ಹೋಶೇಯ 14:3 - ಕನ್ನಡ ಸಮಕಾಲಿಕ ಅನುವಾದ3 ಅಸ್ಸೀರಿಯ ನಮ್ಮನ್ನು ರಕ್ಷಿಸುವುದಿಲ್ಲ. ನಾವು ಕುದುರೆಗಳ ಮೇಲೆ ಸವಾರಿ ಮಾಡುವುದಿಲ್ಲ. ನಮ್ಮ ಕೈಗಳಿಂದ ಉಂಟು ಮಾಡಿದವುಗಳಿಗೆ, ‘ನೀವು ನಮ್ಮ ದೇವರುಗಳೇ,’ ಎಂದು ನಾವು ಇನ್ನು ಮುಂದೆ ಹೇಳುವುದೇ ಇಲ್ಲ. ಏಕೆಂದರೆ ನಿಮ್ಮಲ್ಲಿ ದಿಕ್ಕಿಲ್ಲದವರಿಗೆ ಅನುಕಂಪ ದೊರೆಯುತ್ತದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಶ್ಶೂರವು ನಮ್ಮನ್ನು ರಕ್ಷಿಸುವದೆಂದು ನಂಬೆವು; [ಐಗುಪ್ತದ] ಕುದುರೆಗಳನ್ನು ಹತ್ತೆವು; ನಮ್ಮ ಕೈಕೆಲಸದ ಬೊಂಬೆಗಳಿಗೆ - ನೀವು ನಮ್ಮ ದೇವರುಗಳು ಎಂದು ಇನ್ನು ಹೇಳೆವು; ನೀನೇ ಅನಾಥರನ್ನು ಕರುಣಿಸುವಿ ಎಂಬದಾಗಿ ಅರಿಕೆಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.” ಅಧ್ಯಾಯವನ್ನು ನೋಡಿ |