Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:6 - ಕನ್ನಡ ಸಮಕಾಲಿಕ ಅನುವಾದ

6 ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ. “ಏಕೆಂದರೆ ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ. ನಾನು ಸಹ ಯಾಜಕ ವರ್ಗದಿಂದ ನಿಮ್ಮನ್ನು ವರ್ಜಿಸಿ ಬಿಡುತ್ತೇನೆ. ಏಕೆಂದರೆ ನೀವು ದೇವರ ನಿಯಮವನ್ನು ಮರೆತುಬಿಟ್ಟಿದ್ದೀರಿ, ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟದರಿಂದ ಇನ್ನು ನನಗೆ ಯಾಜಕ ಸೇವೆಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು; ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ ನಾನು ನಿಮ್ಮ ಸಂತತಿಯವರನ್ನು ಮರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:6
54 ತಿಳಿವುಗಳ ಹೋಲಿಕೆ  

ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋದರು; ಅವರ ಘನವಂತರು ಹಸಿವಿನಿಂದ ಸಾಯುವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವುದು.


ಪರಿಜ್ಞಾನವಿಲ್ಲದ ಆಸಕ್ತಿಯು ಯುಕ್ತವಲ್ಲ; ತನ್ನ ಹೆಜ್ಜೆಗಳಲ್ಲಿ ದುಡುಕುವವನು ದಾರಿ ತಪ್ಪುವನು.


ಏಕೆಂದರೆ ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ. ದಹನಬಲಿಗಳಿಗಿಂತ ದೇವರ ಅಂಗೀಕಾರವನ್ನೇ ಅಪೇಕ್ಷಿಸುತ್ತೇನೆ.


ಇಸ್ರಾಯೇಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೇಶದ ನಿವಾಸಿಗಳಾದ ನಿಮ್ಮ ಮೇಲೆ ಯೆಹೋವ ದೇವರು ಆಪಾದನೆ ಹೊರಿಸಿದ್ದಾರೆ. “ಏಕೆಂದರೆ ದೇಶದಲ್ಲಿ ಸತ್ಯವೂ ಇಲ್ಲ, ದಯೆಯೂ ಇಲ್ಲ, ದೇವರ ತಿಳುವಳಿಕೆಯೂ ಇಲ್ಲ.


“ ‘ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.


ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, ಅರಮನೆಗಳನ್ನು ಕಟ್ಟುತ್ತಾರೆ. ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ನುಂಗಿಬಿಡುವುದು.”


ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು, ನಿನ್ನ ಬಂಡೆಯೂ, ಕೋಟೆಯೂ ಆಗಿರುವವರನ್ನು ಮರೆತು ಬಿಟ್ಟಿದ್ದೀ. ನೀನು ರಮ್ಯವಾದ ಗಿಡಗಳನ್ನು ಮತ್ತು ದೇಶಾಂತರದ ದ್ರಾಕ್ಷಿಯ ಸಸಿಗಳನ್ನು ಹಾಕಿದ್ದರೂ,


ಯಾಜಕರು, ‘ಯೆಹೋವ ದೇವರು ಎಲ್ಲಿ?’ ಎಂದು ಕೇಳಲಿಲ್ಲ. ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು.


ಬಹುಕಾಲ ಇಸ್ರಾಯೇಲರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ, ನಿಯಮವಿಲ್ಲದೆ ಇದ್ದರು.


ನಾನು ಅವರಿಗೆ ಆಹಾರ ಕೊಟ್ಟೆನು, ಅವರು ತೃಪ್ತರಾದರು. ಅವರು ತೃಪ್ತರಾದಾಗ, ಅಹಂಕಾರಿಗಳಾದರು, ಅನಂತರ ಅವರು ನನ್ನನ್ನು ಮರೆತುಬಿಟ್ಟರು.


ಎತ್ತು ತನ್ನ ಯಜಮಾನನನ್ನು, ಕತ್ತೆಯು ತನ್ನ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುವು. ಆದರೆ ಇಸ್ರಾಯೇಲಿಗೆ ತಿಳಿದಿಲ್ಲ. ನನ್ನ ಜನರಿಗೂ ತಿಳಿಯುವುದಿಲ್ಲ.”


“ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. ನನ್ನನ್ನು ಅವರು ಅರಿಯರು; ಮೂರ್ಖ ಮಕ್ಕಳಾಗಿದ್ದಾರೆ, ಅವರು ಗ್ರಹಿಕೆಯಿಲ್ಲದವರು; ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.”


ಅವರು ವಿಧೇಯರಾಗದಿದ್ದರೆ, ಸಂಕಟದ ಸಾಗರದಲ್ಲಿ ಸಾಗಿಹೋಗುವರು; ತಿಳುವಳಿಕೆಯಿಲ್ಲದ ಬಾಳನ್ನು ಬಾಳುವರು.


ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.


ನನ್ನ ಪ್ರಜೆಗಳನ್ನು ಹುಡುಗರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ನೀವು ನಡೆಯುವ ದಾರಿಯನ್ನು ಹಾಳು ಮಾಡಿದ್ದಾರೆ.


ನನ್ನ ವೈರಿಗಳು ನಿಮ್ಮ ಮಾತುಗಳನ್ನು ತಿರಸ್ಕರಿಸುವುದರಿಂದ, ನನ್ನ ಆಸಕ್ತಿಯು ನನ್ನನ್ನು ದಹಿಸಿಬಿಟ್ಟಿದೆ.


ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡಿದ್ದರೂ, ನಿಮ್ಮ ನಿಯಮವನ್ನು ನಾನು ಮರೆಯಲಿಲ್ಲ.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.


ನಾನು ನನ್ನ ನಿಯಮದ ಅನೇಕ ಸಂಗತಿಗಳನ್ನು ಅವನಿಗೆ ಬರೆದಿದ್ದೇನೆ. ಆದರೆ ಅವನು ಅವುಗಳನ್ನು ಅನ್ಯವಾದವುಗಳೆಂದು ಪರಿಗಣಿಸಿದನು.


“ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ. ಅವರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ನ್ಯಾಯ ಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಶತ್ರುಗಳು ಹದ್ದಿನ ಹಾಗೆ ಯೆಹೋವ ದೇವರ ಆಲಯದ ಮೇಲೆ ಬರುವರು.


ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.


ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಅವಳ ಪ್ರೇಮಿಗಳ ಹಿಂದೆ ಹೋಗಿ, ಬಾಳ್ ದೇವತೆಗಳಿಗೆ ಧೂಪ ಸುಟ್ಟ ದಿವಸಗಳಿಗಾಗಿ ನಾನು ಅವಳನ್ನು ದಂಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ಏಲಿಯ ಪುತ್ರರು ಯೆಹೋವ ದೇವರನ್ನು ಗೌರವಿಸದೆ ದುಷ್ಟರಾಗಿದ್ದರು.


“ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸಮೀಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತುಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.


ಇವರು ಸಹ ದ್ರಾಕ್ಷಾರಸದಿಂದ ಮತ್ತರಾಗಿದ್ದಾರೆ. ಮದ್ಯದಿಂದಲೂ ಓಲಾಡುತ್ತಿದ್ದಾರೆ. ಯಾಜಕನೂ ಪ್ರವಾದಿಯೂ ಮದ್ಯದಿಂದ ಮತ್ತರಾಗಿದ್ದಾರೆ. ದ್ರಾಕ್ಷಾರಸದಿಂದ ತೂರಾಡುತ್ತಿದ್ದಾರೆ. ಮದ್ಯದಿಂದ ಓಲಾಡುತ್ತಿದ್ದಾರೆ. ದರ್ಶನವಾಗುತ್ತಿರುವಾಗಲೂ ಅವರು ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.


ಇಷಯನು ರಾಜನಾದ ದಾವೀದನ ತಂದೆ. ದಾವೀದನು ಸೊಲೊಮೋನನ ತಂದೆ, ಇವನ ತಾಯಿ ಊರೀಯನ ಹೆಂಡತಿಯಾಗಿದ್ದವಳು,


ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸಿರಿ; ಏಕೆಂದರೆ ನಿಮ್ಮ ನಿಯಮವನ್ನು ನಾನು ಮರೆತಿಲ್ಲ.


ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ, ಜ್ಞಾನದ ಕೊರತೆಯಿಂದ ಬುದ್ಧಿಹೀನರು ಸಾಯುತ್ತಾರೆ.


ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧಾಶುದ್ಧ ವ್ಯತ್ಯಾಸವನ್ನೂ ವಿವರಿಸಬೇಕು.


“ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವಾಗಲೂ, ನಿಮ್ಮ ಸೊಸೆಯಂದಿರು ವ್ಯಭಿಚಾರ ಮಾಡುವಾಗಲೂ ನಾನು ಅವರನ್ನು ಶಿಕ್ಷಿಸುವುದಿಲ್ಲ. ಏಕೆಂದರೆ ಪುರುಷರು ಸ್ವತಃ ವೇಶ್ಯೆಯರೊಂದಿಗೆ ವಾಸಿಸುತ್ತಾರೆ ಮತ್ತು ದೇವಾಲಯದ ವೇಶ್ಯೆಯರೊಂದಿಗೆ ಬಲಿ ಅರ್ಪಿಸುತ್ತಾರೆ. ಆದ್ದರಿಂದ ವಿವೇಕವಿಲ್ಲದ ಜನರು ನಾಶವಾಗುತ್ತಾರೆ.


“ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳದಂತೆ, ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರದ ಆತ್ಮವು ಅವರ ಹೃದಯದಲ್ಲಿದೆ. ಅವರು ಯೆಹೋವ ದೇವರನ್ನು ಸ್ವೀಕರಿಸಿಕೊಳ್ಳುವುದಿಲ್ಲ.


ವಿದೇಶಿಯರು ಅವನ ಶಕ್ತಿಯನ್ನು ಹೀರಿಬಿಟ್ಟಿದ್ದಾರೆ. ಅದು ಅವನಿಗೆ ಗೊತ್ತಿಲ್ಲ. ನರೆಕೂದಲು ಸಹ ಅವನ ಮೇಲೆ ಇದೆ. ಆದರೂ ಅವನು ತಿಳಿಯದೇ ಇದ್ದಾನೆ.


“ಎಫ್ರಾಯೀಮು ಸಹ ಸುಲಭವಾಗಿ ಮೋಸಕ್ಕೆ ಒಳಗಾಗುವ ಪಾರಿವಾಳದ ಹಾಗಿದ್ದಾನೆ. ಈಗ ಅವರು ಈಜಿಪ್ಟನ್ನು ಕರೆಯುತ್ತಾರೆ. ಈಗ ಅವರು ಅಸ್ಸೀರಿಯದ ಆಶ್ರಯಕ್ಕೆ ಹೋಗುತ್ತಾರೆ.


ದೀನರನ್ನು ರಕ್ಷಿಸುತ್ತೀರಿ, ಆದರೆ ನೀವು ಗರ್ವಿಷ್ಠರ ಕಣ್ಣುಗಳನ್ನು ತಗ್ಗಿಸುತ್ತೀರಿ.


ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು ನನಗೆ ಓದಲು ಬರುವುದಿಲ್ಲ ಅನ್ನುವನು.


ನನ್ನ ದೇವರು ಅವರನ್ನು ತಳ್ಳಿಬಿಡುವರು. ಏಕೆಂದರೆ ಅವರು ಆತನಿಗೆ ವಿಧೇಯರಾಗಲಿಲ್ಲ. ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು