ಹೋಶೇಯ 8:14 - ಕನ್ನಡ ಸಮಕಾಲಿಕ ಅನುವಾದ14 ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, ಅರಮನೆಗಳನ್ನು ಕಟ್ಟುತ್ತಾರೆ. ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ನುಂಗಿಬಿಡುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಇಸ್ರಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ. ಜುದೇಯವು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ನಿರ್ಮಿಸಿಕೊಂಡಿದೆ. ಆದರೆ ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಾರುವೆನು. ಅದು ಆ ಸೌಧಗಳನ್ನು ನುಂಗಿಬಿಡುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇಸ್ರಾಯೇಲು ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಆ ಸೌಧಗಳನ್ನು ನುಂಗಿಬಿಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು. ಆದರೆ ಅದರ ನಿರ್ಮಾಣಿಕನನ್ನು ಮರೆತರು. ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಆ ಬೆಂಕಿಯು ಅರಮನೆಗಳನ್ನು ನಾಶಮಾಡುವದು.” ಅಧ್ಯಾಯವನ್ನು ನೋಡಿ |