Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 6:11 - ಕನ್ನಡ ಸಮಕಾಲಿಕ ಅನುವಾದ

11 “ಯೆಹೂದವೇ, ನಿನಗೂ ಸಹ, ತಕ್ಕ ಸುಗ್ಗಿಯು ನೇಮಕವಾಗಿದೆ. “ಸೆರೆಯಾದ ನನ್ನ ಜನರಿಗೆ, ಪುನಃಸ್ಥಾಪನೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೂದವೇ, ನಿನಗೂ ಅಧರ್ಮಫಲದ ಸುಗ್ಗಿಯು ನೇಮಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಜುದೇಯವೇ, ನೀನು ಮಾಡುವ ದುಷ್ಕೃತ್ಯಗಳಿಗೆ ತಕ್ಕ ಸುಗ್ಗಿ ಕಾದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೂದವೇ, ನಿನಗೂ [ಅಧರ್ಮಫಲದ] ಸುಗ್ಗಿಯು ನೇಮಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೂದವೇ, ನಿನಗೆ ಸುಗ್ಗೀಕಾಲವು ನೇಮಕವಾಗಿದೆ, ಸೆರೆವಾಸದಿಂದ ನನ್ನ ಜನರನ್ನು ನಾನು ಹಿಂತಿರುಗಿ ಕರೆತಂದಾಗ ಅದು ಸಂಭವಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 6:11
9 ತಿಳಿವುಗಳ ಹೋಲಿಕೆ  

ಕುಡುಗೋಲನ್ನು ಹಾಕಿರಿ. ಏಕೆಂದರೆ ಬೆಳೆ ಪಕ್ವವಾಯಿತು. ಬಂದು ಇಳಿಯಿರಿ. ಏಕೆಂದರೆ ದ್ರಾಕ್ಷಿಯ ಆಲೆ ತುಂಬಿ ಇದೆ. ತೊಟ್ಟಿಗಳು ತುಳುಕುವಂತೆ ಅವರ ಕೆಟ್ಟತನವು ಬಹಳವಾಗಿದೆ.


ಏಕೆಂದರೆ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: “ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬಿಲೋನಿನ ಮಗಳು ಇದ್ದಾಳೆ. ಇನ್ನು ಸ್ವಲ್ಪ ಕಾಲವಾದ ಮೇಲೆ ಅವಳಿಗೆ ಸುಗ್ಗಿಕಾಲ ಬರುವುದು.”


ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದ ತರುವಾಯ ಯೆಹೋವ ದೇವರು ಅವನ ಸಂಪತ್ತನ್ನು ಪುನಃಸ್ಥಾಪಿಸಿದರು. ಯೆಹೋವ ದೇವರು ಯೋಬನಿಗೆ ಮೊದಲು ಇದ್ದವುಗಳಿಗಿಂತ ಎರಡರಷ್ಟು ಕೊಟ್ಟರು.


ಆಗ ಮತ್ತೊಬ್ಬ ದೂತನು ದೇವಾಲಯದೊಳಗಿಂದ ಬಂದು ಮೇಘದ ಮೇಲೆ ಕುಳಿತಿದ್ದವರಿಗೆ, “ಭೂಮಿಯ ಪೈರು ಮಾಗಿದೆ. ಕೊಯ್ಯುವ ಕಾಲ ಬಂದಿರುವುದರಿಂದ, ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ!” ಎಂದು ಮಹಾಧ್ವನಿಯಿಂದ ಕೂಗಿದನು.


ಅದು ಯೆಹೂದದ ಮನೆತನದಲ್ಲಿ ಉಳಿದವರ ವಶವಾಗುವುದು. ಅದರ ಮೇಲೆ ಮೇಯಿಸುವರು. ಅಷ್ಕೆಲೋನಿನ ಮನೆತನಗಳಲ್ಲಿ ಸಾಯಂಕಾಲದಲ್ಲಿ ಅವರು ಮಲಗಿಕೊಳ್ಳುವರು. ಏಕೆಂದರೆ ಅವರ ದೇವರಾದ ಯೆಹೋವ ದೇವರು, ಅವರನ್ನು ಪರಿಪಾಲಿಸಿ, ಮತ್ತೆ ಏಳಿಗೆಗೆ ತರುವರು.


ಆದರೆ ಯೆಹೋವ ದೇವರ ಯೋಚನೆಗಳು ಅವರಿಗೆ ತಿಳಿದಿಲ್ಲ. ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ. ಏಕೆಂದರೆ ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವರು.


ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡವರ ಹಾಗಿದ್ದೆವು.


ಯೆಹೋವ ದೇವರೇ, ನಿಮ್ಮ ದೇಶವನ್ನು ನೀವು ದಯೆ ತೋರಿಸಿದ್ದೀರಿ. ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರಮಾಡಿದ್ದೀರಿ.


“ ‘ಆದ್ದರಿಂದ ನನ್ನ ಸೇವಕನಾದ ಯಾಕೋಬನೇ ಭಯಪಡಬೇಡ, ಇಸ್ರಾಯೇಲೇ ಹೆದರಬೇಡ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೇ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ. ಯಾಕೋಬನು ತಿರುಗಿಬಂದು ವಿಶ್ರಾಂತಿಯಲ್ಲಿರುವನು. ಹೆದರಿಸುವವನಿಲ್ಲದೆ ಸುರಕ್ಷಿತವಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು