ಹಬಕ್ಕೂಕ 2:3 - ಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. ಅದು ಅಂತ್ಯದ ಬಗ್ಗೆ ಮಾತಾಡುವುದು. ಅದು ಸುಳ್ಳಾಗದು. ಅದು ತಡವಾದರೂ, ಅದಕ್ಕೆ ಕಾದುಕೊಂಡಿರು. ಏಕೆಂದರೆ ಅದು ತಡಮಾಡದೆ ನಿಶ್ಚಯವಾಗಿ ಬರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ. ಅಧ್ಯಾಯವನ್ನು ನೋಡಿ |
“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.