Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:11 - ಕನ್ನಡ ಸಮಕಾಲಿಕ ಅನುವಾದ

11 ನಾನು ಅವಳಿಗೆ ಉಲ್ಲಾಸಕರವಾದ ಅವಳ ಹಬ್ಬ, ಅವಳ ಅಮಾವಾಸ್ಯೆ, ಅವಳ ಸಬ್ಬತ್ ದಿನದ ಆಚರಣೆ, ಅವಳ ಸಭಾ ಸಮಾರಂಭ ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಅವಳ ಉಲ್ಲಾಸ, ಹಬ್ಬ, ಹುಣ್ಣಿಮೆ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವಳ ಸಂಭ್ರಮಗಳನ್ನು - ಹಬ್ಬ, ಹುಣ್ಣಿಮೆ, ಸಬ್ಬತ್ ಆಚರಣೆ, ಸಭೆಸಮಾರಂಭಗಳು - ಇವೆಲ್ಲವನ್ನೂ ನಿಲ್ಲಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಅವಳ ಉಲ್ಲಾಸ, ಹಬ್ಬ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು (ದೇವರು) ಆಕೆಯ ಉಲ್ಲಾಸಗಳನ್ನು ಅವಳಿಂದ ತೆಗೆಯುವೆನು. ಆಕೆಯ ಹಬ್ಬದ ದಿನಗಳು, ಅಮಾವಾಸ್ಯೆಯ ಹಬ್ಬ, ಸಬ್ಬತ್ ದಿನಗಳನ್ನು ಆಕೆಯಿಂದ ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:11
17 ತಿಳಿವುಗಳ ಹೋಲಿಕೆ  

ನಿಮ್ಮ ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ. ನಿಮ್ಮ ಸಭೆಗಳು ನನಗೆ ದುರ್ವಾಸನೆ ಇದ್ದಂತೆ.


ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,


ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು.


ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸದ ಸ್ವರವನ್ನೂ, ಸಂತೋಷದ ಸ್ವರವನ್ನೂ, ಮದುಮಗನ ಸ್ವರವನ್ನೂ, ಮದುಮಗಳ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿಬಿಡುವೆನು.


ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು.


“ಆ ದಿನದಲ್ಲಿ ದೇವಾಲಯದ ಹಾಡುಗಳು ವಿಲಾಪವಾಗುವುವು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. “ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವುವು. ಮೌನವಾಗಿರಿ!”


ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.


ಆಗ ನಿನ್ನ ಹಾಡುಗಳ ಶಬ್ದವನ್ನು ನಿಲ್ಲಿಸುವೆನು. ನಿನ್ನ ಕಿನ್ನರಿಗಳ ಧ್ವನಿ ಇನ್ನು ಕೇಳಿಸುವುದಿಲ್ಲ.


ನಾನು ಈ ದೇಶಗಳಿಂದ ಸಂತೋಷದ ಶಬ್ದ ಮತ್ತು ಸಂತೋಷದ ಶಬ್ದವನ್ನು ಮಾತ್ರ ತೆಗೆದುಹಾಕುತ್ತೇನೆ, ವಧು ಅಥವಾ ವಧುವಿನ ಧ್ವನಿ ಅಲ್ಲಿ ಕೇಳಿಸುವುದಿಲ್ಲ, ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು.


ಯಾರೊಬ್ಬಾಮನು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ, ಪೀಠದ ಮೇಲೆ ಬಲಿಗಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿನಲ್ಲಿ ಮಾಡಿ, ಅವನು ರೂಪಿಸಿದ ಕರುಗಳ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ನೇಮಿಸಿದ ಉನ್ನತ ಸ್ಥಳಗಳ ಯಾಜಕರನ್ನೇ ಇರಿಸಿದನು.


ಅವರು ಯೆಹೋವ ದೇವರಿಗೆ ಅಪನಂಬಿಗಸ್ತರಾಗಿದ್ದಾರೆ. ಅವರು ವ್ಯಭಿಚಾರದ ಮಕ್ಕಳನ್ನು ಪಡೆದಿದ್ದಾರೆ. ಅವರು ತಮ್ಮ ಅಮಾವಾಸ್ಯೆ ಹಬ್ಬಗಳನ್ನು ಆಚರಿಸಿದಾಗ, ಅವರ ಹೊಲಗಳು ನುಂಗಿಬಿಡಲಾಗುವವು.


ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದುಹೋಗುವುದು. ಏಕೆಂದರೆ ನಿಮ್ಮ ಭೂಮಿಯು ತನ್ನ ಬೆಳೆಯನ್ನು ಕೊಡದೆ ಇರುವುದು ಭೂಮಿಯ ಮರಗಳು ತಮ್ಮ ಫಲಗಳನ್ನು ಕೊಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು