Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:14 - ಕನ್ನಡ ಸಮಕಾಲಿಕ ಅನುವಾದ

14 ಆದರೂ ಎಫ್ರಾಯೀಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದ್ದರಿಂದ ಯೆಹೋವ ದೇವರು ಅದರ ರಕ್ತಾಪರಾಧವನ್ನು ಅದರ ಮೇಲೆ ಬರಮಾಡುವರು. ಅವನ ನಿಂದೆಯನ್ನು ಯೆಹೋವ ದೇವರು ಅವನ ಮೇಲೆ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ, ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಎಫ್ರಯಿಮ್ ದೇವರನ್ನು ಉಗ್ರವಾಗಿ ರೇಗಿಸಿದೆ; ರಕ್ತಾಪರಾಧವನ್ನು ಅದರ ಮೇಲೆ ಹೊರಿಸಲಾಗುವುದು. ಅದು ಮಾಡಿದ ಅವಮಾನಕ್ಕೆ ಪ್ರತಿಯಾಗಿ ದೇವರು ಅದನ್ನು ಅವಮಾನಕ್ಕೆ ಗುರಿಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದಕ್ಕೆ ಕಟ್ಟಿ ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಎಫ್ರಾಯೀಮನು ಯೆಹೋವನನ್ನು ಅತಿಯಾಗಿ ಕೋಪಿಸಿಕೊಳ್ಳುವಂತೆ ಮಾಡಿದನು. ಎಫ್ರಾಯೀಮನು ಅನೇಕ ಮಂದಿಯನ್ನು ಕೊಲೆ ಮಾಡಿದನು. ಅವನ ಅಪರಾಧಗಳಿಗಾಗಿ ಅವನು ಶಿಕ್ಷಿಸಲ್ಪಡುವನು. ಅವನ ದೇವರಾದ ಯೆಹೋವನು ಅವನು ಮಾಡಿದ ಅಪರಾಧಕ್ಕೆ ತಕ್ಕ ದಂಡನೆಯನ್ನು ವಿಧಿಸಿ ಅವಮಾನ ಹೊರುವಂತೆ ಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:14
16 ತಿಳಿವುಗಳ ಹೋಲಿಕೆ  

ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ, ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ, ಅನೇಕರನ್ನು ವಶಪಡಿಸಿಕೊಳ್ಳುವನು. ಆದರೆ ಒಬ್ಬ ಅಧಿಪತಿಯು ಅವನ ಅಹಂಕಾರವನ್ನು ಅಡಗಿಸಿಬಿಡುವನು. ಆ ಅಹಂಕಾರವನ್ನು ತನ್ನ ಮೇಲೆ ಹಾಕಿಕೊಳ್ಳದೆ, ಅವನ ಮೇಲೆ ತಿರುಗಿಸಿ ಬಿಡುವನು.


ಅವರು ಮಹೋನ್ನತನಾದಾತನ ಕಡೆಗೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿನ ಹಾಗೆ ಇದ್ದಾರೆ. ಅವರ ನಾಯಕರು ನಾಲಿಗೆಯ ಹುಚ್ಚು ಕೂಗಾಟದಿಂದ, ಖಡ್ಗದಿಂದ ಬೀಳುವರು. ಇದೇ ಈಜಿಪ್ಟ್ ದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.


ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿದ್ದರಿಂದ, ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ,” ಎಂದನು.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಚೆದರಿಸುವ ಎಲ್ಲಾ ಜನಾಂಗಗಳಲ್ಲಿ ನೀವು ವಿಸ್ಮಯಕ್ಕೂ, ಗಾದೆಗೂ, ಹಾಸ್ಯಕ್ಕೂ ಗುರಿಯಾಗುವಿರಿ.


ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಸಾವಿಗೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.


“ಒಂದು ವೇಳೆ ಇಂಥವನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,


ಶಪಿಸುವದೂ, ಸುಳ್ಳು ಹೇಳುವುದೂ, ಕೊಲ್ಲುವುದು, ಕದಿಯುವುದೂ, ವ್ಯಭಿಚಾರ ಮಾಡುವುದೂ ಹೆಚ್ಚಾಗಿ ಬಿಟ್ಟಿವೆ. ಅವರು ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ದೇಶವೆಲ್ಲಾ ರಕ್ತಮಯವಾಗಿದೆ.


ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ.


ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಿಮ್ಮ ಸಹೋದರರ ನಡುವೆಯಿಂದ ಎಬ್ಬಿಸುವರು. ಆ ಪ್ರವಾದಿಯ ಮಾತನ್ನು ನೀವು ಕೇಳಬೇಕು.


ನಿನ್ನ ಹಾಗಿರುವ ಪ್ರವಾದಿಯನ್ನು ನಾನು ಅವರ ಸಹೋದರರ ಮಧ್ಯದಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಆತನ ಬಾಯಿಯಲ್ಲಿ ಇಡುವೆನು. ನಾನು ಆತನಿಗೆ ಆಜ್ಞಾಪಿಸುವುದನ್ನೆಲ್ಲಾ ಆತನು ಅವರಿಗೆ ಹೇಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು