Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:15 - ಕನ್ನಡ ಸಮಕಾಲಿಕ ಅನುವಾದ

15 ಎಫ್ರಾಯೀಮು ತನ್ನ ಸಹೋದರರಲ್ಲಿ ಫಲ ಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವ ದೇವರು ಬೀಸಮಾಡುವ ಪೂರ್ವ ಗಾಳಿಯು ಬರಲು, ಅವನ ಬುಗ್ಗೆಯು ಬತ್ತುವುದು. ಅವನ ಒರತೆಯು ಒಣಗುವುದು. ಅವನ ಬೊಕ್ಕಸಗಳ ನಿಧಿಯನ್ನು ಶತ್ರುಗಳು ಸೂರೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವದು, ಅದರ ಒರತೆಯು ಒಣಗುವದು; [ಶತ್ರುವು] ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಗೊಂಬುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲ್ ತನ್ನ ಸಹೋದರರ ಮಧ್ಯದಲ್ಲಿ ಬೆಳೆಯುವನು. ಒಂದು ಬಲವಾದ ಪೂರ್ವದಿಕ್ಕಿನ ಗಾಳಿಯು ಬರುವದು. ಯೆಹೋವನ ಗಾಳಿಯು ಮರುಭೂಮಿಯಿಂದ ಬೀಸುವದು. ಅವನ ನೀರಿನ ಒರತೆಯು ಒಣಗಿಹೋಗುವದು, ಆ ಗಾಳಿಯು ಇಸ್ರೇಲರ ಐಶ್ವರ್ಯವನ್ನೆಲ್ಲಾ ಎತ್ತಿಕೊಂಡು ಹೋಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:15
27 ತಿಳಿವುಗಳ ಹೋಲಿಕೆ  

ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು ನೆಲಕ್ಕೆ ಬಿಸಾಡಿದರು. ಪೂರ್ವದಿಕ್ಕಿನ ಗಾಳಿಯು ಅದರ ಫಲವನ್ನು ಒಣಗಿಸಿತು. ಅದರ ಬಲವಾದ ಬಳ್ಳಿಗಳು ಮುರಿದು ಒಣಗಿಹೋದವು. ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.


ಹೌದು, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವುದೇ? ಅದಕ್ಕೆ ಪೂರ್ವದಿಕ್ಕಿನ ಗಾಳಿ ಬಡಿಯುವಾಗ ಅದು ಸಂಪೂರ್ಣವಾಗಿ ಒಣಗುವುದಿಲ್ಲವೇ? ಅದು ಮೊಳೆತ ಪಾತಿಗಳಲ್ಲಿಯೇ ಒಣಗಿ ಹೋಗುವುದಿಲ್ಲವೇ?’ ”


ಆ ಸಮಯದಲ್ಲಿ ಈ ಜನರಿಗೂ, ಯೆರೂಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು: “ಒಣ ಗಾಳಿಯು ಮರುಭೂಮಿಯ ಉನ್ನತ ಸ್ಥಳಗಳಿಂದ ನನ್ನ ಜನರ ಪುತ್ರಿಯರ ಕಡೆಗೆ ಬರುತ್ತದೆ. ಅದು ತೂರುವುದಕ್ಕೂ, ಶುದ್ಧಮಾಡುವುದಕ್ಕೂ ಆಗತಕ್ಕದ್ದಲ್ಲ.


“ಯೋಸೇಫನು ಫಲಭರಿತವಾದ ದ್ರಾಕ್ಷಿಬಳ್ಳಿ ಕಾಲುವೆಗಳ ಬಳಿಯಲ್ಲಿರುವ ಫಲಭರಿತ ದ್ರಾಕ್ಷಿಬಳ್ಳಿ, ಅದರ ಕೊಂಬೆಗಳು ಗೋಡೆಗಳನ್ನೇರುತ್ತವೆ.


ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು. “ನಾನು ಬಾಧೆಯನ್ನನುಭವಿಸಿದ ದೇಶ ಫಲಭರಿತವಾಗುವಂತೆ ದೇವರು ಮಾಡಿದ್ದಾರೆ,” ಎಂದನು.


ಬೆಳ್ಳಿಯನ್ನು ಸುಲಿದುಕೊಳ್ಳಿರಿ; ಬಂಗಾರವನ್ನು ಸುಲಿದುಕೊಳ್ಳಿರಿ. ಕೂಡಿಸಿಟ್ಟ ಧನಕ್ಕೂ, ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ.


ಇಸ್ರಾಯೇಲು ಹರಡುವ ದ್ರಾಕ್ಷಿಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿಸುತ್ತಾನೆ. ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಅಭಿವೃದ್ಧಿಯ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿದ್ದಾನೆ.


ಎಫ್ರಾಯೀಮ್ ಘನತೆಯು ಪಕ್ಷಿಯಂತೆ ಹಾರಿಹೋಗುವುದು. ಜನನವಿಲ್ಲ, ಗರ್ಭಧಾರಣೆ ಇಲ್ಲ, ಪ್ರಸವವಿಲ್ಲ.


ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸಿದೆ. ಅವರು ತಮ್ಮ ಬಲಿಗಳಿಂದ ನಾಚಿಕೆಪಡುವರು.


ಅವರ ದೇವರುಗಳನ್ನೂ, ಅವರ ವಿಗ್ರಹಗಳನ್ನೂ ಅವರ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನೂ ಅವನು ಸೂರೆಮಾಡಿ, ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋಗುವನು. ಕೆಲವು ವರ್ಷಗಳವರೆಗೆ ಅವನು ಉತ್ತರದ ಅರಸನ ಮೇಲೆ ಬಿಟ್ಟುಬಿಡುವನು.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ. “ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ. ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ. ಅದರ ಸಮುದ್ರವನ್ನು ಒಣಗಿಸುತ್ತೇನೆ. ಅದರ ಬುಗ್ಗೆಯನ್ನು ಬತ್ತಿಹೋಗುವಂತೆ ಮಾಡುತ್ತೇನೆ.


ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ, ಅದರ ಎಲ್ಲಾ ನಿಧಿನಿಕ್ಷೇಪಗಳನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ, ಯೆಹೂದದ ಅರಸರ ಎಲ್ಲಾ ಭಂಡಾರಗಳನ್ನೂ ಅವರ ಶತ್ರುಗಳ ಕೈಗೆ ಒಪ್ಪಿಸುವೆನು. ಅವರು ಅವುಗಳನ್ನು ಸುಲಿದುಕೊಂಡು, ತೆಗೆದುಕೊಂಡು ಬಾಬಿಲೋನಿಗೆ ಒಯ್ಯುವರು.


ನೀನು ಅವುಗಳನ್ನು ತೂರಲು, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವ ದೇವರಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧರಲ್ಲಿ ಮಹಿಮೆ ಹೊಂದುವೆ.


ಪ್ರಚಂಡ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ, ಅವರು ದೂರಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರಗಾಳಿಯಿಂದ ಸುತ್ತಿ ಆಡುವ ಧೂಳಿನಂತೆಯೂ ಓಡಿಹೋಗುವರು.


ಅವರು ಏಳದೆ ಇಲ್ಲವೆ ದೇಶವನ್ನು ವಶಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ, ಅವರ ತಂದೆಗಳ ಅಪರಾಧದ ನಿಮಿತ್ತ, ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.


ಅವನ ಸಂತಾನವು ಮುಗಿದು ಹೋಗಲಿ; ಎರಡನೆಯ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.


ಆದರೆ ದುಷ್ಟರು ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೇ ಇದ್ದಾರೆ.


ಬುಡದಿಂದ ಅವನ ಬೇರುಗಳು ಒಣಗುವುವು; ಮೇಲಿನಿಂದ ಅವನ ರೆಂಬೆಯು ಬಾಡುವುದು.


ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು, ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇರುವುದು. ಇವುಗಳಿಂದ ಜನಾಂಗಗಳನ್ನೆಲ್ಲಾ ಇರಿದು ಒಟ್ಟಿಗೆ ಭೂಮಿಯ ಅಂಚಿನವರೆಗೆ ಓಡಿಸುವನು. ಎಫ್ರಾಯೀಮ್ ಕುಲದ ಹತ್ತು ಸಾವಿರ ಜನರೂ ಇಂಥವರೇ. ಮನಸ್ಸೆ ಕುಲದ ಸಹಸ್ರ ಜನರೂ ಇಂಥವರೇ ಆಗಿದ್ದಾರೆ.”


ಅದಕ್ಕೆ ಅವನ ತಂದೆಯು ಒಪ್ಪದೆ, “ನನಗೆ ಗೊತ್ತು. ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವುದಲ್ಲದೆ ಅವನು ದೊಡ್ಡವನಾಗುವನು. ಆದರೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತತಿಯು ಜನಾಂಗಗಳ ಸಮೂಹವಾಗುವುದು,” ಎಂದನು.


ಅವುಗಳ ಹಿಂದೆಯೇ ಪೂರ್ವದಿಕ್ಕಿನ ಗಾಳಿಯಿಂದ ಬತ್ತಿ, ಒಣಗಿ ಹೋದ ಏಳು ತೆನೆಗಳು ಮೊಳೆತವು.


ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು.


ಅದಕ್ಕಿಂತ ಬಿರುಸಾದ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವುದು. ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯತೀರ್ಪುಗಳನ್ನು ಕೊಡುವೆನು.”


ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಗೋ, ನಾನು ಬಾಬಿಲೋನಿಗೆ ವಿರೋಧವಾಗಿಯೂ, ನನಗೆದುರಾಗಿ ಎದ್ದಿರುವ ಲೇಬ್ ಕಾಮೈ ಪ್ರಜೆಗಳ ವಿರೋಧವಾಗಿಯೂ ನಾಶಕಾರಿಯಾದ ಗಾಳಿಬೀಸುವಂತೆ ಮಾಡುವೆನು.


ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ತೆಗೆದು, ಅವಳು ಹುಟ್ಟಿದ ದಿವಸದಲ್ಲಿದ್ದ ಹಾಗೆ ಅವಳನ್ನು ಬೆತ್ತಲೆ ಮಾಡುತ್ತೇನೆ. ಅವಳನ್ನು ಮರುಭೂಮಿಯಂತೆ ಮಾಡಿ, ಅವಳನ್ನು ಒಣಗಿದ ಭೂಮಿಯಂತೆ ಇಟ್ಟು, ದಾಹದಿಂದ ಅವಳನ್ನು ಕೊಲ್ಲುವೆನು.


ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.


ಪೂರ್ವದಿಕ್ಕಿನ ಗಾಳಿಯಿಂದ ಒಣಗಿ ಬತ್ತಿ ಹೋಗಿದ್ದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು