ಹೋಶೇಯ 2:14 - ಕನ್ನಡ ಸಮಕಾಲಿಕ ಅನುವಾದ14 ಆದ್ದರಿಂದ ನಾನು ಅವಳನ್ನು ಮೋಹಿಸಿ, ಅವಳನ್ನು ಮರುಭೂಮಿಯೊಳಗೆ ಕರೆದುಕೊಂಡು ಬಂದು, ಅವಳ ಸಂಗಡ ಹಿತಕರವಾಗಿ ಮಾತನಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಆಹಾ, ನಾನು ಅವಳನ್ನು ಒಲಿಸಿ, ಅಡವಿಗೆ ಕರೆದುಕೊಂಡು ಹೋಗಿ, ಅವಳೊಂದಿಗೆ ಹೃದಯಂಗಮವಾಗಿ ಮಾತನಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದುದರಿಂದ ಇಗೋ, ನಾನು ಅವಳನ್ನು ಪುನಃ ಬೆಂಗಾಡಿಗೆ ಕರೆದೊಯ್ಯುವೆನು. ಹೃದಯಂಗಮವಾಗಿ ಅವಳನ್ನು ಒಲಿಸಿಕೊಂಡು ಮಾತಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಹಾ, ನಾನು ಅವಳನ್ನು ಒಲಿಸಿ ಅಡವಿಗೆ ಕರಕೊಂಡು ಹೋಗಿ ಅವಳೊಂದಿಗೆ ಹೃದಯಂಗಮವಾಗಿ ಮಾತಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಆದ್ದರಿಂದ ನಾನು (ಯೆಹೋವನು) ಆಕೆಯೊಂದಿಗೆ ಸರಸ ಸಲ್ಲಾಪವಾಡುವೆನು. ಆಕೆಯನ್ನು ಮರುಭೂಮಿಗೆ ನಡೆಸಿ ಆಕೆಯೊಂದಿಗೆ ನಯನುಡಿಗಳಿಂದ ಮಾತಾಡುವೆನು. ಅಧ್ಯಾಯವನ್ನು ನೋಡಿ |
“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.