Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 6:5 - ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ನಾನು ನಿಮ್ಮ ಜನರನ್ನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು, ನನ್ನ ಬಾಯಿಮಾತುಗಳಿಂದ ಅವರನ್ನು ಸಂಹರಿಸಿದ್ದೇನೆ. ನನ್ನ ನ್ಯಾಯತೀರ್ಪುಗಳು ಸೂರ್ಯನ ಹಾಗೆ ಹೊರಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಖಂಡತುಂಡವಾದ ತೀರ್ಪುನೀಡುವ, ಕತ್ತಿಯಂತೆ ಹರಿತವಾಗಿ ಮಾತನಾಡುವ ನನ್ನ ಪ್ರವಾದಿಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ನನ್ನ ನ್ಯಾಯದಂಡನೆ ಮಿಂಚಿನಂತೆ ಹೊರಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ವಿುಂಚಿನಂತೆ ಹೊರಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಪ್ರವಾದಿಗಳ ಮೂಲಕ ಜನರಿಗೆ ಕಟ್ಟಳೆಗಳನ್ನು ವಿಧಿಸಿದೆನು. ನನ್ನ ಅಪ್ಪಣೆಯ ಮೇರೆಗೆ ಜನರು ಕೊಲ್ಲಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 6:5
35 ತಿಳಿವುಗಳ ಹೋಲಿಕೆ  

“ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.


ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಯೆರೆಮೀಯನಿಗೆ ಹೀಗೆನ್ನುತ್ತಾರೆ: “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು, ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು. ಆ ಬೆಂಕಿ ಅವರನ್ನು ಸುಟ್ಟುಹಾಕುವುದು.”


ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.


ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


ಇದಲ್ಲದೆ ಅವರು ಕೊಲೆ, ಮಾಟ, ಜಾರತ್ವ ಮತ್ತು ಕಳ್ಳತನಗಳಿಗಾಗಿಯೂ ಪಶ್ಚಾತ್ತಾಪ ಪಡಲಿಲ್ಲ.


ಮಾನವಕುಲದ ಮೂರರಲ್ಲೊಂದು ಭಾಗವನ್ನು ಕೊಲ್ಲುವುದಕ್ಕಾಗಿ ಆ ಗಳಿಗೆ, ದಿನ, ತಿಂಗಳು ಮತ್ತು ವರ್ಷಕ್ಕಾಗಿಯೇ ಸಿದ್ಧವಾಗಿದ್ದ ನಾಲ್ಕು ದೇವದೂತರನ್ನು ಬಿಡುಗಡೆ ಮಾಡಲಾಯಿತು.


ಆದ್ದರಿಂದ ನೀನು ದೇವರ ಕಡೆಗೆ ತಿರುಗಿಕೋ! ಇಲ್ಲದಿದ್ದರೆ ನಾನು ಶೀಘ್ರವೇ ನಿನ್ನ ಬಳಿಗೆ ಬಂದು ನನ್ನ ಇಬ್ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.


ಅವರು ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿದ್ದರು. ಅವರ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಅವರ ಮುಖವು ಸೂರ್ಯನ ತೇಜಸ್ಸಿನಂತೆ ಪ್ರಕಾಶಿಸುವಂತಿತ್ತು.


ಇದನ್ನು ಮೋಶೆ ಕಂಡಾಗ ಆ ನೋಟಕ್ಕೆ ಅತ್ಯಾಶ್ಚರ್ಯಪಟ್ಟನು. ಅದನ್ನು ಸಮೀಪದಿಂದ ನೋಡಲು ಹೊರಟಾಗ, ಕರ್ತದೇವರ ಧ್ವನಿಯನ್ನು ಅವನು ಕೇಳಿಸಿಕೊಂಡನು.


ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ. ಅವರು ಅನ್ಯಾಯ ಮಾಡುವುದಿಲ್ಲ; ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ; ಅವರು ತಪ್ಪುವವರಲ್ಲ. ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು.


ನಾನು ಕಂಡ ದರ್ಶನವು, ಅವನು ಪಟ್ಟಣವನ್ನು ನಾಶಮಾಡಲು ಬಂದಾಗ ನಾನು ನೋಡಿದ ದೃಷ್ಟಿಯಂತೆ ಮತ್ತು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ದರ್ಶನಗಳಂತೆ ಮತ್ತು ಆಗ ನಾನು ಬೋರಲು ಬಿದ್ದೆನು.


ನಾನು ನಿನ್ನ ಹಣೆಯನ್ನು ಅತ್ಯಂತ ಕಠಿಣವಾದ ಕಲ್ಲಿನಂತೆಯೂ ವಜ್ರದಂತೆಯೂ ಮಾಡುವೆನು. ಅವರು ತಿರುಗಿಬೀಳುವ ಜನರಾದರೂ ನೀನು ಅವರಿಗೆ ಭಯಪಡಬೇಡ ಅಥವಾ ಗಾಬರಿಯಾಗಬೇಡ,” ಎಂದರು.


ಆಗ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.


ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧವಾಗಿಯೂ, ಅದರ ಪ್ರಧಾನರಿಗೆ ವಿರೋಧವಾಗಿಯೂ, ಅದರ ಯಾಜಕರಿಗೆ ವಿರೋಧವಾಗಿಯೂ, ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತ್ತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ, ಕಬ್ಬಿಣದ ಸ್ತಂಭವಾಗಿಯೂ, ಕಂಚಿನ ಗೋಡೆಗಳಾಗಿಯೂ ಮಾಡಿದ್ದೇನೆ.


“ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು. ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನು ಘೋಷಿಸು.


ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು.


ನಿಮ್ಮ ಭಯದಿಂದ ನನ್ನ ಶರೀರವು ನಡುಗುತ್ತದೆ; ನಿಮ್ಮ ನಿಯಮಗಳಿಗೆ ನಾನು ಭಯಭಕ್ತಿಯುಳ್ಳವನಾಗಿದ್ದೇನೆ.


ಅವರು ನಿನ್ನ ನೀತಿಯನ್ನು ಉದಯದ ಬೆಳಕಿನ ಹಾಗೆ ಮಾಡುವರು, ಅವರು ನಿನ್ನ ನ್ಯಾಯವನ್ನು ಮಧ್ಯಾಹ್ನದ ಸೂರ್ಯನ ಹಾಗೆ ಹೊಳೆಯುವಂತೆ ಮಾಡುವರು.


“ಆದ್ದರಿಂದ ಬುದ್ಧಿವಂತರೇ, ನಾನು ಹೇಳುವುದನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾರೆಂಬ ಯೋಚನೆ ದೂರವಿರಲಿ. ಸರ್ವಶಕ್ತರು ಅನ್ಯಾಯವನ್ನು ಎಸಗುತ್ತಾರೆಂಬ ಭಾವನೆ ದೂರವಾಗಿರಲಿ.


ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಪತ್ರವು ಬಂತು. ಅದರಲ್ಲಿ ಅವನು, “ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗಗಳಲ್ಲಿಯೂ, ಯೆಹೂದದ ಅರಸನಾದ ಆಸನ ಮಾರ್ಗಗಳಲ್ಲಿಯೂ ನಡೆಯದೆ,


ಅರಸನಿಗೆ, “ಯೆಹೋವ ದೇವರ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರಿಲ್ಲವೆಂಬ ಹಾಗೆ ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನ್ನು ವಿಚಾರಿಸಲು ದೂತರನ್ನು ಕಳುಹಿಸಿದ ಕಾರಣ, ‘ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಹಜಾಯೇಲನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಯೇಹುವಿನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಎಲೀಷನು ಕೊಂದುಹಾಕುವನು.


ಅಹಾಬನು ಎಲೀಯನನ್ನು ಕಂಡಾಗ ಅವನಿಗೆ, “ಇಸ್ರಾಯೇಲನ್ನು ಕಷ್ಟಕ್ಕೆ ಒಳಪಡಿಸುವವನು ನೀನಲ್ಲವೋ?” ಎಂದನು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.


ಅನಂತರ ಅವಳು ಬಾಗಿಲಲ್ಲಿ ಪ್ರವೇಶಿಸುವಾಗ, ಅಹೀಯನು ಅವಳ ಹೆಜ್ಜೆಗಳ ಶಬ್ದ ಕೇಳುತ್ತಲೇ ಅವನು, “ಯಾರೊಬ್ಬಾಮನ ಪತ್ನಿಯೇ ಒಳಗೆ ಬಾ, ನೀನು ಮತ್ತೊಬ್ಬಳಂತೆ ತೋರಿಸಿಕೊಳ್ಳುವುದು ಏಕೆ? ನಾನು ಕಠಿಣವಾದವುಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.


ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.


ಸಮುಯೇಲನು ಸೌಲನಿಗೆ, “ನೀನು ಬುದ್ಧಿಹೀನವಾದ ಕೆಲಸಮಾಡಿದ್ದೀ; ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಯೆಹೋವ ದೇವರು ಇಸ್ರಾಯೇಲರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವುದಕ್ಕೆ ಇದ್ದರು.


ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.


ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿರಿ. ದೇವರ ವಾಕ್ಯವೆಂಬ ಪವಿತ್ರಾತ್ಮರ ಖಡ್ಗವನ್ನು ಎತ್ತಿ ಹಿಡಿಯಿರಿ.


ಸಮುಯೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ,” ಎಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ, “ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತು,” ಎಂದುಕೊಂಡನು.


ಆದರೆ ಸಮುಯೇಲನು ಅವನಿಗೆ, “ನಿನ್ನ ಖಡ್ಗವು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗಿ ಮಾಡಿತೋ, ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು,” ಎಂದು ಹೇಳಿ, ಸಮುಯೇಲನು ಗಿಲ್ಗಾಲಿನಲ್ಲಿ ಯೆಹೋವ ದೇವರ ಮುಂದೆ ಅಗಾಗನಿಗೆ ಮರಣದಂಡನೆ ವಿಧಿಸಿದನು.


“ಮನುಷ್ಯಪುತ್ರನೇ, ಈಜಿಪ್ಟಿನ ಜನಸಮೂಹದ ವಿಷಯವಾಗಿ ಗೋಳಾಡು; ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಪುತ್ರಿಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಕೆಯೊಳಗೆ ಇಳಿಯುವವರ ಜೊತೆ ತಳ್ಳಿಬಿಡು.


ಕತ್ತಲೆಯೊಳಗಿಂದ ಅವನು ಪಾರಾಗುವದಿಲ್ಲ; ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು; ದೇವರ ಬಾಯಿಯ ಶ್ವಾಸದಿಂದ ಅವನು ತೊಲಗಿ ಹೋಗುವನು.


ಆದ್ದರಿಂದ ಮನುಷ್ಯಪುತ್ರನೇ, ಅವರಿಗೆ ವಿರೋಧವಾಗಿ ಪ್ರವಾದಿಸು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು