ಹೋಶೇಯ 2:2 - ಕನ್ನಡ ಸಮಕಾಲಿಕ ಅನುವಾದ2 “ನಿಮ್ಮ ತಾಯಿಯ ಸಂಗಡ ವಾದಮಾಡಿರಿ, ಅವಳೊಂದಿಗೆ ವಾದಮಾಡಿರಿ, ಏಕೆಂದರೆ ಅವಳು ನನ್ನ ಹೆಂಡತಿಯಲ್ಲ, ಮತ್ತು ನಾನು ಅವಳ ಗಂಡನಲ್ಲ. ಅವಳು ತನ್ನ ವ್ಯಭಿಚಾರದ ನೋಟವನ್ನು ಮತ್ತು ತನ್ನ ಸ್ತನಗಳ ಮಧ್ಯದಿಂದ ಅಪನಂಬಿಗಸ್ತಿಕೆಯನ್ನು ತ್ಯಜಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನಿಮ್ಮ ತಾಯಿಯ ಸಂಗಡ ವಾದಮಾಡಿ; ಅವಳು ನನ್ನ ಹೆಂಡತಿಯಲ್ಲ, ನಾನು ಅವಳ ಗಂಡನಲ್ಲ. ಅವಳು ವ್ಯಭಿಚಾರವನ್ನು ತನ್ನ ಮುಖಸೌಂದರ್ಯದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮಕ್ಕಳೇ, ವಾದಿಸಿರಿ; ನಿಮ್ಮ ತಾಯಿಯೊಡನೆ ವಾದಿಸಿರಿ. ಅವಳು ನನ್ನ ಪತ್ನಿಯಲ್ಲ, ನಾನು ಅವಳ ಪತಿಯಲ್ಲ. ತನ್ನ ಮುಖದಿಂದ ವೇಶ್ಯಾಚಾರದ ಸೋಗನ್ನೂ ಸ್ತನಮಧ್ಯದಿಂದ ವ್ಯಭಿಚಾರದ ಬೆಡಗನ್ನೂ ತ್ಯಜಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ. ನಾನು ಅವಳ ಗಂಡನಲ್ಲ; ಅವಳು ಸೂಳೆತನವನ್ನು ತನ್ನ ಮುಖದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನಿಮ್ಮ ತಾಯಿಯೊಂದಿಗೆ ವಾದಿಸಿರಿ. ಯಾಕೆಂದರೆ ಆಕೆ ನನ್ನ ಹೆಂಡತಿಯಲ್ಲ. ನಾನು ಆಕೆಯ ಗಂಡನಲ್ಲ. ವೇಶ್ಯೆಯ ಹಾಗೆ ಆಕೆ ವರ್ತಿಸುವದನ್ನು ನಿಲ್ಲಿಸು ಎಂದು ಹೇಳಿರಿ. ಆಕೆಯ ಸ್ತನಗಳ ಮಧ್ಯದಿಂದ ಆಕೆಯ ಪ್ರಿಯತಮರನ್ನು ತೆಗೆದುಹಾಕಲು ಹೇಳಿರಿ. ಅಧ್ಯಾಯವನ್ನು ನೋಡಿ |
“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.