Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 3:5 - ಕನ್ನಡ ಸಮಕಾಲಿಕ ಅನುವಾದ

5 ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 3:5
36 ತಿಳಿವುಗಳ ಹೋಲಿಕೆ  

ಆದರೆ ಅವರು ತಮ್ಮ ದೇವರಾದ ಯೆಹೋವ ದೇವರಿಗೂ, ನಾನು ಅವರಿಗೋಸ್ಕರ ಎಬ್ಬಿಸುವ ಅವರ ಅರಸನಾದ ದಾವೀದನಿಗೂ ಸೇವೆಮಾಡುವರು.


ಆ ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಎಲ್ಲಾ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ದೇವರ ದಯೆ, ಐಶ್ವರ್ಯ, ಸಹನೆ ಮತ್ತು ದೀರ್ಘಶಾಂತಿ ಇವುಗಳನ್ನು ತಾತ್ಸಾರ ಮಾಡುತ್ತೀಯೋ? ದೇವರ ಒಳ್ಳೆಯತನವು ನಿನ್ನನ್ನು ಪಶ್ಚಾತ್ತಾಪಕ್ಕೆ ನಡೆಸುತ್ತದೆಂಬುದು ನಿನಗೆ ತಿಳಿಯದೋ?


ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು, ಆಗ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಕರೆಯುವೆನು; ನೀನು ಯುದ್ಧದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ, ಜನಾಂಗಗಳಿಂದ ಒಟ್ಟುಗೂಡಿ ಭದ್ರವಾಗಿ ವಾಸಿಸುವವರ ವಿರೋಧವಾಗಿ ವರ್ಷಗಳ ಅಂತ್ಯದಲ್ಲಿ ಬರುವೆ.


ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.


ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.


ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”


ಅವರು ಯೆಹೋವ ದೇವರನ್ನು ಹುಡುಕುವುದಕ್ಕೆ ತಮ್ಮ ದನಕುರಿಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡಿದ್ದರಿಂದ, ಅವರು ಆತನನ್ನು ಕಾಣುವುದೇ ಇಲ್ಲ.


ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಸಂಭವಿಸುವುದು ಎಂಬುದನ್ನು ತಿಳಿಸುವುದಕ್ಕೋಸ್ಕರ ನಾನೀಗ ಬಂದಿದ್ದೇನೆ. ಏಕೆಂದರೆ ದರ್ಶನವು ಮುಂದೆ ಬರಲಿಕ್ಕಿರುವ ಸಮಯವನ್ನು ಕುರಿತಾಗಿರುತ್ತದೆ,” ಎಂದನು.


ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.


ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು.


ಯೆಹೋವ ದೇವರಾದ ನಾನು ಹೇಳುವುದೇನೆಂದರೆ: ‘ದಾವೀದನು ಎಂದಿಗೂ ಇಸ್ರಾಯೇಲ್ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಒಬ್ಬ ವ್ಯಕ್ತಿಯನ್ನು ಹೊಂದಲು ವಿಫಲನಾಗುವುದಿಲ್ಲ


ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ, ಇಸ್ರಾಯೇಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.


ನೀವು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿಮಗೆ ಸಂಭವಿಸಿದಾಗ, ಕಡೇ ದಿವಸಗಳಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು ವಿಧೇಯರಾಗಿರಿ.


ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ, ಅದನ್ನು ನಿನಗೆ ತಿಳಿಸುವೆನು,” ಎಂದನು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


ಯೆಹೋವ ದೇವರು ತಮ್ಮ ಹೃದಯಾಲೋಚನೆಯನ್ನು ನಡಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.


ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ, ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ದೇವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು, ನಾವು ಅವರ ದಾರಿಗಳಲ್ಲಿ ನಡೆಯುವೆವು.” ಏಕೆಂದರೆ ಚೀಯೋನಿನಿಂದ ದೇವರ ನಿಯಮವೂ, ಯೆರೂಸಲೇಮಿನಿಂದ ಯೆಹೋವ ದೇವರ ವಾಕ್ಯವೂ ಹೊರಡುವುವು.


ಆದರೂ ಜನರು ತಮ್ಮನ್ನು ಶಿಕ್ಷಿಸಿದ ದೇವರ ಕಡೆಗೆ ತಿರುಗದೆಯೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕದೆಯೂ ಇದ್ದರು.


ಆ ದಿನದಲ್ಲಿ ಜನರು ತಮ್ಮನ್ನು ಉಂಟುಮಾಡಿದವರ ಮೇಲೆ ದೃಷ್ಟಿಯಿಡುವರು ಮತ್ತು ಇಸ್ರಾಯೇಲಿನ ಪರಿಶುದ್ಧರ ಕಡೆಗೆ ತಿರುಗಿಕೊಳ್ಳುವರು.


ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.


ಅವರು ಯೆಹೋವ ದೇವರ ಹಿಂದೆ ಹೋಗುವರು. ಅವರು ಸಿಂಹದ ಹಾಗೆ ಗರ್ಜಿಸುವರು. ಅವರು ಗರ್ಜಿಸುವಾಗ ಪಶ್ಚಿಮದಿಂದ ಮಕ್ಕಳು ನಡುಗುತ್ತಾ ಬರುವರು.


ನೀನು ನೋಡಿ ಕಳೆಗೊಳ್ಳುವಿ, ನಿನ್ನ ಹೃದಯವು ಅದರುತ್ತಾ ಉಬ್ಬುವುದು, ಏಕೆಂದರೆ ಸಮುದ್ರದ ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವುದು. ಇತರ ಜನಾಂಗಗಳ ಆಸ್ತಿಯು ನಿನ್ನ ಬಳಿಗೆ ಬರುವುದು.


ಬನ್ನಿರಿ, ನಾವು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳೋಣ. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ, ಅವರೇ ನಮ್ಮನ್ನು ಸ್ವಸ್ಥ ಮಾಡುವರು. ಅವರು ಹೊಡೆದಿದ್ದಾನೆ, ಅವರೇ ನಮ್ಮನ್ನು ಕಟ್ಟುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು