Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 1:8 - ಕನ್ನಡ ಸಮಕಾಲಿಕ ಅನುವಾದ

8 ಗೋಮೆರಳು ಲೋರುಹಾಮಾಳನ್ನು ಎದೆಹಾಲಿನ ಸೇವನೆಯಿಂದ ಬಿಡಿಸಿದ ಮೇಲೆ ಪುನಃ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಕೂಸು ಮೊಲೆ ಬಿಟ್ಟ ಮೇಲೆ ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮಗುವು ಮೊಲೆಬಿಟ್ಟನಂತರ ಗೋಮೆರಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಕೂಸು ಮೊಲೆಬಿಟ್ಟ ಮೇಲೆ ಅವಳು ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗೋಮೆರಳು ಲೋರುಹಾಮಳಿಗೆ ಮೊಲೆಯುಣಿಸುವದನ್ನು ನಿಲ್ಲಿಸಿದ ಬಳಿಕ ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 1:8
4 ತಿಳಿವುಗಳ ಹೋಲಿಕೆ  

ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವನ್ನು ಹೆತ್ತಳು. ಆಗ ಯೆಹೋವ ದೇವರು ಹೋಶೇಯನಿಗೆ, “ಅವಳನ್ನು ‘ಲೋರುಹಾಮಾ’ ಎಂಬ ಹೆಸರಿನಿಂದ ಕರೆ. ಏಕೆಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನದವರಿಗೆ ಪ್ರೀತಿ ತೋರಿಸುವುದೇ ಇಲ್ಲ, ಅವರನ್ನು ಯಾವ ರೀತಿಯೂ ಕ್ಷಮಿಸುವದಿಲ್ಲ.


ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.


ಆಗ ಯೆಹೋವ ದೇವರು, “ ‘ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ. ಏಕೆಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವುದಿಲ್ಲ,’ ಎಂದು ಹೇಳಿದರು.


ಇಸಾಕನು ಬೆಳೆದು ಬಾಲಕನಾಗಿ ತಾಯಿಯ ಹಾಲು ಕುಡಿಯುವುದನ್ನು ಬಿಟ್ಟನು. ಆ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣ ಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು