ಹೋಶೇಯ 11:8 - ಕನ್ನಡ ಸಮಕಾಲಿಕ ಅನುವಾದ8 “ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮದ ಗತಿಗೆ ಹೇಗೆ ತರಲಿ! ಚೆಬೋಯೀವಿುನಂತೆ ಹೇಗೆ ನಾಶಮಾಡಲಿ! ನನ್ನೊಳಗೆ ಮನಸ್ಸು ತಿರುಗಿತು, ಕರುಳು ತೀರಾ ಮರುಗಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಎಫ್ರಾಯೀಮೇ, ನಿನ್ನನ್ನು ಬಿಟ್ಟುಬಿಡಲು ನನಗೆ ಇಷ್ಟವಿಲ್ಲ. ಇಸ್ರೇಲೇ, ನಿನ್ನನ್ನು ಸಂರಕ್ಷಿಸಲು ನನಗೆ ಇಷ್ಟ. ನಿನ್ನನ್ನು ಅದ್ಮದಂತೆ ಮಾಡಲು ನನಗೆ ಮನಸ್ಸಿಲ್ಲ. ನಿನ್ನನ್ನು ಜೆಬೊಯೀಮಿನಂತೆ ಮಾಡಲು ನನಗೆ ಮನಸ್ಸಿಲ್ಲ. ನಾನು ನನ್ನ ನಿರ್ಧಾರವನ್ನು ಬದಲಾಯಿಸುತ್ತಿದ್ದೇನೆ. ನಿನ್ನ ಮೇಲಿರುವ ನನ್ನ ಪ್ರೀತಿಯು ಆಳವಾಗಿದೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”
ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.