Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:8 - ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಅವರು ಬಾಳನಿಗಾಗಿ ಉಪಯೋಗಿಸಿದ ಧಾನ್ಯ, ದ್ರಾಕ್ಷಾರಸ ಹಾಗೂ ಎಣ್ಣೆಯನ್ನು ನಾನೇ ಅವಳಿಗೆ ಕೊಟ್ಟು, ಬೆಳ್ಳಿಬಂಗಾರವನ್ನು ನಾನೇ ಧಾರಾಳವಾಗಿ ಹೆಚ್ಚಿಸಿದೆನೆಂದು ಅವಳು ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವಳಿಗೆ ದವಸಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಕೊಟ್ಟವನು ನಾನೇ ಎಂಬುದನ್ನು ಅರಿತುಕೊಳ್ಳದೆಹೋದಳು. ನಾನು ಧಾರಾಳವಾಗಿ ಕೊಟ್ಟ ಬೆಳ್ಳಿಬಂಗಾರಗಳನ್ನು ಬಾಳನ ಪೂಜೆಗೆ ಉಪಯೋಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತನ್ನ ಧಾನ್ಯದ್ರಾಕ್ಷಾರಸತೈಲಗಳು ನನ್ನಿಂದ ದೊರೆತವುಗಳೆಂದೂ ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿ ಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಆಕೆಗೆ (ಇಸ್ರೇಲಿಗೆ) ನಾನು (ಯೆಹೋವನು) ಧಾನ್ಯ, ಎಣ್ಣೆ, ದ್ರಾಕ್ಷಾರಸವನ್ನು ಕೊಟ್ಟವನೆಂದು ತಿಳಿದಿಲ್ಲ. ಆಕೆಗೆ ಹೆಚ್ಚೆಚ್ಚಾಗಿ ಬೆಳ್ಳಿಬಂಗಾರಗಳನ್ನು ಕೊಡುತ್ತಾ ಬಂದೆನು. ಆದರೆ ಆ ಬೆಳ್ಳಿಬಂಗಾರವನ್ನು ಇಸ್ರೇಲ್ ಬಾಳನ ವಿಗ್ರಹಗಳನ್ನು ತಯಾರಿಸಲು ಉಪಯೋಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:8
27 ತಿಳಿವುಗಳ ಹೋಲಿಕೆ  

ಎತ್ತು ತನ್ನ ಯಜಮಾನನನ್ನು, ಕತ್ತೆಯು ತನ್ನ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುವು. ಆದರೆ ಇಸ್ರಾಯೇಲಿಗೆ ತಿಳಿದಿಲ್ಲ. ನನ್ನ ಜನರಿಗೂ ತಿಳಿಯುವುದಿಲ್ಲ.”


ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ. ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ, ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅದೆಲ್ಲವೂ ಕಮ್ಮಾರರ ಕೈಕೆಲಸವೇ. ಅವರು ನರಬಲಿಯನ್ನು ಅರ್ಪಿಸುತ್ತಾರೆ, ಬಸವನ ವಿಗ್ರಹಕ್ಕೆ ಮುದ್ದಿಡುತ್ತಾರೆ,” ಎಂದು ಜನರು ಅವರ ಬಗ್ಗೆ ಹೇಳುತ್ತಾರೆ.


ಅವರು ಅರಸರನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ. ಅವರು ನನ್ನ ಅನುಮತಿಯಿಲ್ಲದೆ ರಾಜಕುಮಾರರನ್ನು ಆಯ್ಕೆ ಮಾಡಿದ್ದಾರೆ. ಅವರು ತಾವು ನಾಶವಾಗುವಂತೆ ತಮ್ಮ ಬೆಳ್ಳಿಯಿಂದಲೂ, ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.


ಮದ್ಯಪಾನ, ದ್ರಾಕ್ಷಾರಸ ಇವು ಜನರನ್ನು ಜ್ಞಾನಹೀನರನ್ನಾಗಿ ಮಾಡುತ್ತವೆ.


ಇದಲ್ಲದೆ, ದೇವರನ್ನು ಒಪ್ಪಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡೆಸುವವರಾಗುವಂತೆ ದೇವರು ಅನಾಚಾರದ ಮನಸ್ಸಿಗೆ ಅವರನ್ನು ಒಪ್ಪಿಸಿದರು.


“ಕೆಲವೇ ದಿನಗಳಲ್ಲಿ, ಕಿರಿಯ ಮಗನು ಎಲ್ಲವನ್ನೂ ಕೂಡಿಸಿಕೊಂಡು, ದೂರದೇಶಕ್ಕೆ ಪ್ರಯಾಣಮಾಡಿ, ಅಲ್ಲಿ ದುಂದು ವೆಚ್ಚದ ಜೀವನ ಮಾಡಿ ತನ್ನ ಆಸ್ತಿಯನ್ನು ಹಾಳು ಮಾಡಿಕೊಂಡನು.


ಆದ್ದರಿಂದ ತಮ್ಮ ಬಲೆಗೆ ಬಲಿ ಅರ್ಪಿಸಿ, ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ. ಏಕೆಂದರೆ ಇವುಗಳಿಂದ ಅವರ ಭೋಜನ ಪುಷ್ಟಿಯಾಗಿಯೂ, ಅವರ ಆಹಾರ ರುಚಿಯುಳ್ಳದ್ದಾಗಿಯೂ ಇದೆ.


ಅವರ ತಾಯಿ ವಿಶ್ವಾಸದ್ರೋಹಿ ಮತ್ತು ಅವಮಾನಕರವಾಗಿ ಅವರನ್ನು ಗರ್ಭಧರಿಸಿದ್ದಾರೆ. ಅವಳು, ‘ನನಗೆ ನನ್ನ ಅನ್ನಪಾನ, ನನ್ನ ಉಣ್ಣೆ ಮತ್ತು ನನ್ನ ನಾರಿನ ಉಡುಗೆ, ನನ್ನ ತೈಲ, ನನ್ನ ಪಾಯಸಪಾನಕಗಳನ್ನು ಕೊಡುವಂಥ ನನ್ನ ಪ್ರೇಮಿಗಳ ಹಿಂದೆ ಹೋಗುವೆನು,’ ಎಂದುಕೊಂಡಿದ್ದಾಳೆ.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


‘ಗಗನದ ಒಡತಿ,’ ಎಂದು ಇವರು ಕರೆಯುವ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯ ದೇವತೆಗಳಿಗೆ ಪಾನ ನೈವೇದ್ಯವನ್ನು ಅರ್ಪಿಸುತ್ತಾರೆ.”


ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆ ಮಾಡುವರು.


ಹೊರಗೆ ಹೋಗಿ ತಮ್ಮ ದ್ರಾಕ್ಷಿ ಫಲಗಳನ್ನು ಕೊಯ್ದು, ಅವುಗಳನ್ನು ತುಳಿದು ಸಂತೋಷಪಟ್ಟು, ತಮ್ಮ ದೇವರ ಮನೆಯೊಳಗೆ ಹೋಗಿ, ತಿಂದು ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಇಸ್ರಾಯೇಲು ಹರಡುವ ದ್ರಾಕ್ಷಿಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿಸುತ್ತಾನೆ. ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಅಭಿವೃದ್ಧಿಯ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿದ್ದಾನೆ.


ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.


ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ನನ್ನ ಧೂಪವನ್ನು ನನ್ನ ಎಣ್ಣೆಯನ್ನು ಇಟ್ಟಿದ್ದ ಮೇಜನ್ನು ಸಿದ್ಧಮಾಡಿದೆ.


ಅರಸನಾದ ನೆಬೂಕದ್ನೆಚ್ಚರನು ಸುಮಾರು 27 ಮೀಟರ್ ಎತ್ತರ ಮತ್ತು ಸುಮಾರು ಎರಡೂವರೆ ಮೀಟರ್ ಅಗಲ ಇರುವ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬಿಲೋನ್ ಪ್ರಾಂತದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.


“ಪೂರ್ವದಲ್ಲಿ ಎಫ್ರಾಯೀಮು ಮಾತನಾಡುವಾಗ, ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು. ಆದರೆ ಬಾಳನ ಆರಾಧನೆಯಲ್ಲಿ ಅವನು ಅಪರಾಧಿಯಾಗಿ ಸತ್ತನು.


ನಮ್ಮ ದೇವರಾದ ಯೆಹೋವ ದೇವರೇ, ನಿಮ್ಮ ಪರಿಶುದ್ಧ ನಾಮಕ್ಕೋಸ್ಕರ ನಿಮಗೆ ಆಲಯವನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿಮ್ಮಿಂದ ಬಂದದ್ದು. ಸಮಸ್ತವೂ ನಿಮ್ಮದು.


ನಾನು ಮುಂದೆ ಹೋಗದಂತೆ ದೇವರು ನನ್ನ ದಾರಿಗೆ ಬೇಲಿ ಹಾಕಿದ್ದಾರೆ; ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು