ಹೋಶೇಯ 10:1 - ಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲು ಹರಡುವ ದ್ರಾಕ್ಷಿಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿಸುತ್ತಾನೆ. ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಅಭಿವೃದ್ಧಿಯ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲು ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣು ಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂವಿುಯು ಎಷ್ಟು ಒಳ್ಳೆಯದೋ ಅಷ್ಟು ಒಳ್ಳೆಯ ವಿಗ್ರಹಸ್ತಂಭಗಳನ್ನು ಮಾಡಿಕೊಂಡಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸ್ರೇಲ್ ಅಧಿಕ ಹಣ್ಣುಗಳನ್ನು ಕೊಡುವ ದ್ರಾಕ್ಷಿಬಳ್ಳಿಯಂತಿದೆ. ಆದರೆ ಇಸ್ರೇಲ್ ಅಭಿವೃದ್ಧಿ ಹೊಂದಿದ ಹಾಗೆ ಅವರು ಸುಳ್ಳುದೇವರುಗಳನ್ನು ಪೂಜಿಸಲು ಹೆಚ್ಚುಹೆಚ್ಚು ವೇದಿಕೆಗಳನ್ನು ಕಟ್ಟಿದರು. ಅವರ ದೇಶವು ಉತ್ತಮವಾಗುತ್ತಾ ಬರುತ್ತಿರುವಾಗ ಅವರು ತಮ್ಮ ಸುಳ್ಳುದೇವರುಗಳಿಗೆ ಉತ್ತಮ ಕಲ್ಲುಗಳಿಂದ ವೇದಿಕೆಗಳನ್ನು ಕಟ್ಟಲು ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿ |