Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:14 - ಕನ್ನಡ ಸಮಕಾಲಿಕ ಅನುವಾದ

14 “ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರುಮಾಡುವೆನು. ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:14
32 ತಿಳಿವುಗಳ ಹೋಲಿಕೆ  

ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು.


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.


ಆದರೆ ದೇವರು ನನ್ನ ಪ್ರಾಣವನ್ನು ಮರಣದಿಂದ ವಿಮೋಚನೆ ಮಾಡುವರು. ದೇವರು ನನ್ನನ್ನು ತಮಗಾಗಿ ಅಂಗೀಕರಿಸುವರು.


ಯೆಹೋವ ದೇವರೇ, ನನ್ನ ಪ್ರಾಣವನ್ನು ಪಾತಾಳದೊಳಗಿಂದ ಎತ್ತಿದ್ದೀರಿ; ನಾನು ಸಮಾಧಿ ಸೇರದ ಹಾಗೆ ನನ್ನನ್ನು ಬದುಕಿಸಿದ್ದೀರಿ.


ಆ ಮಧ್ಯಸ್ಥನು ಅವನನ್ನು ಕರುಣಿಸಿ ದೇವರಿಗೆ, ‘ಅಧೋಲೋಕವೆಂಬ ಕುಣಿಗೆ ಇಳಿಯುವುದರಿಂದ ಇವನನ್ನು ಕಾಪಾಡಿರಿ; ನಾನು ಇವನಿಗಾಗಿ ವಿಮೋಚನೆಯ ಕ್ರಯವನ್ನು ಕಂಡುಹಿಡಿದಿದ್ದೇನೆ.


ದೇವರು ಕೊಡುವ ವರಗಳನ್ನು, ಕರೆಗಳನ್ನು ಅವರು ಎಂದಿಗೂ ಹಿಂತೆಗೆದುಕೊಳ್ಳುವವರಲ್ಲ.


ನಿಮ್ಮ ಪ್ರೀತಿಯು ನನ್ನ ಮೇಲೆ ಅಗಾಧವಾಗಿದೆ. ಕೆಳಗಿನ ಪಾತಾಳದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀರಿ.


ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ; ನಿಮ್ಮ ನಂಬಿಗಸ್ತನನ್ನು ಕೊಳೆಯುವ ಅವಸ್ಥೆಗೆ ತರುವುದಿಲ್ಲ.


ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು.


ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವು, ಪಾತಾಳವು ತಮ್ಮಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕ್ರಿಯೆಗಳ ಪ್ರಕಾರ ನ್ಯಾಯತೀರ್ಪಾಯಿತು.


ಏಕೆಂದರೆ ಯೇಸು ಸತ್ತು ಪುನಃ ಜೀವಂತವಾಗಿ ಎದ್ದರೆಂದು ನಾವು ನಂಬಿದರೆ, ಅದರಂತೆ ಯೇಸುವಿನಲ್ಲಿ ನಿದ್ರೆಹೋದವರನ್ನು ಸಹ ದೇವರು ಅವರೊಡನೆ ಕರೆದುಕೊಂಡು ಬರುವರು.


ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ಗುಡಾರವೆಂಬ ಹಳೆಯ ಶರೀರವು ನಮ್ಮಿಂದ ಕಳಚಿ ಹೋಗಬೇಕೆಂಬುದು ನಮ್ಮ ಇಷ್ಟವಲ್ಲ. ಆದರೆ ಪರಲೋಕದ ನಿವಾಸವೆಂಬ ನೂತನ ಶರೀರವನ್ನು ನಾವು ಧರಿಸಿಕೊಳ್ಳಲು ಬಯಸುತ್ತೇವೆ. ಏಕೆಂದರೆ ನಶ್ವರವಾದ ಈ ನಮ್ಮ ದೇಹವು ಅಮರತ್ವವನ್ನು ಧರಿಸಿಕೊಳ್ಳಬೇಕು.


ಏಕೆಂದರೆ ಇಸ್ರಾಯೇಲರನ್ನು ತ್ಯಜಿಸುವುದರಿಂದ ಜಗತ್ತು ದೇವರೊಡನೆ ಸಂಧಾನವಾಗುವುದಾದರೆ, ಅವರನ್ನು ಸ್ವೀಕರಿಸುವುದು, ಸತ್ತವರು ಜೀವಿತರಾಗಿ ಎದ್ದು ಬಂದಂತಾಗಿರುವುದಲ್ಲವೇ?


“ನಾನು ಯೆಹೋವ ದೇವರು. ನಾನು ಬದಲಾಗುವುದಿಲ್ಲ. ಆದ್ದರಿಂದ ನೀವು ಯಾಕೋಬಿನ ವಂಶಜರೇ, ನಾಶವಾಗುವುದಿಲ್ಲ.


ಅವರು ಎರಡು ದಿವಸಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು. ಮೂರನೆಯ ದಿವಸದಲ್ಲಿ ಆತನೇ ನಮ್ಮನ್ನು ಪುನಃಸ್ಥಾಪಿಸುವರು. ನಾವು ಅವರ ದೃಷ್ಟಿಯಲ್ಲಿ ಜೀವಿಸುವೆವು.


ಅನೇಕ ಕಠಿಣವಾದ ಇಕ್ಕಟ್ಟುಗಳನ್ನು ನೋಡ ಮಾಡಿದ ನನ್ನನ್ನು ನೀವು ತಿರುಗಿ ಬದುಕಿಸಿದ್ದೀರಿ. ಭೂಮಿಯ ಅಧೋಭಾಗದಿಂದ ಪುನಃ ನನ್ನನ್ನು ಮೇಲಕ್ಕೆ ಎತ್ತುವಿರಿ.


ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು.


ನೀನು ನನ್ನನ್ನು ಬಿಟ್ಟುಬಿಟ್ಟಿದ್ದೀ,” ಎಂದು ಯೆಹೋವ ದೇವರು ಹೇಳುತ್ತಾರೆ. “ನೀನು ಹಿಂಜಾರಿದೆ. ಆದ್ದರಿಂದ ನನ್ನ ಕೈಯನ್ನು ನಿನಗೆ ವಿರೋಧವಾಗಿ ಚಾಚಿ, ನಿನ್ನನ್ನು ನಾಶಮಾಡುವೆನು. ನಿನಗೆ ಅನುಕಂಪ ತೋರಿಸುವುದರಲ್ಲಿ ದಣಿದಿದ್ದೇನೆ.


ನಾನು ನೋಡಲು, ಒಂದು ನಸು ಹಸಿರು ಬಣ್ಣದ ಕುದುರೆ ಕಾಣಿಸಿತು. ಅದರ ಸವಾರನಿಗೆ ಮೃತ್ಯುವೆಂದು ಹೆಸರಿತ್ತು. ಪಾತಾಳವೆಂಬವನು ಅವನ ಹಿಂದೆ ಹೋಗುತ್ತಿದ್ದನು. ಅವರಿಗೆ ಭೂಮಿಯ ನಾಲ್ಕನೆಯ ಒಂದು ಭಾಗದ ಮೇಲೆ ಕತ್ತಿ, ಕ್ಷಾಮ, ಮರಣ ಮತ್ತು ಭೂಮಿಯ ಕ್ರೂರಮೃಗಗಳಿಂದ ಕೊಲ್ಲುವ ಅಧಿಕಾರಕೊಡಲಾಗಿತ್ತು.


ಆ ಮನುಷ್ಯನು, ಯೆಹೋವ ದೇವರು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಅವನು ಬೆಳಿಗ್ಗೆ ಕೂಗನ್ನೂ, ಮಧ್ಯಾಹ್ನದಲ್ಲಿ ಆರ್ಭಟವನ್ನೂ ಕೇಳಲಿ.


ಇದು ಯೆಹೋವ ದೇವರಾದ ನನ್ನ ನುಡಿ, ಯೆಹೋವ ದೇವರು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದವರು. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದವರು. ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ಕೆರಳಿಸುವವರು, ಸೇನಾಧೀಶ್ವರ ಯೆಹೋವ ದೇವರು ಎಂಬ ನಾಮಧೇಯದಿಂದ ಪ್ರಸಿದ್ಧರು.


ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯಪುತ್ರನೇ, ಆ ಉಸಿರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತಶರೀರಗಳು ಬದುಕುವಂತೆ ಅದರ ಮೇಲೆ ಊದು.’ ”


ಅದರ ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿರುವುದು; ಅದರ ಮುಂದೆ ಭಯವು ಸಾಗುತ್ತಿರುವುದು.


ಒಬ್ಬನು ಐಶ್ವರ್ಯವಂತನಾದರೆ ಮತ್ತು ಅವನ ಮನೆಯ ಘನತೆ ದೊಡ್ಡದಾದರೆ ಕಳವಳ ಪಡಬೇಡ.


ಇಸ್ರಾಯೇಲಿನ ಗರ್ವವು ಅವನಿಗೆ ವಿರುದ್ಧವಾಗಿ ಸಾಕ್ಷಿಕೊಡುತ್ತದೆ. ಆದರೂ ಅವರು ತಮ್ಮ ಯೆಹೋವ ದೇವರ ಕಡೆಗೆ ತಿರುಗದೆ ಇದ್ದಾರೆ. ಆತನನ್ನು ಹುಡುಕದೇ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು