Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 14:5 - ಕನ್ನಡ ಸಮಕಾಲಿಕ ಅನುವಾದ

5 ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು. ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಆಳಕ್ಕೆ ಹರಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಒಡೆಯುವದು; ಲೆಬನೋನಿನ [ದೇವದಾರುಗಳ] ಹಾಗೆ ಬೇರುಬಿಟ್ಟುಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇಸ್ರೇಲಿಗೆ ನಾನು ಇಬ್ಬನಿಯಂತಿರುವೆನು. ನೆಲದಾವರೆಯಂತೆ ಇಸ್ರೇಲ್ ಅರಳುವನು. ಲೆಬನೋನಿನ ದೇವದಾರು ವೃಕ್ಷಗಳಂತೆ ಸೊಂಪಾಗಿ ಬೆಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 14:5
32 ತಿಳಿವುಗಳ ಹೋಲಿಕೆ  

ಅದು ಸಮೃದ್ಧಿಯಾಗಿ ಅರಳಿ, ಆನಂದ ಧ್ವನಿ ಎತ್ತಿ ಉಲ್ಲಾಸಿಸುವುದು. ಲೆಬನೋನಿನ ಘನತೆಯು ಮತ್ತು ಕರ್ಮೆಲ್, ಶಾರೋನಿನ ಗೌರವವು ಅದಕ್ಕೆ ಕೊಡಲಾಗುವುದು. ಅವರು ಯೆಹೋವ ದೇವರ ಮಹಿಮೆಯನ್ನು ಮತ್ತು ನಮ್ಮ ದೇವರ ಘನತೆಯನ್ನು ಕಾಣುವರು.


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು. ಇಸ್ರಾಯೇಲು ಹೂ ಅರಳಿ ಚಿಗುರುವುದು. ಭೂಲೋಕವನ್ನೆಲ್ಲಾ ಫಲದಿಂದ ತುಂಬಿಸುವನು.


ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು


“ನೀವು ಉಡುಪಿನ ವಿಷಯ ಚಿಂತಿಸುವುದೇಕೆ? ಅಡವಿಯಲ್ಲಿ ಹೂವುಗಳು ಬೆಳೆಯುವುದನ್ನು ಗಮನಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ.


ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯವರೆಗೂ ಇರಲಿ; ಅದರ ಫಲವು ಲೆಬನೋನಿನ ಹಾಗೆ ಸಮೃದ್ಧಿಯಾಗಲಿ; ಪಟ್ಟಣದವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿ ಆಗಲಿ.


ನನ್ನ ಬೇರು ನೀರಿನ ಬಳಿ ಹಬ್ಬಿರುತ್ತದೆ; ರಾತ್ರಿಯಿಡಿ ನನ್ನ ಕೊಂಬೆಯ ಮೇಲೆ ಮಂಜು ಬಿದ್ದಿರುತ್ತದೆ.


ನನ್ನ ಬೋಧನೆ ಮಳೆಯಂತೆ ಸುರಿಯುವುದು. ನನ್ನ ಮಾತು ಮಂಜಿನಂತೆಯೂ, ಹುಲ್ಲಿನ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವುದು.


ಇದಲ್ಲದೆ ಯಾಕೋಬನ ಶೇಷವು ಅನೇಕ ಜನಾಂಗಳ ಮಧ್ಯದಲ್ಲಿ ಯೆಹೋವ ದೇವರಿಂದ ಬಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವುದು. ಅದು ಮನುಷ್ಯರಿಗೋಸ್ಕರ ಆತುಕೊಳ್ಳುವುದಿಲ್ಲ, ಮನುಷ್ಯ ಮಕ್ಕಳಿಗಾಗಿ ಕಾದುಕೊಳ್ಳುವುದಿಲ್ಲ.


ಏಕೆಂದರೆ ನಾನು ಬಾಯಾರಿದ ಭೂಮಿಯ ಮೇಲೆ ನೀರನ್ನು ಸುರಿಸುವೆನು. ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.


ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.


ಯೆಹೋವ ದೇವರು ನನಗೆ ಹೀಗೆ ಹೇಳಿದರು, “ನಾನು ನನ್ನ ವಿಶ್ರಾಂತಿಯನ್ನು ತೆಗೆದುಕೊಳ್ಳುವೆನು. ಬಿಸಿಹಗಲಿನ ಸೂರ್ಯನಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದಂತೆಯೂ ನಾನು ನನ್ನ ನಿವಾಸಸ್ಥಾನದಲ್ಲಿ ಸುಮ್ಮನೆ ನೋಡುತ್ತಿರುವೆನು.”


ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ, ಭೂಮಿಯನ್ನು ನೆನಸುತ್ತಾ ಸುರಿಯುವ ಮಳೆಗಳ ಹಾಗೆಯೂ ಅರಸನು ಇರಲಿ.


ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.


ಮೋಡವಿಲ್ಲದ ಮುಂಜಾನೆ ಸೂರ್ಯೋದಯದ ಸಮಯದಲ್ಲಿಯ ಉದಯದ ಬೆಳಕಿನಂತಿರುವನು. ಭೂಮಿಯಿಂದ ಹುಲ್ಲು ಮೊಳೆಯಿಸುವ ಮಳೆಯ ನಂತರದ ಪ್ರಕಾಶದಂತಿರುವನು.’


“ಅಡವಿಯ ಹೂವುಗಳು ಹೇಗೆ ಬೆಳೆಯುತ್ತವೆಂದು ಯೋಚಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ.


ನಿನ್ನ ಎರಡು ಸ್ತನಗಳು ನೆಲದಾವರೆಯ ನಡುವೆ ಮೇಯುವ ಹುಲ್ಲೆಯ ಅವಳಿಮರಿಗಳ ಹಾಗಿವೆ.


ನನ್ನ ಪ್ರಿಯನು ನನ್ನವನೇ, ನಾನು ಅವನವಳೇ. ಅವನು ನೆಲದಾವರೆಗಳ ನಡುವೆ ಮಂದೆಯನ್ನು ಮೇಯಿಸುತ್ತಾನೆ.


ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.


ಅದಕ್ಕಾಗಿ ಸ್ಥಳ ಸಿದ್ಧಮಾಡಿದಿರಿ. ಆಗ ಅದು ಬೇರೂರಿ ದೇಶವನ್ನು ತುಂಬಿತು.


ನೀತಿವಂತರು ಖರ್ಜೂರ ಮರದ ಹಾಗೆ ವೃದ್ಧಿಯಾಗುವರು. ಅವರು ಲೆಬನೋನಿನಲ್ಲಿರುವ ದೇವದಾರಿನ ಹಾಗೆ ಬೆಳೆಯುವರು.


ಆ ಒಂದಾಗಿರುವಿಕೆಯು ಹೆರ್ಮೋನ್ ಪರ್ವತದಿಂದ ಪ್ರಾರಂಭವಾಗಿ ಚೀಯೋನ್ ಪರ್ವತಗಳ ಮೇಲೆ ಬೀಳುವ ಮಂಜಿನ ಹಾಗೆಯೂ ಇದೆ. ಏಕೆಂದರೆ ಎಲ್ಲಿ ಒಂದಾಗಿರುವಿಕೆಯು ಇದೆಯೋ ಅಲ್ಲಿ ಯೆಹೋವ ದೇವರು ಆಶೀರ್ವಾದವನ್ನೂ, ಯುಗಯುಗಾಂತರಕ್ಕೂ ಜೀವವನ್ನೂ ಅನುಗ್ರಹಿಸುತ್ತಾರೆ.


“ಆಕಾಶಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ. ಗಗನವು ನೀತಿಯನ್ನು ಸುರಿಸಲಿ. ಭೂಮಿಯು ತೆರೆದು ರಕ್ಷಣೆಯನ್ನು ತರಲಿ. ನೀತಿಯು ಅದರೊಟ್ಟಿಗೆ ಮೊಳೆಯಲಿ. ಇದನ್ನು ಸೃಷ್ಟಿಸಿದ ಯೆಹೋವ ದೇವರು ನಾನೇ!


ಅವರು ಯೆಹೋವ ದೇವರ ಆಲಯದಲ್ಲಿ ನೆಟ್ಟ ಸಸಿಗಳಂತಿರುವರು. ನಮ್ಮ ದೇವರ ಅಂಗಳಗಳಲ್ಲಿ ಅವರು ವೃದ್ಧಿ ಆಗುವರು.


ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ?


ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ, ಅವನನ್ನು ನಡೆಸುತ್ತೇನೆ. ಅವನಿಗೂ, ಅವನ ದುಃಖಿತರಿಗೂ ಆದರಣೆಗಳನ್ನು ಪುನಃಸ್ಥಾಪಿಸುವೆನು.


ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


“ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು.” “ಇಗೋ, ನಿಮ್ಮ ಬಳಿಗೆ ಬರುತ್ತೇವೆ, ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ.


ಹೌದು, ಅವರಿಗೆ ಒಳ್ಳೆಯದನ್ನು ಮಾಡುವುದಕ್ಕೆ ಅವರೊಂದಿಗೆ ಆನಂದಪಡುವೆನು. ನಿಜವಾಗಿ ನನ್ನ ಪೂರ್ಣಹೃದಯದಿಂದಲೂ, ನನ್ನ ಪೂರ್ಣಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.


ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು