Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:16 - ಕನ್ನಡ ಸಮಕಾಲಿಕ ಅನುವಾದ

16 ಹಠಮಾರಿ ಹಸುವಿನ ಹಾಗೆ ಇಸ್ರಾಯೇಲು ಹಟಮಾರಿಯಾಗಿದೆ. ಈಗ ಯೆಹೋವ ದೇವರು ಹುಲ್ಲುಗಾವಲಲ್ಲಿರುವ ಕುರಿಮರಿಯ ಹಾಗೆ ಅವರನ್ನು ಹೇಗೆ ಮೇಯಿಸುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಸ್ರಾಯೇಲು ಮೊಂಡ ಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲ ಸ್ಥಳದಲ್ಲಿ ಮೇಯಿಸುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇಸ್ರಯೇಲಿನವರು ಹತೋಟಿಗೆ ಬಾರದ ಹೋರಿಯಂತೆ ಮೊಂಡಾಗಿದ್ದಾರೆ. ಸರ್ವೇಶ್ವರ ಅವರನ್ನು ಈಗ ವಿಶಾಲವಾದ ಹುಲ್ಲುಗಾವಲುಗಳಲ್ಲಿ ಕುರಿಗಳಂತೆ ಮೇಯಿಸಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಸ್ರಾಯೇಲು ಅಗಡುಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲಸ್ಥಳದಲ್ಲಿ ಮೇಯಿಸುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಸ್ರೇಲಿಗೆ ಅನೇಕ ಸಂಗತಿಗಳನ್ನು ಯೆಹೋವನು ಕೊಟ್ಟಿರುತ್ತಾನೆ. ಆತನು ಕುರಿಗಳನ್ನು ವಿಶಾಲವಾದ ಮತ್ತು ಹುಲುಸಾದ ಹುಲ್ಲುಗಾವಲಿಗೆ ಒಯ್ಯುವ ಕುರುಬನಂತಿದ್ದಾನೆ. ಆದರೆ ಇಸ್ರೇಲ್ ಹಠಮಾರಿಯಾಗಿರುತ್ತದೆ. ಬಾರಿಬಾರಿಗೆ ಹೊರಗೆ ಓಡುವ ಯೌವನ ಹಸುವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:16
19 ತಿಳಿವುಗಳ ಹೋಲಿಕೆ  

“ಆದರೆ ಅವರು ಕೇಳುವುದಕ್ಕೆ ನಿರಾಕರಿಸಿದರು. ಅವರು ಬೆನ್ನನ್ನು ತಿರುಗಿಸಿ, ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದ ಮಾಡಿಕೊಂಡರು.


ನನ್ನ ಜನರು ನನ್ನ ಕಡೆಯಿಂದ ಹಿಂಜಾರಬೇಕೆಂದು ತೀರ್ಮಾನಿಸಿದ್ದಾರೆ. ಅವರು ನನ್ನನ್ನು ಸರ್ವೋನ್ನತ ದೇವರು ಎಂದು ಕರೆದರೂ ನಾನು ಅವರನ್ನು ಯಾವುದೇ ರೀತಿಯಲ್ಲಿ ಉನ್ನತೀಕರಿಸುವುದಿಲ್ಲ.


ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ, ನೀನೇ ನಿನ್ನ ಹೆಸರಿಗೋಸ್ಕರ ಕಾರ್ಯ ಸಾಧಿಸು. ಏಕೆಂದರೆ, ನಮ್ಮ ಹಿಂಜಾರುವಿಕೆಗಳು ಅನೇಕವಾಗಿವೆ; ನಿಮಗೆ ವಿರೋಧವಾಗಿ ಪಾಪಮಾಡಿದ್ದೇವೆ.


ಹಾಗಾದರೆ ಈ ಯೆರೂಸಲೇಮಿನ ಜನರು ಎಂದಿಗೂ ಹಿಂದಿರುಗದಂತೆ ಏಕೆ ಬಿಟ್ಟು ಹೋಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವುದಕ್ಕೆ ನಿರಾಕರಿಸುತ್ತಾರೆ.


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.


ಹೀಗಿರುವುದರಿಂದ ಅಡವಿಯ ಸಿಂಹವು ಅವರನ್ನು ದಾಳಿಮಾಡುವುದು. ಕಾಡಿನ ತೋಳವು ಅವರನ್ನು ಸೂರೆಮಾಡುವುದು. ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವುದು. ಅಲ್ಲಿಂದ ಹೊರಗೆ ಬರುವವರೆಲ್ಲರೂ ಸೀಳಲಾಗುವರು. ಏಕೆಂದರೆ, ಅವರ ದ್ರೋಹಗಳು ಬಹಳವಾಗಿವೆ. ಅವರ ಹಿಂಜಾರುವಿಕೆಯು ಹೆಚ್ಚಾಗಿವೆ.


ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲ್, ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.


ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು.


ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ.


ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ತಿರುಗಿಸಿ, ವಿಸ್ತಾರವಾದ ದೇಶಕ್ಕೆ ಬಿಸಾಡುವರು. ಅಲ್ಲೇ ನೀನು ಸಾಯುವೆ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವುವು.


ಪಟ್ಟಣ ಪ್ರದೇಶಗಳು ಹಾಳಾಗಿ ಮೇಕೆಮರಿಗಳಿಗೆ ಹುಲ್ಲುಗಾವಲುಗಳಾಗುವುವು. ಕುರಿಮರಿಗಳು ಅಲ್ಲಿ ಮೇಯುವುವು.


“ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.


ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.


ಆಗ ಅವರು ತಮ್ಮ ಪಿತೃಗಳ ಹಾಗೆ ಹಟಮಾರಿ ಮತ್ತು ದಂಗೆಕೋರ ಸಂತತಿಯವರು ಆಗಿರುವುದಿಲ್ಲ, ಅವರ ಹೃದಯವು ದೇವರಿಗೆ ಸತ್ಯವಾಗಿರಲಿಲ್ಲ, ಅವರ ಆತ್ಮವು ದೇವರಲ್ಲಿ ನಂಬಿಗಸ್ತಿಕೆಯಿಂದಲೂ ಇರಲಿಲ್ಲ.


ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


“ಎಫ್ರಾಯೀಮನು ಅಂಗಲಾಚುವುದನ್ನು ನಿಶ್ಚಯವಾಗಿ ಕೇಳಿದೆನು. ಹೇಗೆಂದರೆ, ‘ನೀನು ನನ್ನನ್ನು ಶಿಕ್ಷಿಸಿದೆ. ಪಳಗದ ಹೋರಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು. ನನ್ನನ್ನು ತಿರುಗಿಸು, ಆಗ ತಿರುಗಿಕೊಳ್ಳುವೆನು. ಯೆಹೋವ ದೇವರೇ, ನೀವೇ ನನ್ನ ದೇವರಾಗಿದ್ದೀರಿ.


ಎಫ್ರಾಯೀಮು ಒಂದು ತರಬೇತಿ ಪಡೆದ ಕಡಸಾಗಿದೆ. ಅದು ತುಳಿಯುವುದನ್ನು ಇಷ್ಟಪಡುತ್ತದೆ. ಆದರೆ ನಾನು ಅದರ ಸುಂದರವಾದ ಕುತ್ತಿಗೆಯ ಮೇಲೆ ನೊಗವನ್ನು ಹೊರುತ್ತೇನೆ. ಎಫ್ರಾಯೀಮು ಸವಾರಿ ಮಾಡುವ ಹಾಗೆ ನಾನು ಮಾಡುವೆನು. ಯೆಹೂದ ಉಳುವನು. ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.


ಅವರ ಪಟ್ಟಣಗಳಲ್ಲಿ ಖಡ್ಗವು ಹೊಳೆಯುವುದು. ಅದು ಅವರ ಸುಳ್ಳು ಪ್ರವಾದಿಗಳನ್ನು ನುಂಗಿಹಾಕುತ್ತದೆ. ಮತ್ತು ಅವರ ಯೋಜನೆಗಳನ್ನು ಕೊನೆಗೊಳಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು