Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 10:8 - ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲಿನ ಪಾಪಕ್ಕೆ ಆಸ್ಪದವಾದ ಆವೆನಿನ ಉನ್ನತ ಪೂಜಾಸ್ಥಳಗಳು ಹಾಳಾಗಿ ಹೋಗುವುವು. ಮುಳ್ಳುಗಿಡಗಳೂ, ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವುವು. ಜನರು ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ! ಗುಡ್ಡಗಳಿಗೆ, ನಮ್ಮನ್ನು ಮುಚ್ಚಿಕೊಳ್ಳಿರಿ!” ಎನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು; ಮುಳ್ಳುಗಿಡಗಳೂ ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು - ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ ಎಂದು ಕೂಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಸ್ರೇಲ್ ಪಾಪ ಮಾಡುತ್ತಾ ಇನ್ನೂ ಹೆಚ್ಚಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿತು. ಆವೆನ್‌ನಲ್ಲಿರುವ ಎತ್ತರವಾದ ಸ್ಥಳ ನಾಶಮಾಡಲ್ಪಡುವದು. ಅದರ ಮೇಲೆ ಮುಳ್ಳುಗಿಡಗಳೂ ಹಣಜಿಗಳೂ ಬೆಳೆಯುವವು. ಆಗ ಅವರು ಪರ್ವತಗಳಿಗೆ, “ನಮ್ಮನ್ನು ಮುಚ್ಚಿರಿ” ಎಂದೂ ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ” ಎಂದೂ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 10:8
32 ತಿಳಿವುಗಳ ಹೋಲಿಕೆ  

ಆಗ ಅವರು, “ ‘ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ!” ಗುಡ್ಡಗಳಿಗೆ, “ನಮ್ಮನ್ನು ಮುಚ್ಚಿಕೊಳ್ಳಿರಿ!” ’ ಎಂದು ಹೇಳಲಾರಂಭಿಸುವರು.


ಬೆಟ್ಟಗುಡ್ಡಗಳಿಗೆ, “ನಮ್ಮ ಮೇಲೆ ಬಿದ್ದು ಸಿಂಹಾಸನದ ಮೇಲೆ ಕುಳಿತಿರುವವನ ಮುಖದಿಂದ ಮತ್ತು ಕುರಿಮರಿ ಆಗಿರುವವರ ಕೋಪಾಗ್ನಿಯಿಂದ ನಮ್ಮನ್ನು ಮರೆಮಾಡಿರಿ.


ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರಿಗೂ ಅವರ ಮಹಿಮೆಗೂ, ಅವರ ಘನಕ್ಕೂ ಹೆದರಿ, ಬಂಡೆಗಳ ಸಂದುಗಳಿಗೂ, ಭೂಮಿಯ ಗವಿಗಳಿಗೂ ಜನರು ಸೇರಿಕೊಳ್ಳುವರು.


ಇಗೋ, ನಾಶನದಿಂದ ಅವರು ತಪ್ಪಿಸಿಕೊಂಡರೂ ಈಜಿಪ್ಟ್ ಅವರನ್ನು ಕೂಡಿಸುವುದು. ಮೋಫ್ ಪಟ್ಟಣವು ಅವರನ್ನು ಹೂಳುವುದು. ಅವರ ಬೆಳ್ಳಿಯ ಬೊಕ್ಕಸಗಳು ಮುಳ್ಳು ಪೊದೆಗಳ ಪಾಲಾಗುವುವು. ಮುಳ್ಳುಗಿಡಗಳು ಅವರ ಗುಡಾರಗಳನ್ನು ಆವರಿಸಿಕೊಂಡಿರುವುದು.


ಅವರು ಸಮಾರ್ಯದ ಪಾಪದ ಮೇಲೆ ಆಣೆ ಇಟ್ಟುಕೊಂಡು, ದಾನೇ, ನಿನ್ನ ದೇವರ ಜೀವದಾಣೆ ಎಂದೂ, ಬೇರ್ಷೆಬದ ಮಾರ್ಗದ ಜೀವದಾಣೆ ಎಂದೂ ಹೇಳುವರು. ಅವರು ಬಿದ್ದು ಮತ್ತೆ ಮೇಲೆ ಏಳಲಾರರು.”


ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ.


ಆ ದಿನಗಳಲ್ಲಿ ಜನರು ಮರಣವನ್ನು ಹುಡುಕುವರು, ಆದರೆ ಅದನ್ನು ಯಾವ ರೀತಿಯಿಂದಲೂ ಕಾಣರು; ಅವರು ಸಾಯಲು ಹಾರೈಸುವರು, ಆದರೆ ಮರಣವು ಅವರಿಂದ ಓಡಿ ಹೋಗುವುದು.


ಲಾಕೀಷಿನ ನಿವಾಸಿಗಳೇ, ಕುದುರೆಗಳನ್ನು ರಥಕ್ಕೆ ಕಟ್ಟಿರಿ, ಚೀಯೋನ್ ಮಗಳ ಪಾಪವು ನಿನ್ನಿಂದ ಪ್ರಾರಂಭವಾಯಿತು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿ ಬಂದವು.


ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೇ ಇಸ್ರಾಯೇಲಿನ ಮನೆತನದವರ ಪಾಪದಿಂದಲೇ, ಯಾಕೋಬನ ಅಪರಾಧವೇನು? ಅದು ಸಮಾರ್ಯವಲ್ಲವೇ? ಯೆಹೂದದ ಉನ್ನತ ಪೂಜಾಸ್ಥಳ ಯಾವುದು? ಅದು ಯೆರೂಸಲೇಮು ಅಲ್ಲವೋ?


ಬೇತಾವೆನಿನ ಬಸವ ವಿಗ್ರಹಕ್ಕೆ ಸಮಾರ್ಯದ ನಿವಾಸಿಗಳು ಭಯಪಡುವರು. ಅದರಲ್ಲಿ ಆನಂದಿಸಿದ ಜನರು ಅದಕ್ಕೋಸ್ಕರ ಗೋಳಾಡುವರು. ಅದರ ಯಾಜಕರು ನಡುಗುವರು. ಏಕೆಂದರೆ ಅದರ ವೈಭವವು ಅದರಿಂದ ಕುಂದಿಹೋಯಿತು.


ಅವರ ಹೃದಯವು ವಂಚಕವಾದದ್ದು. ಈಗ ಅವರು ಅಪರಾಧಗಳನ್ನು ಹೊರಬೇಕು. ಯೆಹೋವ ದೇವರು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವರು.


“ಗಿಬೆಯದಲ್ಲಿ ತುತೂರಿಯನ್ನೂ ರಾಮದಲ್ಲಿ ಕೊಂಬನ್ನೂ ಊದಿರಿ. ಬೆನ್ಯಾಮೀನೇ, ನಿನ್ನ ಹಿಂದೆ ನೋಡು! ಬೇತಾವೆನಿನಲ್ಲಿ ಗಟ್ಟಿಯಾಗಿ ಕೂಗು.


“ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿದರೂ, ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. “ಗಿಲ್ಗಾಲಿಗೆ ಹೋಗದೆ, ಇಲ್ಲವೆ ಬೇತಾವೆನಿಗೆ ಏರದೇ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡದೆ ಇರಲಿ.


ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸುತ್ತಾರೆ. ಗುಡ್ಡಗಳ ಮೇಲೆ ಏಲಾ, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ದಟ್ಟವಾಗಿರುವುದರಿಂದ ಧೂಪವನ್ನು ಸುಡುತ್ತಾರೆ. ಆದ್ದರಿಂದ ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವರು. ನಿಮ್ಮ ಸೊಸೆಯಂದಿರು ವ್ಯಭಿಚಾರಿಣಿಗಳಾಗುವರು.


ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವುವು, ಅದರ ಕೋಟೆಗಳಲ್ಲಿ ಮುಳ್ಳುಪೊದೆಗಳು ಇರುವುವು. ಅದು ನರಿಗಳ ನಿವಾಸವೂ, ಗೂಬೆಗಳಿಗೆ ಸ್ಥಾನವೂ ಆಗುವುದು.


ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.


ಇದಲ್ಲದೆ ಬೇತೇಲಿನಲ್ಲಿ ಇದ್ದ ಬಲಿಪೀಠವನ್ನೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನು ಮಾಡಿದ ಉನ್ನತ ಪೂಜಾಸ್ಥಳವನ್ನೂ ಸುಟ್ಟುಬಿಟ್ಟು, ಅದನ್ನು ಧೂಳಾಗಲು ಪುಡಿಮಾಡಿ ಅಶೇರ ಸ್ತಂಭವನ್ನು ಸುಟ್ಟುಬಿಟ್ಟನು.


ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.


ಯಾರೊಬ್ಬಾಮನ ಮನೆಯವರನ್ನು ಭೂಮಿಯಿಂದ ಸಂಹರಿಸುವುದಕ್ಕೂ, ನಾಶಮಾಡುವುದಕ್ಕೂ ಈ ಪಾಪವು ಅವರಿಗೆ ಕಾರಣವಾಯಿತು.


ಅವನು ಯೆಹೋವ ದೇವರ ಅಪ್ಪಣೆಯಿಂದ ಆ ಪೀಠವನ್ನು ಕುರಿತು: “ಪೀಠವೇ, ಪೀಠವೇ! ದಾವೀದನ ಸಂತಾನದಲ್ಲಿ ಯೋಷೀಯ ಎಂಬ ಹೆಸರುಳ್ಳ ಒಬ್ಬ ಮಗನು ಹುಟ್ಟುವನು. ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಬಲಿಯಾಗಿ ಅರ್ಪಿಸುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವವು,” ಎಂದು ಯೆಹೋವ ದೇವರು ಹೇಳುತ್ತಾರೆ ಎಂದನು.


ಇದಲ್ಲದೆ ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದೀರೋ ಆ ಚಿನ್ನದ ಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿದೆನು.


ತರುವಾಯ ಯೆಹೋವ ದೇವರು, ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ, ಆ ಸ್ತ್ರೀ ಪುರುಷರು ಅವರ ಸಪ್ಪಳವನ್ನು ಕೇಳಿ, ಅವರಿಗೆ ಕಾಣಿಸಿಕೊಳ್ಳಬಾರದೆಂದು ತೋಟದ ಮರಗಳ ಮಧ್ಯದಲ್ಲಿ ಅಡಗಿಕೊಂಡರು.


ಆದ್ದರಿಂದ ನಾನು ಅವಳ ಮಾರ್ಗಕ್ಕೆ ಮುಳ್ಳುಗಳ ಬೇಲಿಹಾಕಿ ತಡೆಯುವೆನು. ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಅವಳ ಮುಂದೆ ಗೋಡೆಯನ್ನು ಕಟ್ಟುವೆನು.


ಇಸ್ರಾಯೇಲೇ ನೀನು ಗಿಬೆಯದಲ್ಲಿದ್ದ ಕಾಲದಿಂದ ನನ್ನ ವಿರುದ್ಧ ಪಾಪ ಮಾಡುತ್ತಲೇ ಬಂದಿರುವೆ. ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. ಗಿಬೆಯದಲ್ಲಿ ಕೆಟ್ಟದ್ದನ್ನು ಮಾಡುವ ಜನರು ಯುದ್ಧಕ್ಕೆ ತುತ್ತಾಗಲಿದ್ದಾರೆ.


“ಇಸಾಕನ ಉನ್ನತ ಪೂಜಾಸ್ಥಳಗಳು ನಾಶವಾಗುವುವು. ಇಸ್ರಾಯೇಲಿನ ಪರಿಶುದ್ಧ ಸ್ಥಳಗಳು ಹಾಳಾಗುವುವು. ನಾನು ಖಡ್ಗದೊಂದಿಗೆ ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು.”


ನೀನೂ ಸಹ ಅಮಲೇರಿ ಅಡಗಿಕೊಳ್ಳುವೆ; ನೀನೂ ಸಹ ಶತ್ರುವಿನ ನಿಮಿತ್ತ ಅಡಗಿಕೊಳ್ಳಲು ಆಶ್ರಯ ಸ್ಥಾನವನ್ನು ಹುಡುಕುವೆ.


ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ, ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಜನರು ನುಗ್ಗುವರು.


ಸಮಾರ್ಯವೇ, ನಿನ್ನ ಬಸವ ವಿಗ್ರಹವನ್ನು ಬಿಸಾಡಿಬಿಡು. ನನ್ನ ಕೋಪವು ಅವರ ಮೇಲೆ ಉರಿಯುತ್ತದೆ. ಅವರು ಎಷ್ಟು ಕಾಲ ಶುದ್ಧತೆಗೆ ಅಸಮರ್ಥರಾಗಿರುತ್ತಾರೆ?


ನಾನು ದಮಸ್ಕದ ಹೆಬ್ಬಾಗಿಲನ್ನು ಸಹ ಮುರಿಯುವೆನು. ಆವೆನಿನ ಕಣಿವೆಯಿಂದ ನಿವಾಸಿಯನ್ನು ಮತ್ತು ಬೇತ್ ಏದೆನಿನ ಮನೆಯಿಂದ ರಾಜದಂಡ ಹಿಡಿಯುವವನನ್ನೂ ಕಡಿದುಬಿಡುವೆನು. ಅರಾಮ್ ಜನರು ಸೆರೆಯಾಗಿ ಕೀರಿಗೆ ಹೋಗುವರು, ಇದು ಯೆಹೋವ ದೇವರ ನುಡಿ.


“ನಾನು ಇಸ್ರಾಯೇಲಿನ ಪಾಪಗಳನ್ನು ವಿಚಾರಿಸುವ ದಿವಸದಲ್ಲಿ, ಬೇತೇಲಿನ ಬಲಿಪೀಠಗಳನ್ನು ನಾಶಮಾಡುವೆನು. ಬಲಿಪೀಠದ ಕೊಂಬುಗಳು ಕಡಿಯಲಾಗಿ, ನೆಲಕ್ಕೆ ಉರುಳುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು