ಹೋಶೇಯ 7:4 - ಕನ್ನಡ ಸಮಕಾಲಿಕ ಅನುವಾದ4 ಅವರೆಲ್ಲರು ವ್ಯಭಿಚಾರಿಗಳು, ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸುವ ಒಲೆಗೆ ಸಮಾನರಾಗಿದ್ದಾರೆ. ಅವನು ಹಿಟ್ಟು ನಾದಿದ ಮೇಲೆ, ಅದು ಹುಳಿಯಾಗುವ ತನಕ ಉರಿಸದೆ ಬಿಟ್ಟಿರುವ ಕೆಂಡಕ್ಕೆ ಸಮಾನರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸಿ, ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರೆಲ್ಲರು ವ್ಯಭಿಚಾರಿಗಳೇ; ಅವರು ಉರಿಯುವ ಒಲೆಗೆ ಸಮಾನರು. ರೊಟ್ಟಿಸುಡುವವನು ನಾದಿದ ಹಿಟ್ಟು ಹುಳಿಯಾಗುವವರೆಗೂ ಬಿಟ್ಟಿರುವ ಬೂದಿ ಮುಚ್ಚಿದ ಕೆಂಡಕ್ಕೆ ಸಮಾನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬೆಂಕಿ ಹೊತ್ತಿಸಿ ಉರಿಸಿ ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ರೊಟ್ಟಿಯನ್ನು ಸುಡಲು ರೊಟ್ಟಿಗಾರನು ಹಿಟ್ಟನ್ನು ನಾದುವನು. ರೊಟ್ಟಿಯು ಶಾಖದಿಂದ ಉಬ್ಬುತ್ತಿರುವಾಗ ರೊಟ್ಟಿಗಾರನು ಒಲೆಯನ್ನು ಮತ್ತಷ್ಟು ಉರಿಸುವುದಿಲ್ಲ. ಇಸ್ರೇಲರಾದರೋ ಹಾಗಲ್ಲ, ಅವರು ಒಲೆಯನ್ನು ಮತ್ತಷ್ಟು ಉರಿಸುತ್ತಾರೆ. ಅಧ್ಯಾಯವನ್ನು ನೋಡಿ |