Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 6:6 - ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ. ದಹನಬಲಿಗಳಿಗಿಂತ ದೇವರ ಅಂಗೀಕಾರವನ್ನೇ ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ; ನನಗೆ ಬೇಕಾದುದು ದೈವಜ್ಞಾನ, ದಹನಬಲಿ ದಾನವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾಕೆಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಞವಲ್ಲ. ಜನರು ತರುವ ಸರ್ವಾಂಗಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 6:6
24 ತಿಳಿವುಗಳ ಹೋಲಿಕೆ  

ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.


ಆದರೆ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ, ನಿರಪರಾಧಿಗಳನ್ನು ಖಂಡಿಸುತ್ತಿರಲಿಲ್ಲ.


ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ.


ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.


ನಿಮ್ಮ ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ. ನಿಮ್ಮ ಸಭೆಗಳು ನನಗೆ ದುರ್ವಾಸನೆ ಇದ್ದಂತೆ.


“ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು?” ಎಂದು ಯೆಹೋವ ದೇವರು ನುಡಿಯುತ್ತಾರೆ. “ಟಗರುಗಳ ದಹನಬಲಿಗಳು, ಪುಷ್ಟಪಶುಗಳ ಕೊಬ್ಬು ಇದೆಲ್ಲಾ ನನಗೆ ಬೇಸರ. ಹೋರಿ, ಕುರಿ, ಹೋತಗಳ ರಕ್ತಕ್ಕೆ, ನಾನು ಸಂತೋಷಪಡುವುದಿಲ್ಲ.


ದೇವರ ಆಲಯಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂರ್ಖರು ಅರ್ಪಿಸುವ ಯಜ್ಞಕ್ಕಿಂತ, ದೇವರ ಸಮೀಪವಾಗಿದ್ದು ಅವರಿಗೆ ಕಿವಿಗೊಟ್ಟು ಆಲಿಸುವುದು ಲೇಸು. ತಾವು ತಪ್ಪು ಮಾಡುತ್ತಿದ್ದಾರೆಂದು ಮೂಢರಿಗೆ ತಿಳಿಯುವುದಿಲ್ಲ.


ಬಡವನ ಮತ್ತು ದರಿದ್ರನ ನ್ಯಾಯವನ್ನು ತೀರಿಸಿದನು. ಆಗ ಅವನಿಗೆ ಒಳ್ಳೆಯದಾಯಿತು. ನನ್ನನ್ನು ತಿಳಿದುಕೊಳ್ಳುವುದು ಇದೇ ಅಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.


ಕರುಣೆಯುಳ್ಳವರು ಧನ್ಯರು, ಅವರು ಕರುಣೆ ಪಡೆಯುವರು.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಏಕೆಂದರೆ, ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ದಿವಸದಲ್ಲಿ, ದಹನಬಲಿಗಳ ಮತ್ತು ಬಲಿಗಳ ವಿಷಯ ನಾನು ಅವರ ಸಂಗಡ ಮಾತನಾಡಲಿಲ್ಲ; ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.


ಕ್ರಿಸ್ತ ಯೇಸುವಿನಲ್ಲಿ ನೆಲೆಗೊಂಡಿರುವವರು ಪಾಪದಲ್ಲಿ ಮುಂದುವರಿಯುವುದಿಲ್ಲ. ಪಾಪದಲ್ಲಿ ಮುಂದುವರೆಯುವವರು ಕ್ರಿಸ್ತ ಯೇಸುವನ್ನು ಕಂಡವರೂ ಅಲ್ಲ, ತಿಳಿದವರೂ ಅಲ್ಲ.


ನಾವು ದೇವರ ಆಜ್ಞೆಗಳನ್ನು ಕೈಕೊಂಡು ನಡೆಯುವುದರಿಂದಲೇ ದೇವರನ್ನು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ನಾನು ಯಾವುದರೊಂದಿಗೆ ಯೆಹೋವ ದೇವರ ಮುಂದೆ ಬಂದು, ಯಾವುದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಮತ್ತು ಒಂದು ವರ್ಷದ ಕರುಗಳ ಸಂಗಡ ಆತನ ಮುಂದೆ ಹೋಗಲೇ?


ಇಸ್ರಾಯೇಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೇಶದ ನಿವಾಸಿಗಳಾದ ನಿಮ್ಮ ಮೇಲೆ ಯೆಹೋವ ದೇವರು ಆಪಾದನೆ ಹೊರಿಸಿದ್ದಾರೆ. “ಏಕೆಂದರೆ ದೇಶದಲ್ಲಿ ಸತ್ಯವೂ ಇಲ್ಲ, ದಯೆಯೂ ಇಲ್ಲ, ದೇವರ ತಿಳುವಳಿಕೆಯೂ ಇಲ್ಲ.


“ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?


ನಾನು ನಿನ್ನನ್ನು ನಂಬಿಗಸ್ತಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ಆಗ ನೀನು ಯೆಹೋವ ದೇವರನ್ನು ತಿಳಿದುಕೊಳ್ಳುವೆ.


ನಿಮ್ಮ ಯಜ್ಞಗಳ ವಿರೋಧವಾಗಿ ನಾನು ತಪ್ಪು ಹೊರಿಸುತ್ತಾಯಿಲ್ಲ, ಅಥವಾ ನನ್ನ ಮುಂದೆ ಯಾವಾಗಲೂ ಇರುವ ದಹನಬಲಿಗಳ ವಿರೋಧವಾಗಿಯೂ ನಾನು ತಪ್ಪು ಹೊರಿಸುತ್ತಾಯಿಲ್ಲ.


ಅವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ಪ್ರೀತಿಸಿ, ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸುವುದು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಗಳಿಗಿಂತಲೂ ಹೆಚ್ಚಿನದಾಗಿದೆ,” ಎಂದನು.


ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.


ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


ಈಜಿಪ್ಟಿನಿಂದ ಹೊರಟ ಗಂಡಸರೆಲ್ಲರಿಗೂ ಸುನ್ನತಿ ಆಗಿತ್ತು. ಆದರೆ ಈಜಿಪ್ಟಿನಿಂದ ಹೊರಟಾಗ ಮರುಭೂಮಿಯೊಳಗೆ ಮಾರ್ಗದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿ ಆಗಿರಲಿಲ್ಲ.


ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು