Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರು ನನಗೆ ಉತ್ತರಕೊಟ್ಟರು. ಪ್ರಕಟನೆಯನ್ನು ಬರೆ. ಅದನ್ನು ಓದುವವನು ಶೀಘ್ರವಾಗಿ ಓದುವಂತೆ, ಅದನ್ನು ಹಲಗೆಗಳ ಮೇಲೆ ಕೆತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು, “ನಿನಗಾದ ದರ್ಶನವನ್ನು ಬರೆದಿಡು; ಓದುವವರು ಸುಲಭವಾಗಿ ಶೀಘ್ರವಾಗಿ ಓದಲು ಅನುಕೂಲವಾಗುವಂತೆ ಹಲಿಗೆಗಳ ಮೇಲೆ ಅದನ್ನು ಕೆತ್ತಿಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಸರ್ವೇಶ್ವರ ನನಗೆ ಕೊಟ್ಟ ಉತ್ತರ ಇದು: “ನೀನು ಕಂಡ ದರ್ಶನವನ್ನು ಬರೆ. ಓದುವವನು ಶೀಘ್ರವಾಗಿ ಓದುವಂತೆ ಹಲಗೆಗಳ ಮೇಲೆ ಅದನ್ನು ಕೆತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು - ನಿನಗಾದ ದರ್ಶನವನ್ನು ಬರೆ; ಓದುವವರು ಶೀಘ್ರವಾಗಿ ಓದುವಂತೆ ಹಲಿಗೆಗಳ ಮೇಲೆ ಅದನ್ನು ಕೆತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ನನಗೆ ಹೇಳಿದ್ದು: “ನಾನು ನಿನಗೆ ತೋರಿಸುವದನ್ನು ಬರೆ. ಜನರು ಸುಲಭವಾಗಿ ಓದುವಂತೆ ಅದನ್ನು ದೊಡ್ಡ ಹಲಗೆಗಳ ಮೇಲೆ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:2
18 ತಿಳಿವುಗಳ ಹೋಲಿಕೆ  

ಈಗ ಹೋಗಿ ಇದನ್ನು ಅದರ ಮುಂದೆ ಹಲಗೆಯಲ್ಲಿ ಬರೆ. ಅದನ್ನು ಸುರುಳಿಯಲ್ಲಿ ಬರೆಯಿರಿ, ಮುಂದೆ ಬರುವ ನಿತ್ಯಕಾಲಕ್ಕಾಗಿ ಶಾಶ್ವತ ಸಾಕ್ಷಿಯಾಗಿರಲಿ.


ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ.


ಆದ್ದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲರಿಗೆ ಕಲಿಸಿದನು.


ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.


ಯೆಹೋವ ದೇವರು, “ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಸಾಮಾನ್ಯ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್, ಎಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ ಎಂದು ಬರೆ,” ಎಂಬುದಾಗಿ ನನಗೆ ಹೇಳಿದರು.


ನೀವು ಆ ಕಲ್ಲುಗಳ ಮೇಲೆ ಈ ನಿಯಮದ ವಾಕ್ಯಗಳನ್ನೆಲ್ಲಾ ಬಹುಸ್ಪಷ್ಟವಾಗಿ ಬರೆಸಬೇಕು,” ಎಂದು ಆಜ್ಞಾಪಿಸಿದರು.


“ಹೀಗಿರುವುದರಿಂದ ಈಗ ಈ ಹಾಡನ್ನು ಬರೆದುಕೊಳ್ಳಿರಿ. ಇಸ್ರಾಯೇಲರಲ್ಲಿ ಈ ಹಾಡು ನನಗೆ ಸಾಕ್ಷಿಯಾಗಿರುವ ಹಾಗೆ ಅದನ್ನು ಅವರಿಗೆ ಬಾಯಿಪಾಠ ಮಾಡಿಸು.


ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು.


ಇಂಥಾ ನಿರೀಕ್ಷೆಯು ನಮಗಿರುವುದರಿಂದ ನಾವು ಬಹಳ ಧೈರ್ಯಶಾಲಿಗಳಾಗಿದ್ದೇವೆ.


ಆದರೂ ಸಭೆಯಲ್ಲಿ ಅನ್ಯಭಾಷೆಗಳಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ, ಇತರರಿಗೆ ಉಪದೇಶ ಮಾಡುವುದನ್ನೇ ನಾನು ಇಷ್ಟಪಡುತ್ತೇನೆ.


ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.


“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ನೀನು ಬರೆದಿಡು.


ಬಾಬಿಲೋನಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಕನಸನ್ನೂ, ದರ್ಶನಗಳನ್ನೂ ಕಂಡು, ತನ್ನ ಕನಸಿನ ತಾತ್ಪರ್ಯವನ್ನು ಬರೆದಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು