ಹೋಶೇಯ 13:10 - ಕನ್ನಡ ಸಮಕಾಲಿಕ ಅನುವಾದ10 ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜ್ಯವನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ. ಆ ನ್ಯಾಯಾಧಿಪತಿಗಳು ಎಲ್ಲಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ; ನಿನ್ನನ್ನು ರಕ್ಷಿಸಬಲ್ಲ ನಗರಪಾಲಕರು ಎಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ‘ನನಗೆ ರಾಜನು ಬೇಕು, ರಾಜಾಧಿಕಾರಿಗಳು ಬೇಕು’ ಎಂದು ಹೇಳಿಕೊಂಡಿದ್ದಿಯಲ್ಲಾ; ನಿನ್ನನ್ನು ರಕ್ಷಿಸಬಲ್ಲ ರಾಜನೆಲ್ಲಿ? ನಿನ್ನನ್ನು ಕಾಪಾಡಬಲ್ಲ ನಗರಪಾಲಕರೆಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ; ಆ ಪಾಲಕರು ಎಲ್ಲಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿನ್ನ ಅರಸನೆಲ್ಲಿ? ನಿನ್ನ ಯಾವ ಪಟ್ಟಣದಲ್ಲಿಯಾಗಲಿ ಅವನು ನಿನ್ನನ್ನು ರಕ್ಷಿಸಲಾರ. ನಿನ್ನ ನ್ಯಾಯಾಧೀಶರುಗಳೆಲ್ಲಿ? ನೀನು, ‘ನಮಗೆ ರಾಜನನ್ನೂ ನಾಯಕರನ್ನೂ ಕೊಡು’ ಎಂದು ಕೇಳಿಕೊಂಡೆ. ಅಧ್ಯಾಯವನ್ನು ನೋಡಿ |