ಹೋಶೇಯ 4:5 - ಕನ್ನಡ ಸಮಕಾಲಿಕ ಅನುವಾದ5 ನೀನು ಹಗಲಿನಲ್ಲಿಯೂ, ರಾತ್ರಿಯಲ್ಲಿಯೂ ಬೀಳುವೆ. ಪ್ರವಾದಿಗಳು ನಿನ್ನ ಸಂಗಡ ಮುಗ್ಗರಿಸಿಬೀಳುವರು. ಆದ್ದರಿಂದ ನಾನು ನಿನ್ನ ತಾಯಿಯನ್ನು ನಾಶಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹಗಲಿನಲ್ಲೇ ನೀವು ಮುಗ್ಗರಿಸುತ್ತೀರಿ. ರಾತ್ರಿಯಲ್ಲಿ ಪ್ರವಾದಿಗಳು ಸಹ ನಿಮ್ಮೊಂದಿಗೆ ಮುಗ್ಗರಿಸುತ್ತಾರೆ. ನಿಮ್ಮ ವಂಶವೃಕ್ಷವನ್ನೇ ನಾನು ನಿರ್ಮೂಲಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 [ಆಹಾ, ಯಾಜಕರೇ,] ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀವು (ಯಾಜಕರು) ಹಗಲಿನಲ್ಲಿ ಬಿದ್ದುಹೋಗುವಿರಿ. ರಾತ್ರಿ ಹೊತ್ತಿನಲ್ಲಿ ಪ್ರವಾದಿಗಳೂ ನಿಮ್ಮ ಜೊತೆಗೆ ಬೀಳುವರು ಮತ್ತು ನಾನು ನಿಮ್ಮ ತಾಯಿಯನ್ನು ಸಹ ನಾಶಮಾಡುವೆನು. ಅಧ್ಯಾಯವನ್ನು ನೋಡಿ |