Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:7 - ಕನ್ನಡ ಸಮಕಾಲಿಕ ಅನುವಾದ

7 ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ. ಅವರು ತಮ್ಮ ನ್ಯಾಯಾಧಿಪತಿಗಳನ್ನು ನುಂಗಿಬಿಡುತ್ತಾರೆ. ಅವರ ಅರಸರೆಲ್ಲರು ಬಿದ್ದು ಹೋಗಿದ್ದಾರೆ. ಅವರಲ್ಲಿ ಒಬ್ಬನಾದರೂ ನನ್ನನ್ನು ಕರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಎಲ್ಲರು ಒಲೆಯಂತೆ ಉರಿಯುತ್ತ ತಮ್ಮ ಅಧಿಕಾರಿಗಳನ್ನೇ ನುಂಗಿಬಿಡುತ್ತಾರೆ. ಅವರ ಅರಸರೆಲ್ಲ ಸತ್ತುಬಿದ್ದಿದ್ದಾರೆ. ನನಗೆ ಮೊರೆಯಿಡುವವರು ಅವರಲ್ಲಿ ಯಾರೂ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ಬಿಸಿ ಮಾಡಲ್ಪಟ್ಟ ಕುಲುಮೆಯಂತಿರುವರು. ಅವರು ತಮ್ಮನ್ನು ಆಳುವವರನ್ನು ನಾಶಮಾಡಿದರು. ಅವರ ರಾಜರುಗಳೆಲ್ಲಾ ಬಿದ್ದುಹೋದರು. ಅವರಲ್ಲಿ ಒಬ್ಬರಾದಲೂ ಸಹಾಯಕ್ಕಾಗಿ ನನಗೆ ಮೊರೆಯಿಡಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:7
27 ತಿಳಿವುಗಳ ಹೋಲಿಕೆ  

ಇದಲ್ಲದೆ ಏಲನ ಮಗ ಹೋಶೇಯನು ರೆಮಲ್ಯನ ಮಗ ಪೆಕಹನ ವಿರುದ್ಧ ಒಳಸಂಚುಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಸಂಹರಿಸಿ, ಅವನಿಗೆ ಬದಲಾಗಿ ಅರಸನಾದನು.


ಆದರೆ ಅವನ ಅಧಿಪತಿಯಾದಂಥ ರೆಮಲ್ಯನ ಮಗ ಪೆಕಹನು ಗಿಲ್ಯಾದಿನ ಐವತ್ತು ಮಂದಿಯನ್ನು ತನ್ನ ಸಂಗಡ ಕೂಡಿಸಿಕೊಂಡು ಪೆಕಹ್ಯನ ವಿರುದ್ಧ ಒಳಸಂಚುಮಾಡಿ, ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಪೆಕಹ್ಯನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದುಹಾಕಿದನು. ಅನಂತರ, ಪೆಕಹ್ಯನಿಗೆ ಬದಲಾಗಿ ಪೆಕಹನು ಅರಸನಾದನು.


ಗಾದಿಯ ಮಗ ಮೆನಹೇಮನು ತಿರ್ಚದಿಂದ ಸಮಾರ್ಯಕ್ಕೆ ಬಂದು, ಸಮಾರ್ಯದಲ್ಲಿ ಯಾಬೇಷನ ಮಗ ಶಲ್ಲೂಮನನ್ನು ಹೊಡೆದು, ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.


ಯಾಬೇಷನ ಮಗ ಶಲ್ಲೂಮನು ಜೆಕರ್ಯನ ಮೇಲೆ ಒಳಸಂಚುಮಾಡಿ, ಜನರ ಮುಂದೆ ಅವನನ್ನು ಹೊಡೆದು, ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.


ಅವರು ಅರಸರನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ. ಅವರು ನನ್ನ ಅನುಮತಿಯಿಲ್ಲದೆ ರಾಜಕುಮಾರರನ್ನು ಆಯ್ಕೆ ಮಾಡಿದ್ದಾರೆ. ಅವರು ತಾವು ನಾಶವಾಗುವಂತೆ ತಮ್ಮ ಬೆಳ್ಳಿಯಿಂದಲೂ, ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.


ಇಸ್ರಾಯೇಲಿನ ಗರ್ವವು ಅವನಿಗೆ ವಿರುದ್ಧವಾಗಿ ಸಾಕ್ಷಿಕೊಡುತ್ತದೆ. ಆದರೂ ಅವರು ತಮ್ಮ ಯೆಹೋವ ದೇವರ ಕಡೆಗೆ ತಿರುಗದೆ ಇದ್ದಾರೆ. ಆತನನ್ನು ಹುಡುಕದೇ ಇದ್ದಾರೆ.


ನಿನ್ನ ಹೆಸರನ್ನು ಕರೆಯುವವನೂ, ನಿನ್ನನ್ನು ಹಿಡಿದುಕೊಳ್ಳುವುದಕ್ಕೆ ಎಚ್ಚರಗೊಳ್ಳುವವನು ಒಬ್ಬನೂ ಇಲ್ಲ. ಏಕೆಂದರೆ ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ. ನಮ್ಮ ಪಾಪಗಳಿಗಾಗಿ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


“ಆದರೂ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ. ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!


ಆದರೂ ಜನರು ತಮ್ಮನ್ನು ಶಿಕ್ಷಿಸಿದ ದೇವರ ಕಡೆಗೆ ತಿರುಗದೆಯೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕದೆಯೂ ಇದ್ದರು.


“ಹೃದಯದಲ್ಲಿ ಭಕ್ತಿಹೀನರಾಗಿರುವವರು ಕೋಪವನ್ನು ಕೂಡಿಸುವರು; ದೇವರು ಅವರನ್ನು ಬಂಧಿಸಿದರೂ, ಅವರು ದೇವರಿಗೆ ಮೊರೆ ಇಡುವುದಿಲ್ಲ.


ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ, ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ. ಧಾನ್ಯ ಮತ್ತು ದ್ರಾಕ್ಷಾರಸಗಳ ನಿಮಿತ್ತ ಅವರು ತಮ್ಮ ದೇವರುಗಳಿಗೆ ಮನವಿ ಮಾಡುವಾಗ ತಮ್ಮನ್ನು ತಾವು ಗಾಯಗೊಳಿಸಿಕೊಳ್ಳುತ್ತಾರೆ, ಆದರೆ ಅವರು ನನ್ನಿಂದ ದೂರವಿರುತ್ತಾರೆ.


ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”


ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಈ ಎಲ್ಲಾ ವಿನಾಶ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿಮ್ಮ ಸತ್ಯವನ್ನು ತಿಳಿದುಕೊಳ್ಳುವಂತೆ, ನಮ್ಮ ದೇವರಾದ ಯೆಹೋವ ದೇವರ ದಯೆಯನ್ನು ಬೇಡಿಕೊಳ್ಳಲಿಲ್ಲ.


“ಗೋಡೆಯನ್ನು ಕಟ್ಟಿ ನಾಡನ್ನು ನಾನು ಹಾಳುಮಾಡದಂತೆ ನಾಡಿನ ಪರವಾಗಿ ಪೌಳಿಗೋಡೆಯ ಬಿರುಕಿನಲ್ಲಿ ನಿಲ್ಲುವ ಒಬ್ಬ ಮನುಷ್ಯನನ್ನು ಅವರೊಳಗೆ ನಾನು ಹುಡುಕಿದೆನು. ಆದರೆ ಯಾರೂ ಸಿಕ್ಕಲಿಲ್ಲ.


ಆಗ ಅವನು, “ಅವರನ್ನು ಜೀವದಿಂದ ಹಿಡಿಯಿರಿ,” ಎಂದು ಹೇಳಿದ್ದರಿಂದ ಕುರುಬರು ಇವರನ್ನು ಜೀವದಿಂದ ಹಿಡಿದು, ಉಣ್ಣೆ ಕತ್ತರಿಸುವ ಮನೆಯ ಬಾವಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನಾದರೂ ಉಳಿಸಲಿಲ್ಲ.


ಈ ಪತ್ರವು ಅವರ ಬಳಿಗೆ ಬಂದಾಗ, ಅವರು ರಾಜಪುತ್ರರನ್ನು ಹಿಡಿದು, ಎಪ್ಪತ್ತು ಮಂದಿಯನ್ನು ಕೊಂದು, ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೆಯೇಲ್ ಪಟ್ಟಣದಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.


ಯೇಹುವು, “ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ,” ಎಂದನು. ಅವರು ಅವಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ, ಕುದುರೆಗಳ ಮೇಲೆಯೂ ಸಿಡಿಯಿತು. ಯೇಹುವು ರಥವನ್ನು ಅವಳ ಮೇಲೆ ಓಡಿಸಿದನು.


ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು. ಅವನು ರಥದಲ್ಲಿ ಕೆಳಗೆ ಮುದುರಿಕೊಂಡು ಬಿದ್ದನು.


ಪಟ್ಟಣವು ವಶವಾದದ್ದನ್ನು ಕಂಡಾಗ, ಜಿಮ್ರಿಯು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ, ತನ್ನ ಅರಮನೆಯನ್ನು ಬೆಂಕಿಯಿಂದ ಸುಟ್ಟು ತಾನೂ ಸತ್ತನು.


ಆದರೆ ಒಮ್ರಿಯ ಸಮರ್ಥಕರು ಜಯಿಸಿದ್ದರಿಂದ ಗೀನಾತನ ಮಗನಾದ ತಿಬ್ನಿಯು ಸತ್ತುಹೋದನು, ಒಮ್ರಿಯು ಅರಸನಾದನು.


ಯೆಹೂದದ ಅರಸನಾದ ಆಸನ ಮೂರನೆಯ ವರುಷದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.


ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜ್ಯವನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ. ಆ ನ್ಯಾಯಾಧಿಪತಿಗಳು ಎಲ್ಲಿ?


ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ.


ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಆದರೆ ಅವರು ಯೆಹೋವ ದೇವರಿಗೆ ಎಂದೂ ಮೊರೆಯಿಡುವುದಿಲ್ಲ.


ದೇವರೇ, ನಿನಗೋಸ್ಕರ ಕಾದುಕೊಳ್ಳುವವರಿಗೆ ನೀನು ಮಾಡುವುದನ್ನು ಲೋಕದ ಉತ್ಪತ್ತಿಗೆ ಮುಂಚೆ ದೇವರೇ ನಿನ್ನ ಹೊರತಾಗಿ ಯಾರೂ ಕೇಳಲಿಲ್ಲ. ಯಾರ ಕಿವಿಯೂ ಕೇಳಲಿಲ್ಲ. ಯಾರ ಕಣ್ಣೂ ಕಾಣಲಿಲ್ಲ.


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು