Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 3:14 - ಕನ್ನಡ ಸಮಕಾಲಿಕ ಅನುವಾದ

14 ನಮ್ಮನ್ನು ಚದುರಿಸಲು ಅವನ ಯುದ್ಧವೀರರು ಮುತ್ತಿಗೆ ಹಾಕಿದಾಗ, ಅವನ ಸ್ವಂತ ಭರ್ಜಿಯಿಂದಲೇ ಅವನ ತಲೆಯನ್ನು ತಿವಿದಿ. ಅವರು ಅಡಗಿಕೊಂಡಿರುವ ಬಡವರನ್ನು ನುಂಗಲು ಬಂದವರೋ ಎಂಬಂತೆ ಬಂದಿದ್ದರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದುರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು ಅವನ ದೊಣ್ಣೆಗಳಿಂದಲೇ ಒಡೆದಿದ್ದೀ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೀನರನು ಗುಟ್ಟಾಗಿ ದಮನಮಾಡಿ ಹಿಗ್ಗುವವರಂತೆ ನನ್ನ ಚದರಿಸಲು ಬಂದರು ಅವನ ಭಟರು ಬಿರುಗಾಳಿಯಂತೆ ಅವನ ಆಯುಧಗಳಿಂದಲೆ ಅವರ ತಲೆಯನು ನೀ ಬಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು ಅವನ ದೊಣ್ಣೆಗಳಿಂದಲೇ ಒಡೆದಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ವೈರಿಗಳ ಸೈನ್ಯವನ್ನು ಮೋಶೆಯ ಕೋಲಿನಿಂದ ನಿಲ್ಲಿಸಿದೆ. ಆ ಸೈನಿಕರು ಬಿರುಗಾಳಿಯಂತೆ ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ರಸ್ತೆಯ ಮೇಲೆ ಇದ್ದ ಒಬ್ಬ ಬಡ ಮನುಷ್ಯನನ್ನು ದೋಚಿದ ಪ್ರಕಾರ ನಮ್ಮನ್ನೂ ಸುಲಭವಾಗಿ ಗೆಲ್ಲುವೆವೆಂದು ಅವರು ನೆನೆಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 3:14
18 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋವ ದೇವರು ಅವರ ಮೇಲೆ ಕಾಣಿಸಿಕೊಳ್ಳುವರು. ಆತನ ಬಾಣಗಳು ಮಿಂಚಿನ ಹಾಗೆ ಹೊರಡುವುವು. ಸಾರ್ವಭೌಮ ಯೆಹೋವ ದೇವರು ತುತೂರಿಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗುವರು.


ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂದಿಗೂ, ಸವಾರರೊಂದಿಗೂ, ಅನೇಕ ಹಡಗುಗಳೊಂದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದುಹೋಗುವನು.


ಅವನು ಗ್ರಾಮಗಳಲ್ಲಿ ಹೊಂಚಿಕೊಂಡು ಮರೆಯಾದ ಸ್ಥಳಗಳಲ್ಲಿ, ನಿರಪರಾಧಿಯನ್ನು ಕೊಲ್ಲುತ್ತಾನೆ. ಅವನ ಕಣ್ಣುಗಳು ನಿರ್ಗತಿಕರನ್ನು ಹೊಂಚಿ ನೋಡುತ್ತವೆ;


ಏಕೆಂದರೆ ಇಗೋ, ನಿಮ್ಮ ಶತ್ರುಗಳು ಘೋಷಿಸುತ್ತಾರೆ. ನಿಮ್ಮ ವೈರಿಗಳು ತಲೆ ಎತ್ತುತ್ತಾರೆ.


ಮುನ್ನೂರು ಜನರು ತುತೂರಿಗಳನ್ನು ಊದುವಾಗ, ಯೆಹೋವ ದೇವರು ಪಾಳೆಯದಲ್ಲಿ ಎಲ್ಲೆಲ್ಲಿಯೂ ಒಬ್ಬನ ಖಡ್ಗವನ್ನು ಒಬ್ಬನ ಮೇಲೆ ಬರಮಾಡಿದರು. ಪಾಳೆಯ ಚೆರೇರಿನಲ್ಲಿರುವ ಬೇತ್ ಷಿಟ್ಟದವರೆಗೂ, ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾದ ಮೇರೆಯವರೆಗೂ ಓಡಿಹೋಯಿತು.


ಆದರೆ ಫರೋಹನು ತನ್ನ ಎಲ್ಲಾ ಜನರಿಗೆ, “ಹುಟ್ಟುವ ಹಿಬ್ರಿಯರ ಗಂಡು ಮಕ್ಕಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಮಕ್ಕಳನ್ನೆಲ್ಲಾ ಬದುಕಿಸಬೇಕು,” ಎಂದು ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು