Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:11 - ಕನ್ನಡ ಸಮಕಾಲಿಕ ಅನುವಾದ

11 ಎಫ್ರಾಯೀಮು ಒಂದು ತರಬೇತಿ ಪಡೆದ ಕಡಸಾಗಿದೆ. ಅದು ತುಳಿಯುವುದನ್ನು ಇಷ್ಟಪಡುತ್ತದೆ. ಆದರೆ ನಾನು ಅದರ ಸುಂದರವಾದ ಕುತ್ತಿಗೆಯ ಮೇಲೆ ನೊಗವನ್ನು ಹೊರುತ್ತೇನೆ. ಎಫ್ರಾಯೀಮು ಸವಾರಿ ಮಾಡುವ ಹಾಗೆ ನಾನು ಮಾಡುವೆನು. ಯೆಹೂದ ಉಳುವನು. ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎಫ್ರಾಯೀಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿಯುತ್ತಿರುವುದರಲ್ಲಿಯೇ ಇಷ್ಟಪಡುವ ಕಡಸಾಗಿದೆ; ಈಗಲಾದರೋ ಅದರ ಅಂದವಾದ ಹೆಗಲಿನ ಮೇಲೆ ಕೈಹಾಕಿದ್ದೇನೆ, ಎಫ್ರಾಯೀಮನ್ನು ನೊಗಕ್ಕೆ ಹೂಡುವೆನು, ಯೆಹೂದವು ಉಳಬೇಕು, ಯಾಕೋಬು ಕುಂಟೆ ಎಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಎಫ್ರಯಿಮ್ ತೆನೆಹುಲ್ಲನ್ನು ತುಳಿಯುವುದರಲ್ಲಿ ಪಳಗಿರುವ ಹೋರಿಕರು. ಅದರ ಅಂದವಾದ ಹೆಗಲಮೇಲೆ ನೇಗಿಲನ್ನು ಇಟ್ಟಿರಲಿಲ್ಲ. ಜುದೇಯವು ಉಳುವಂತೆ ಮಾಡಿದೆನು. ಯಕೋಬ್ ಕುಂಟೆ ಎಳೆಯುವಂತೆ ಮಾಡಿದೆನು. ಈಗ ಎಫ್ರಯಿಮನ್ನು ನೊಗಕ್ಕೆ ಹೂಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎಫ್ರಾಯೀಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿಯುತ್ತಿರುವದರಲ್ಲಿಯೇ ಇಷ್ಟಪಡುವ ಕಡಸಾಗಿದೆ; [ಈಗಲಾದರೋ] ಅದರ ಅಂದವಾದ ಹೆಗಲಿನ ಮೇಲೆ ಕೈಹಾಕಿದ್ದೇನೆ, ಎಫ್ರಾಯೀಮನ್ನು ಹೂಡುವೆನು, ಯೆಹೂದವು ಉಳಬೇಕು, ಯಾಕೋಬು ಕುಂಟೆ ಎಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಎಫ್ರಾಯೀಮ್ ಹತೋಟಿಗೆ ಬಂದು ಕಣ ತುಳಿಯಲು ಇಷ್ಟಪಡುವ ಪ್ರಾಯದ ಹಸುವಿನಂತಿದೆ. ಆಕೆಯ ಕುತ್ತಿಗೆಗೆ ನಾನು ಒಂದು ಒಳ್ಳೆಯ ನೊಗವನ್ನಿಡುವೆನು. ಎಫ್ರಾಯೀಮನಿಗೆ ನಾನು ಹಗ್ಗದಿಂದ ಬಂಧಿಸುವೆನು. ಆಗ ಯೆಹೂದವು ಭೂಮಿಯನ್ನು ಉಳುವದು. ಯಾಕೋಬನು ಮಣ್ಣಿನ ಗೆಡ್ಡೆಗಳನ್ನು ಒಡೆದು ಪುಡಿಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:11
13 ತಿಳಿವುಗಳ ಹೋಲಿಕೆ  

ಹಠಮಾರಿ ಹಸುವಿನ ಹಾಗೆ ಇಸ್ರಾಯೇಲು ಹಟಮಾರಿಯಾಗಿದೆ. ಈಗ ಯೆಹೋವ ದೇವರು ಹುಲ್ಲುಗಾವಲಲ್ಲಿರುವ ಕುರಿಮರಿಯ ಹಾಗೆ ಅವರನ್ನು ಹೇಗೆ ಮೇಯಿಸುವರು?


“ಏಕೆಂದರೆ ನನ್ನ ಸೊತ್ತನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ, ನೀವು ಉಲ್ಲಾಸಿಸಿದ್ದರಿಂದಲೂ, ಕೊಬ್ಬಿದ ಕಡಸಿನ ಹಾಗೆ ಗರ್ವ ಪಟ್ಟದ್ದರಿಂದಲೂ, ಗಂಡು ಕುದುರೆಗಳ ಹಾಗೆ ಹೂಂಕರಿಸಿದ್ದರಿಂದಲೂ,


ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು.


ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ನಾನು ಅವರನ್ನು ಮನುಷ್ಯನ ಹಗ್ಗಗಳಿಂದಲೂ, ಪ್ರೀತಿಯ ಬಂಧನಗಳಿಂದಲೂ ಎಳೆದೆನು. ಅವರಿಗೆ ನಾನು ಚಿಕ್ಕ ಮಗುವನ್ನು ಕೆನ್ನೆಯವರೆಗೆ ಎತ್ತುವವರಂತೆ ಇದ್ದೆ, ಮತ್ತು ನಾನು ಅವರಿಗೆ ಬಾಗಿ ತಿನ್ನಿಸುತ್ತಿದ್ದೆ.


ಇಸ್ರಾಯೇಲೇ, ಬೇರೆ ಜನಾಂಗಗಳು ಉಲ್ಲಾಸಿಸುವ ಪ್ರಕಾರ ಸಂತೋಷ ಪಡಬೇಡ. ಏಕೆಂದರೆ ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ಮಾಡಿದ್ದೀಯೆ. ಎಲ್ಲಾ ಧಾನ್ಯದ ಕಣಗಳಲ್ಲಿ ವ್ಯಭಿಚಾರದ ಕೂಲಿಯನ್ನು ಪ್ರೀತಿ ಮಾಡಿದ್ದೀಯೆ.


ತರುವಾಯ ಯೆಹೋವ ದೇವರು ನನಗೆ, “ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು, ದ್ರಾಕ್ಷಿ ಉಂಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವ ದೇವರು ಪ್ರೀತಿಸುವ ಪ್ರಕಾರ, ನೀನು ಹೋಗಿ ನಿನ್ನ ಹೆಂಡತಿ ವ್ಯಭಿಚಾರಿಣಿಯಾಗಿದ್ದರೂ ಆಕೆಯನ್ನು ಪುನಃ ಪ್ರೀತಿಸು,” ಎಂದು ಹೇಳಿದನು.


ಅವರ ತಾಯಿ ವಿಶ್ವಾಸದ್ರೋಹಿ ಮತ್ತು ಅವಮಾನಕರವಾಗಿ ಅವರನ್ನು ಗರ್ಭಧರಿಸಿದ್ದಾರೆ. ಅವಳು, ‘ನನಗೆ ನನ್ನ ಅನ್ನಪಾನ, ನನ್ನ ಉಣ್ಣೆ ಮತ್ತು ನನ್ನ ನಾರಿನ ಉಡುಗೆ, ನನ್ನ ತೈಲ, ನನ್ನ ಪಾಯಸಪಾನಕಗಳನ್ನು ಕೊಡುವಂಥ ನನ್ನ ಪ್ರೇಮಿಗಳ ಹಿಂದೆ ಹೋಗುವೆನು,’ ಎಂದುಕೊಂಡಿದ್ದಾಳೆ.


ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣುಹೆಂಟೆಯನ್ನು ತೆಗೆದು, ದಿನವೆಲ್ಲಾ ಹೊಡೆಯುವನೋ?


ಇಸ್ರಾಯೇಲರ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಡುವೆನು. ಅವರು ಅವನಿಗೆ ಸೇವೆಮಾಡುವರು; ಕಾಡುಮೃಗಗಳನ್ನು ಸಹ ಅವನಿಗೆ ಕೊಡುವೆನು.’ ”


“ಈಜಿಪ್ಟ್ ದೇಶವು ಬಹಳ ಅಂದವಾದ ಕಡಸಾಗಿದೆ; ಆದರೆ ಉತ್ತರದಿಂದ ತೊಣಚೆಯು ಬಂದೇ ಬರುತ್ತದೆ.


ಚೀಯೋನ್ ಪುತ್ರಿಯೇ, ಎದ್ದು ತುಳಿ. ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು. ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ. ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂ ಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು