೆಬನೋನಿನಲ್ಲಿ ಅನೇಕರನ್ನು ಗಾಯಗೊಳಿಸಿರುವೆ. ಅಲ್ಲಿ ಎಷ್ಟೋ ಪಶುಗಳನ್ನು ಅಪಹರಿಸಿರುವೆ. ಆ ದೇಶದಲ್ಲಿ ನೀನು ಮಾಡಿದ ದುಷ್ಕೃತ್ಯಗಳ ನಿಮಿತ್ತ, ಅದರಿಂದಾಗಿ ಅಲ್ಲಿ ಸತ್ತುಹೋದವರ ನಿಮಿತ್ತ ನೀನು ಭಯಗ್ರಸ್ತನಾಗಿರುವೆ. ಅಲ್ಲಿಯ ಪಟ್ಟಣಗಳಿಗೆ ನೀನು ಮಾಡಿದ ಹಾನಿ, ಜನರಿಗೆ ನೀನು ಕೊಟ್ಟ ಸಂಕಟದ ನಿಮಿತ್ತ ನಿನಗೆ ಹೆದರಿಕೆಯುಂಟಾಗಿದೆ.” ಅಧ್ಯಾಯವನ್ನು ನೋಡಿ |