ಹಬಕ್ಕೂಕ 3:17 - ಕನ್ನಡ ಸಮಕಾಲಿಕ ಅನುವಾದ17 ಅಂಜೂರದ ಗಿಡವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗಳು ಆಹಾರ ಕೊಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಂಜೂರದ ಮರ ಚಿಗುರದೆಹೋದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಕಾಣದೆಹೋದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರ ಕೊಡದೆಹೋದರೂ ಕುರಿಹಟ್ಟಿಗಳು ಬರಿದಾಗಿಹೋದರೂ ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಹಾ, ಅಂಜೂರವು ಚಿಗುರದಿದ್ದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರವನ್ನು ಕೊಡದೆಹೋದರೂ ಹಿಂಡು ಹಟ್ಟಿಯೊಳಗಿಂದ ನಾಶವಾದರೂ ಮಂದೆಯು ಕೊಟ್ಟಿಗೆಗಳೊಳಗೆ ಇಲ್ಲದಿದ್ದರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಂಜೂರದ ಮರಗಳಲ್ಲಿ ಅಂಜೂರದ ಹಣ್ಣು ಬೆಳೆಯದಿದ್ದರೂ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳು ಬೆಳೆಯದಿದ್ದರೂ ಎಣ್ಣೆಮರಗಳಲ್ಲಿ ಆಲೀವ್ ಕಾಯಿಗಳು ಬೆಳೆಯದಿದ್ದರೂ ಹೊಲದಲ್ಲಿ ಪೈರು ಬೆಳೆಯದಿದ್ದರೂ ಹಟ್ಟಿಯಲ್ಲಿ ಯಾವ ಕುರಿಗಳು ಇಲ್ಲದಿದ್ದರೂ ಕೊಟ್ಟಿಗೆಯೊಳಗೆ ಯಾವ ಪಶುಗಳು ಇಲ್ಲದಿದ್ದರೂ ಅಧ್ಯಾಯವನ್ನು ನೋಡಿ |