Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:6 - ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ನಾನು ಅವಳ ಮಾರ್ಗಕ್ಕೆ ಮುಳ್ಳುಗಳ ಬೇಲಿಹಾಕಿ ತಡೆಯುವೆನು. ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಅವಳ ಮುಂದೆ ಗೋಡೆಯನ್ನು ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ತನಗೆ ಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದುದರಿಂದ ನಾನು ಅವಳ ದಾರಿಗೆ ಮುಳ್ಳುಬೇಲಿಹಾಕುವೆನು. ಇಷ್ಟಬಂದ ದಾರಿಯನ್ನು ಹಿಡಿಯದಂತೆ ಅವಳ ಮುಂದೆ ಅಡ್ಡಗೋಡೆಯನ್ನು ಎಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ಬೇಕುಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಅದಕ್ಕಾಗಿ ಯೆಹೋವನಾದ ನಾನು ಇಸ್ರೇಲರ ಮಾರ್ಗವನ್ನು ಮುಳ್ಳುಗಳಿಂದ ಮುಚ್ಚಿಬಿಡುವೆನು. ನಾನು ಗೋಡೆ ಕಟ್ಟುವೆನು. ಆಗ ಅವಳು ತನ್ನ ದಾರಿಯನ್ನು ಕಂಡುಕೊಳ್ಳಲಾರಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:6
10 ತಿಳಿವುಗಳ ಹೋಲಿಕೆ  

ನಾನು ಮುಂದೆ ಹೋಗದಂತೆ ದೇವರು ನನ್ನ ದಾರಿಗೆ ಬೇಲಿ ಹಾಕಿದ್ದಾರೆ; ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾರೆ.


ದೇವರು ಸುತ್ತಲೂ ಬೇಲಿಹಾಕಿ, ದಾರಿ ಮುಚ್ಚಿದ ಮೇಲೆ ಅವರಿಗೆ ಬೆಳಕು ಏಕೆ?


ನಿನ್ನ ಶತ್ರುಗಳು ನಿನ್ನ ಸುತ್ತಲೂ ಅಡ್ಡಗೋಡೆಯನ್ನು ಕಟ್ಟಿ, ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಬಂಧಿಸುವ ದಿನಗಳು ಬರುವವು.


ಬಹು ವಿಶೇಷವಾದ ಪ್ರಕಟನೆಗಳ ಬಗ್ಗೆ ನಾನು ಗರ್ವಪಡದಂತೆ, ನನ್ನ ಶರೀರದಲ್ಲಿ ಒಂದು ಮುಳ್ಳನ್ನು ಕೊಡಲಾಗಿತ್ತು. ಅದು ನನ್ನನ್ನು ಕಾಡಿಸಲು ಕಳುಹಿಸಲಾದ ಸೈತಾನನ ದೂತನೇ ಆಗಿತ್ತು.


ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವುವಂತೆ ಮಾಡಿ, ಮಾರ್ಗವಲ್ಲದ ಕಾಲು ದಾರಿಗಳಲ್ಲಿ ಅವರನ್ನು ನಡೆಯುವಂತೆ ಮಾಡಿವೆ.


ಇಗೋ, ನಾಶನದಿಂದ ಅವರು ತಪ್ಪಿಸಿಕೊಂಡರೂ ಈಜಿಪ್ಟ್ ಅವರನ್ನು ಕೂಡಿಸುವುದು. ಮೋಫ್ ಪಟ್ಟಣವು ಅವರನ್ನು ಹೂಳುವುದು. ಅವರ ಬೆಳ್ಳಿಯ ಬೊಕ್ಕಸಗಳು ಮುಳ್ಳು ಪೊದೆಗಳ ಪಾಲಾಗುವುವು. ಮುಳ್ಳುಗಿಡಗಳು ಅವರ ಗುಡಾರಗಳನ್ನು ಆವರಿಸಿಕೊಂಡಿರುವುದು.


ಇಸ್ರಾಯೇಲಿನ ಪಾಪಕ್ಕೆ ಆಸ್ಪದವಾದ ಆವೆನಿನ ಉನ್ನತ ಪೂಜಾಸ್ಥಳಗಳು ಹಾಳಾಗಿ ಹೋಗುವುವು. ಮುಳ್ಳುಗಿಡಗಳೂ, ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವುವು. ಜನರು ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ! ಗುಡ್ಡಗಳಿಗೆ, ನಮ್ಮನ್ನು ಮುಚ್ಚಿಕೊಳ್ಳಿರಿ!” ಎನ್ನುವರು.


“ಆದರೆ ನೀವು ಮಾಟಗಾತಿಯ ಮಕ್ಕಳೇ, ವೇಶ್ಯೆ ಮತ್ತು ವ್ಯಭಿಚಾರಿಗಳ ಸಂತಾನದವರೇ, ಇಲ್ಲಿಗೆ ಬನ್ನಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು