Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:8 - ಕನ್ನಡ ಸಮಕಾಲಿಕ ಅನುವಾದ

8 ನಾನು ಮರಿಯನ್ನು ಕಳೆದುಕೊಂಡ ಕರಡಿಯಂತೆ ಅವರನ್ನು ಎದುರುಗೊಳ್ಳುವೆನು. ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ನಾನು ಸಿಂಹದ ಹಾಗೆ ಅವರನ್ನು ನುಂಗುವೆನು. ಕಾಡುಮೃಗವು ಅವರನ್ನು ಸೀಳಿ ಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಸೀಳಿಬಿಡುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಹರಿದುಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲೆ ಬೀಳುವೆನು. ಅವರ ಎದೆಯನ್ನು ಬಗಿದುಹಾಕುವೆನು. ಮೃಗರಾಜರಂತೆ ಅವರನ್ನು ನುಂಗಿಬಿಡುವೆನು. ಕಾಡುಮೃಗದಂತೆ ಅವರನ್ನು ಸೀಳಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಬಗಿದುಹಾಕುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಸೀಳಿಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿ ಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದುಬಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:8
11 ತಿಳಿವುಗಳ ಹೋಲಿಕೆ  

ಹೂಷೈ, “ನಿನ್ನ ತಂದೆಯೂ, ಅವನ ಮನುಷ್ಯರೂ ಪರಾಕ್ರಮಶಾಲಿಗಳು. ಅವರು ಅಡವಿಯಲ್ಲಿ ಮರಿಗಳನ್ನು ಕಳೆದುಕೊಂಡ ಕರಡಿಯ ಹಾಗೆಯೇ ಕೋಪವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು. ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವುದಿಲ್ಲ.


ನನ್ನ ಸೊತ್ತು ನನಗೆ ಚಿತ್ರವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಹದ್ದುಗಳು ಅದಕ್ಕೆ ವಿರೋಧವಾಗಿವೆ. ಬನ್ನಿ, ಕಾಡುಮೃಗಗಳನ್ನೆಲ್ಲಾ ಕೂಡಿಸಿರಿ, ನುಂಗುವುದಕ್ಕೆ ಅವುಗಳನ್ನು ತನ್ನಿರಿ.


ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವುದಕ್ಕೆ ಬನ್ನಿರಿ.


ಅವರ ಗರ್ಜನೆಯು ಸಿಂಹ ಆರ್ಭಟಿಸಿದಂತಿದೆ. ಪ್ರಾಯದ ಸಿಂಹ ಆರ್ಭಟಿಸಿದಂತಿದೆ. ಹೌದು, ಗರ್ಜಿಸುತ್ತಾ ಬೇಟೆಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ, ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.


ತನ್ನ ಮೂಢತೆಯಲ್ಲಿರುವ ಬುದ್ಧಿಹೀನನನ್ನು ಸಂಧಿಸುವುದಕ್ಕಿಂತ ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಸಂಧಿಸುವುದು ಮೇಲು.


ಅಡವಿಯಿಂದ ಬಂದ ಹಂದಿಗಳು ಅದನ್ನು ಹಾಳು ಮಾಡುತ್ತವೆ; ಕಾಡಿನ ಮೃಗಗಳು ಅದನ್ನು ತಿಂದು ಹಾಕುತ್ತವೆ.


“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.


ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.


ತನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು, ಅವಳು ಹೇಳಿದ ಅವಳ ದ್ರಾಕ್ಷಿಬಳ್ಳಿಗಳನ್ನು, ಅವಳ ಅಂಜೂರದ ಮರಗಳನ್ನು ನಾನು ಹಾಳು ಮಾಡಿ, ಅವುಗಳನ್ನು ನಾನು ಕಾಡನ್ನಾಗಿ ಮಾಡುವೆನು. ಕಾಡುಮೃಗಗಳು ಅವುಗಳನ್ನು ನುಂಗುವವು.


ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು