Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 1:4 - ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೋವ ದೇವರು ಹೋಶೇಯನಿಗೆ, “ಈ ಮಗುವಿಗೆ ಇಜ್ರೆಯೇಲ್ ಎಂದು ಹೆಸರಿಡು. ಏಕೆಂದರೆ ಶೀಘ್ರದಲ್ಲಿಯೇ ನಾನು ಇಜ್ರೆಯೇಲ್ ಕಣಿವೆಯಲ್ಲಿ ರಕ್ತವನ್ನು ಸುರಿಸಿದ ಯೇಹುವಿನ ಮನೆತನದವರ ಮೇಲೆ ಮುಯ್ಯಿತೀರಿಸಿಕೊಳ್ಳುವೆನು. ಇಸ್ರಾಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಅವನನ್ನು ಕುರಿತು, “ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹು ವಂಶದವರಿಗೆ ಮುಯ್ಯಿ ತೀರಿಸಿ ಇಸ್ರಾಯೇಲ್ ಜನಾಂಗವನ್ನು ನಿರ್ನಾಮ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಸರ್ವೇಶ್ವರ, ಹೊಶೇಯನಿಗೆ, “ಈ ಮಗುವಿಗೆ ಜೆಸ್ರೀಲ್ ಎಂದು ಹೆಸರಿಡು. ಏಕೆಂದರೆ, ಇಸ್ರಯೇಲ್‍ನಲ್ಲಿ ಹರಿಸಿದ ರಕ್ತಪಾತಕ್ಕೆ ಪ್ರತಿಯಾಗಿ ಸ್ವಲ್ಪಕಾಲದಲ್ಲೆ ಯೇಹುವಿನ ಮನೆತನವನ್ನು ದಂಡಿಸುವೆನು; ಇಸ್ರಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಅವನನ್ನು ಕುರಿತು - ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹುವಂಶದವರಿಗೆ ಮುಯ್ಯಿತೀರಿಸಿ ಇಸ್ರಾಯೇಲ್‍ಜನಾಂಗವನ್ನು ನಿರ್ನಾಮಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹೋಶೇಯನಿಗೆ ಯೆಹೋವನು ಹೇಳಿದ್ದೇನೆಂದರೆ, “ಅವನಿಗೆ ಇಜ್ರೇಲ್ ಎಂದು ಹೆಸರನ್ನಿಡು. ಯಾಕೆಂದರೆ, ಇನ್ನು ಸ್ವಲ್ಪ ಸಮಯದಲ್ಲಿ ನಾನು ಯೇಹುವಿನ ಸಂತತಿಯವರನ್ನು ಶಿಕ್ಷಿಸುವೆನು. ಅವನು ಇಜ್ರೇಲ್ ತಗ್ಗಿನಲ್ಲಿ ರಕ್ತವನ್ನು ಸುರಿಸಿರುತ್ತಾನಲ್ಲಾ? ಆ ಮೇಲೆ ನಾನು ಇಸ್ರೇಲ್ ರಾಜ್ಯಕ್ಕೆ ಅಂತ್ಯವನ್ನು ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 1:4
32 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು, “ ‘ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ. ಏಕೆಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವುದಿಲ್ಲ,’ ಎಂದು ಹೇಳಿದರು.


ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವನ್ನು ಹೆತ್ತಳು. ಆಗ ಯೆಹೋವ ದೇವರು ಹೋಶೇಯನಿಗೆ, “ಅವಳನ್ನು ‘ಲೋರುಹಾಮಾ’ ಎಂಬ ಹೆಸರಿನಿಂದ ಕರೆ. ಏಕೆಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನದವರಿಗೆ ಪ್ರೀತಿ ತೋರಿಸುವುದೇ ಇಲ್ಲ, ಅವರನ್ನು ಯಾವ ರೀತಿಯೂ ಕ್ಷಮಿಸುವದಿಲ್ಲ.


ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ.


ಅವರು ಅವಳ ಬೆತ್ತಲೆತನವನ್ನು ಬಯಲುಪಡಿಸಿದರು ಮತ್ತು ಅವಳ ಪುತ್ರರನ್ನೂ, ಅವಳ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.


ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು.


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.


ಯೇಹುವು ಸಮಾರ್ಯಕ್ಕೆ ಬಂದ ತರುವಾಯ ಸಮಾರ್ಯದಲ್ಲಿ ಅಹಾಬನಿಗೆ ಉಳಿದವರೆಲ್ಲರನ್ನು ಎಲೀಯನಿಗೆ ಹೇಳಿದ ಯೆಹೋವ ದೇವರ ವಾಕ್ಯದ ಪ್ರಕಾರ ಅವರನ್ನು ಸಂಹರಿಸಿದನು.


ಅವನನ್ನು ಯೇಸುವಿನ ಬಳಿಗೆ ಕರೆತಂದನು. “ಮೆಸ್ಸೀಯ” ಎಂದರೆ ಕ್ರಿಸ್ತ ಎಂದು ಅರ್ಥ. ಯೇಸು ಅವನನ್ನು ನೋಡಿ, “ನೀನು ಯೋಹಾನನ ಮಗ ಸೀಮೋನನು. ನಿನ್ನನ್ನು ‘ಕೇಫ’ ಎಂದು ಕರೆಯುವರು,” ಎಂದು ಹೇಳಿದರು. “ಕೇಫ” ಎಂದರೆ ಪೇತ್ರ ಇಲ್ಲವೆ ಬಂಡೆ ಎಂದರ್ಥ.


ಆಗ ಜಕರೀಯನು ಒಂದು ಬರೆಯುವ ಹಲಗೆಯನ್ನು ಕೇಳಿ, “ಶಿಶುವಿನ ಹೆಸರು ಯೋಹಾನ,” ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.


ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’ ಎಂದು ಹೆಸರಿಡಬೇಕು.


ಆದರೆ ದೂತನು ಅವನಿಗೆ, “ಜಕರೀಯನೇ; ಭಯಪಡಬೇಡ, ದೇವರು ನಿನ್ನ ವಿಜ್ಞಾಪನೆಯನ್ನು ಕೇಳಿದ್ದಾರೆ. ನಿನ್ನ ಹೆಂಡತಿ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು, ನೀನು ಅವನಿಗೆ, ‘ಯೋಹಾನ’ ಎಂದು ಹೆಸರನ್ನಿಡಬೇಕು.


ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.


ನನ್ನ ದೇವರು ಅವರನ್ನು ತಳ್ಳಿಬಿಡುವರು. ಏಕೆಂದರೆ ಅವರು ಆತನಿಗೆ ವಿಧೇಯರಾಗಲಿಲ್ಲ. ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.


ಭೂಮಿಯು ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೇಳುವುವು. ಅವು ಇಜ್ರೆಯೇಲಿಗೆ ಒಲಿಯುವುವು.


ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಅವಳ ಪ್ರೇಮಿಗಳ ಹಿಂದೆ ಹೋಗಿ, ಬಾಳ್ ದೇವತೆಗಳಿಗೆ ಧೂಪ ಸುಟ್ಟ ದಿವಸಗಳಿಗಾಗಿ ನಾನು ಅವಳನ್ನು ದಂಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯನು ಸಮಾರ್ಯದಲ್ಲಿ ಇಸ್ರಾಯೇಲರ ಅರಸನಾದನು. ಅವನು ಆರು ತಿಂಗಳು ಆಳಿದನು.


ಮಾರನೆ ದಿವಸದಲ್ಲಿ, ಪಷ್ಹೂರನು ಯೆರೆಮೀಯನನ್ನು ಬಂಧನದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ, “ಯೆಹೋವ ದೇವರು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ ಮಾಗೋರ್ ಮಿಸ್ಸಾಬೀಬ್ ಎಂದು ಕರೆಯುತ್ತಾರೆಂದು ಹೇಳಿದನು.


ಅವರ ಮೇರೆಯು: ಇಜ್ರೆಯೇಲ್ ಕೆಸುಲೋತ್, ಶೂನೇಮ್,


ಆಗ ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದರು, ಯೇಹುವು ಸಮಾರ್ಯದಲ್ಲಿರುವ ಇಜ್ರೆಯೇಲ್ ಊರಿನ ಪ್ರಧಾನರಿಗೂ ಹಿರಿಯರಿಗೂ ಅಹಾಬನ ಮಕ್ಕಳನ್ನು ಪೋಷಿಸುವವರಿಗೂ ಪತ್ರಗಳನ್ನು ಬರೆದು, ಸಮಾರ್ಯಕ್ಕೆ ಕಳುಹಿಸಿದನು. ಅವನು,


ಅನಂತರ ನಾನು ಪ್ರವಾದಿನಿಯಾದ ನನ್ನ ಹೆಂಡತಿಯನ್ನು ಕೂಡಲು, ಆಕೆಯು ಗರ್ಭಧರಿಸಿ ಒಬ್ಬ ಗಂಡುಮಗುನ್ನು ಹೆತ್ತಳು. ಆಗ ಯೆಹೋವ ದೇವರು ನನಗೆ, “ಆ ಮಗುವಿಗೆ, ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು, ಎಂದು ಹೇಳಿದರು.


“ಸಾರ್ವಭೌಮ ಯೆಹೋವ ದೇವರ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲೆ ಇವೆ. ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋಬಿನ ಮನೆತನದವರನ್ನು ನಾನು ನಿಜವಾಗಿ ನಾಶಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು