ಹೋಶೇಯ 14:7 - ಕನ್ನಡ ಸಮಕಾಲಿಕ ಅನುವಾದ7 ಆತನ ನೆರಳಿನಲ್ಲಿ ಜನರು ವಾಸಿಸುವರು, ಧಾನ್ಯದ ಹಾಗೆ ಜೀವಿಸುವರು, ದ್ರಾಕ್ಷಿಬಳ್ಳಿಯ ಹಾಗೆ ಫಲಪ್ರದವಾಗುವರು. ಇಸ್ರಾಯೇಲಿನ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷೆಯಂತೆ ಪಲ್ಲವಿಸುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಸ್ರೇಲಿನ ಜನರು ಮತ್ತೆ ನನ್ನ ಆಶ್ರಯದಲ್ಲಿ ವಾಸಿಸುವರು. ಧಾನ್ಯದ ಸಸಿಗಳಂತೆ ಬೆಳೆಯುವರು, ದ್ರಾಕ್ಷಾಲತೆಯಿಂದ ಚಿಗುರುವರು. ಲೆಬನೋನಿನ ದ್ರಾಕ್ಷಿಬಳ್ಳಿಯಂತೆ ಅವರು ಇರುವರು.” ಅಧ್ಯಾಯವನ್ನು ನೋಡಿ |