“ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ, ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ಮೋಶೆಯ ಎಲ್ಲಾ ನಿಯಮದ ಪ್ರಕಾರ ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳಿರಿ,” ಎಂದು ಯೆಹೋವ ದೇವರು ಸಮಸ್ತ ಪ್ರವಾದಿಗಳ ಮುಖಾಂತರವಾಗಿಯೂ, ಸಮಸ್ತ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ, ಯೆಹೂದಕ್ಕೂ ಎಚ್ಚರಿಕೆ ಕೊಟ್ಟಿದ್ದರು.
“ಆಮೇಲೆ ನಾನು, ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು.
“ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು, ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು, ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.
ತರುವಾಯ ಯೆಹೋವ ದೇವರು ನನಗೆ, “ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು, ದ್ರಾಕ್ಷಿ ಉಂಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವ ದೇವರು ಪ್ರೀತಿಸುವ ಪ್ರಕಾರ, ನೀನು ಹೋಗಿ ನಿನ್ನ ಹೆಂಡತಿ ವ್ಯಭಿಚಾರಿಣಿಯಾಗಿದ್ದರೂ ಆಕೆಯನ್ನು ಪುನಃ ಪ್ರೀತಿಸು,” ಎಂದು ಹೇಳಿದನು.
ಇದಲ್ಲದೆ ಯೆಹೋವ ದೇವರು ತಮ್ಮ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾರೆ. ಬೆಳಿಗ್ಗೆ ಎದ್ದು ಕಳುಹಿಸಿದ್ದಾರೆ. ಆದರೆ ನೀವು ಕೇಳಲಿಲ್ಲ. ಕೇಳುವುದಕ್ಕೆ ನಿಮ್ಮ ಕಿವಿ ಕೊಡಲಿಲ್ಲ.
ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ.
ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.
ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.
ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.
ಆದರೂ ನಾನು ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದ, ನಾನೇ ನಿನ್ನ ದೇವರಾಗಿರುವ ಯೆಹೋವನಾಗಿದ್ದೇನೆ. ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು. ಏಕೆಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.