Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:13 - ಕನ್ನಡ ಸಮಕಾಲಿಕ ಅನುವಾದ

13 ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸುತ್ತಾರೆ. ಗುಡ್ಡಗಳ ಮೇಲೆ ಏಲಾ, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ದಟ್ಟವಾಗಿರುವುದರಿಂದ ಧೂಪವನ್ನು ಸುಡುತ್ತಾರೆ. ಆದ್ದರಿಂದ ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವರು. ನಿಮ್ಮ ಸೊಸೆಯಂದಿರು ವ್ಯಭಿಚಾರಿಣಿಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪರ್ವತಾಗ್ರಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವುದರಿಂದ ಅವುಗಳ ಕೆಳಗೆ ಇವುಗಳನ್ನು ನಡೆಸುತ್ತಾರೆ. ಹೀಗಿರಲು ನನ್ನ ಜನರೇ, ನಿಮ್ಮ ಕುಮಾರಿಯರು ವ್ಯಭಿಚಾರಿಗಳಾಗಿ ನಡೆಯುವುದೂ, ನಿಮ್ಮ ವಧುಗಳು ವ್ಯಭಿಚಾರ ಮಾಡುವುದೂ ಏನಾಶ್ಚರ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರು ಗಿರಿಶಿಖರಗಳ ಮೇಲೆ ಬಲಿಯನರ್ಪಿಸುತ್ತಾರೆ. ಬೆಟ್ಟಗುಡ್ಡಗಳ ಮೇಲೆ ಧೂಪಹಾಕುತ್ತಾರೆ. ದಟ್ಟ ನೆರಳಿನ ಅಲ್ಲೋನ್, ಲಿಬ್ನೆ, ಏಲಾ ವೃಕ್ಷಗಳ ಅಡಿಯಲ್ಲಿ ಇಂತಹುದನ್ನೆಲ್ಲ ಮಾಡುತ್ತಾರೆ. ಹೀಗಿರಲು ನಿಮ್ಮ ಪುತ್ರಿಯರು ಸೂಳೆಯರಾಗುವರು. ನಿಮ್ಮ ಸೊಸೆಗಳು ವ್ಯಭಿಚಾರಿಣಿಗಳಾಗುವರು. ಇದರಲ್ಲಿ ಆಶ್ಚರ್ಯವೇನಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪರ್ವತಾಗ್ರಗಳಲ್ಲಿ ಯಜ್ಞಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪಹಾಕುತ್ತಾರೆ; ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವದರಿಂದ ಅವುಗಳ ಕೆಳಗೆ ಇವುಗಳನ್ನು ನಡಿಸುತ್ತಾರೆ; ಹೀಗಿರಲು [ನನ್ನ ಜನರೇ,] ನಿಮ್ಮ ಕುಮಾರಿಯರು ಸೂಳೆಯರಾಗಿ ನಡೆಯುವದೂ, ನಿಮ್ಮ ವಧುಗಳು ವ್ಯಭಿಚಾರಮಾಡುವದೂ ಏನಾಶ್ಚರ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರು ಪರ್ವತ ಶಿಖರಗಳ ಮೇಲೆ ಯಜ್ಞಗಳನ್ನರ್ಪಿಸುತ್ತಾರೆ; ಬೆಟ್ಟಗಳ ಮೇಲೆಯೂ ಓಕ್, ಪಾಪಲಾರ್ ಮತ್ತು ಏಲ್ಮ್ ಮರಗಳಡಿಗಳಲ್ಲಿಯೂ ಧೂಪ ಹಾಕುತ್ತಾರೆ. ಆ ಮರಗಳ ನೆರಳು ದಟ್ಟವಾಗಿರುವದು. ಆದ್ದರಿಂದ ನಿಮ್ಮ ಹೆಣ್ಣುಮಕ್ಕಳು ವೇಶ್ಯೆಯರಂತೆ ಅದರಡಿಯಲ್ಲಿ ಮಲಗುವರು. ನಿಮ್ಮ ಸೊಸೆಯಂದಿರು ಲೈಂಗಿಕಪಾಪದಲ್ಲಿ ಮಗ್ನರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:13
20 ತಿಳಿವುಗಳ ಹೋಲಿಕೆ  

“ನೀವು ಇಷ್ಟಪಟ್ಟ ಪವಿತ್ರ ಏಲಾ ಮರಗಳ ನಿಮಿತ್ತ ನಾಚಿಕೊಳ್ಳುವಿರಿ. ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.


ಆಮೇಲೆ ಅವರಲ್ಲಿ ಹತರಾದವರು, ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಬಲಿಪೀಠಗಳ ಸುತ್ತಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ, ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸಿರಾದ ಮರದ ಕೆಳಗೂ, ಪ್ರತಿಯೊಂದು ದಪ್ಪವಾದ ಏಲಾ ಮರದ ಕೆಳಗಡೆಯೂ, ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವುದರಲ್ಲಿಯೂ ನಾನೇ ಯೆಹೋವ ದೇವರೆಂದು ತಿಳಿಯುವಿರಿ.


ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ.


ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ ‘ನಿನ್ನ ಹೆಂಡತಿ ಪಟ್ಟಣದಲ್ಲಿ ವ್ಯಭಿಚಾರಿಣಿಯಾಗುವಳು. ನಿನ್ನ ಪುತ್ರ ಪುತ್ರಿಯರೂ ಖಡ್ಗದಿಂದ ಬೀಳುವರು. ನಿನ್ನ ದೇಶವನ್ನು ಅಳೆಯಲಾಗುತ್ತದೆ ಮತ್ತು ವಿಭಾಗಿಸಲಾಗುತ್ತದೆ. ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಕರೆದೊಯ್ಯಲಾಗುವುದು.’ ”


ನಾನು ಇಸ್ರಾಯೇಲನ್ನು ಹೆಚ್ಚಾಗಿ ಕರೆದ ಹಾಗೆಯೇ, ನನ್ನಿಂದ ಅವರು ದೂರ ಹೊರಟು ಹೋದರು. ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು. ಕೆತ್ತಿದ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.


ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಅವಳ ಪ್ರೇಮಿಗಳ ಹಿಂದೆ ಹೋಗಿ, ಬಾಳ್ ದೇವತೆಗಳಿಗೆ ಧೂಪ ಸುಟ್ಟ ದಿವಸಗಳಿಗಾಗಿ ನಾನು ಅವಳನ್ನು ದಂಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಪ್ರತಿಯೊಂದು ದಾರಿಯ ಕೊನೆಯಲ್ಲಿಯೂ ಎತ್ತರದ ದೇವಾಲಯವನ್ನು ನಿರ್ಮಿಸಿ, ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು, ಹಾದುಹೋಗುವ ಪ್ರತಿಯೊಬ್ಬನಿಗೂ ನಿನ್ನ ಕಾಲುಗಳನ್ನು ಅಗಲಿಸಿದೆ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದೆ.


ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾ ಸ್ಥಳದಲ್ಲಿ ವ್ಯಭಿಚಾರ ಮಾಡಿದೆ; ನೀನು ಅವನ ಬಳಿಗೆ ಹೋದೆ ಮತ್ತು ಅವನು ನಿನ್ನ ಸೌಂದರ್ಯವನ್ನು ತೆಗೆದುಕೊಂಡಿದ್ದಾನೆ.


ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


“ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೂ ನೀನು ವೇಶ್ಯೆಯಾಗಿ ನಡೆದಿದ್ದೀ.


ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀಯೆ, ಬಲಿಯನ್ನರ್ಪಿಸಲು ಆ ಬೆಟ್ಟವನ್ನೇರಿದ್ದೀ.


ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿಕೊಂಡು, ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ, ಸುಳ್ಳಿನ ಸಂತತಿಯೂ ಅಲ್ಲವೋ?


ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?


ಇಸ್ರಾಯೇಲಿನ ಪಾಪಕ್ಕೆ ಆಸ್ಪದವಾದ ಆವೆನಿನ ಉನ್ನತ ಪೂಜಾಸ್ಥಳಗಳು ಹಾಳಾಗಿ ಹೋಗುವುವು. ಮುಳ್ಳುಗಿಡಗಳೂ, ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವುವು. ಜನರು ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ! ಗುಡ್ಡಗಳಿಗೆ, ನಮ್ಮನ್ನು ಮುಚ್ಚಿಕೊಳ್ಳಿರಿ!” ಎನ್ನುವರು.


ಇಸ್ರಾಯೇಲರನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಇದೆಲ್ಲವೂ ಆಯಿತು. ಅವರು ಬೇರೆ ದೇವರುಗಳನ್ನು ಆರಾಧಿಸಿದರು.


ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಅಶೇರದೇವತೆಗಾಗಿ ನೇಯ್ಗೆ ಕೆಲಸ ಮಾಡುತ್ತಿದ್ದ ಸ್ತ್ರೀಯರ ಹಾಗೂ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು