ಹೋಶೇಯ 12:1 - ಕನ್ನಡ ಸಮಕಾಲಿಕ ಅನುವಾದ1 ಎಫ್ರಾಯೀಮು ಗಾಳಿಯನ್ನು ತಿನ್ನುತ್ತದೆ. ಪೂರ್ವದ ಗಾಳಿಯ ಹಿಂದೆ ಹಿಂಬಾಲಿಸಿಕೊಂಡು ಹೋಗುತ್ತದೆ. ಅವನು ದಿನವೆಲ್ಲಾ ಸುಳ್ಳನ್ನೂ, ಹಿಂಸೆಯನ್ನೂ ಹೆಚ್ಚಿಸಿ, ಅಸ್ಸೀರಿಯರೊಂದಿಗೆ ಒಡಂಬಡಿಕೆ ಮಾಡಿಕೊಂಡು, ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಹೊತ್ತುಕೊಂಡು ಹೋಗುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣ ಗಾಳಿಯೇ; ಅದು ಮೋಸವನ್ನೂ ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡಿಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು [ಕಾಣಿಕೆಯಾಗಿ] ಕಳುಹಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಎಫ್ರಾಯೀಮ್ ಸಮಯವನ್ನು ಹಾಳು ಮಾಡುತ್ತಿದ್ದಾನೆ. ಇಸ್ರೇಲು ದಿನವಿಡೀ ಗಾಳಿಯನ್ನು ಹಿಮ್ಮೆಟ್ಟುತ್ತಿದ್ದಾನೆ. ಜನರು ಹೆಚ್ಚೆಚ್ಚಾಗಿ ಸುಳ್ಳು ಹೇಳುತ್ತಿದ್ದಾರೆ; ಹೆಚ್ಚೆಚ್ಚಾಗಿ ಕದಿಯುತ್ತಾರೆ. ಅಶ್ಶೂರ್ಯದವರೊಂದಿಗೆ ಒಪ್ಪಂದ ಮಾಡಿರುತ್ತಾರೆ. ತಮ್ಮ ಆಲೀವ್ ಎಣ್ಣೆಯನ್ನು ಈಜಿಪ್ಟಿಗೆ ಕೊಂಡೊಯ್ಯುತ್ತಿದ್ದಾರೆ. ಅಧ್ಯಾಯವನ್ನು ನೋಡಿ |