ಹೋಶೇಯ 10:4 - ಕನ್ನಡ ಸಮಕಾಲಿಕ ಅನುವಾದ4 ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡುವುದಕ್ಕೆ ಸುಳ್ಳು ಪ್ರಮಾಣವನ್ನು ಮಾಡುತ್ತಾರೆ. ಆದ್ದರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನ ಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರು ಹರಟೆಹೊಡೆಯುತ್ತಾರೆ; ಸುಳ್ಳಾಣೆ ಇಟ್ಟು ಸಂಧಾನಮಾಡಿಕೊಳ್ಳುತ್ತಾರೆ. ಉತ್ತಹೊಲದಲ್ಲಿ ಬೆಳೆಯುವ ವಿಷದ ಕಳೆಗಳಂತೆ ನ್ಯಾಯಸ್ಥಾನಕ್ಕೆ ಬರುವ ಅವರ ವಾದವಿವಾದಗಳು ಹೆಚ್ಚಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ವಾಗ್ದಾನ ಮಾಡುತ್ತಾರೆ. ಆದರೆ ಅದು ಕೇವಲ ಸುಳ್ಳು, ಅವರು ಕೊಟ್ಟ ಮಾತನ್ನು ನಡಿಸುವದಿಲ್ಲ. ಬೇರೆ ದೇಶಗಳವರೊಂದಿಗೆ ಅವರು ಒಪ್ಪಂದ ಮಾಡುತ್ತಾರೆ. ದೇವರು ಆ ಒಪ್ಪಂದವನ್ನು ಒಪ್ಪುವುದಿಲ್ಲ. ಅವರ ನ್ಯಾಯಾಧೀಶರು ಉತ್ತ ಹೊಲದಲ್ಲಿ ಬೆಳೆಯುವ ವಿಷದ ಹಣಜಿಯಂತಿದ್ದಾರೆ. ಅಧ್ಯಾಯವನ್ನು ನೋಡಿ |