Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:5 - ಕನ್ನಡ ಸಮಕಾಲಿಕ ಅನುವಾದ

5 ಸಮಾರ್ಯವೇ, ನಿನ್ನ ಬಸವ ವಿಗ್ರಹವನ್ನು ಬಿಸಾಡಿಬಿಡು. ನನ್ನ ಕೋಪವು ಅವರ ಮೇಲೆ ಉರಿಯುತ್ತದೆ. ಅವರು ಎಷ್ಟು ಕಾಲ ಶುದ್ಧತೆಗೆ ಅಸಮರ್ಥರಾಗಿರುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವುದಕ್ಕೆ ಇನ್ನೆಷ್ಟು ಕಾಲ ಹಿಡಿಯುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಮಾರಿಯವೇ, ನೀನು ನಿರ್ಮಿಸಿಕೊಂಡಿರುವ ಬಸವನನ್ನು ಧಿಕ್ಕರಿಸಿದ್ದೇನೆ. ನನ್ನ ಕೋಪಾಗ್ನಿ ನಿನ್ನ ಮೇಲೆ ಉರಿದುಬರುತ್ತಿದೆ. ಈ ಜನರು ನಿರ್ಮಲರಾಗುವುದಕ್ಕೆ ಇನ್ನೆಷ್ಟುಕಾಲ ಹಿಡಿಯುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವದಕ್ಕೆ ಇನ್ನೆಷ್ಟು ಕಾಲ ಹಿಡಿಯುವದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5-6 ಯೆಹೋವನು ನೀವು ಮಾಡಿಕೊಂಡ ಬಸವನನ್ನು ನಿರಾಕರಿಸಿದ್ದಾನೆ. ಸಮಾರ್ಯವೇ, ಯೆಹೋವನು ಹೇಳುವುದೇನೆಂದರೆ, ‘ನಾನು ಇಸ್ರೇಲರ ವಿರುದ್ಧವಾಗಿ ತುಂಬಾ ಕೋಪಗೊಂಡಿದ್ದೇನೆ.’ ಇಸ್ರೇಲಿನ ಜನರು ಅವರ ಪಾಪಗಳಿಗಾಗಿ ಶಿಕ್ಷಿಸಲ್ಪಡುವರು. ಶಿಲ್ಪಿಯು ಅವರ ವಿಗ್ರಹಗಳನ್ನು ಮಾಡಿದನು. ಅವು ದೇವರಲ್ಲ. ಸಮಾರ್ಯದ ಬಸವನ ವಿಗ್ರಹಗಳು ಚೂರುಚೂರಾಗಿ ಒಡೆಯಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:5
17 ತಿಳಿವುಗಳ ಹೋಲಿಕೆ  

ಬೇತಾವೆನಿನ ಬಸವ ವಿಗ್ರಹಕ್ಕೆ ಸಮಾರ್ಯದ ನಿವಾಸಿಗಳು ಭಯಪಡುವರು. ಅದರಲ್ಲಿ ಆನಂದಿಸಿದ ಜನರು ಅದಕ್ಕೋಸ್ಕರ ಗೋಳಾಡುವರು. ಅದರ ಯಾಜಕರು ನಡುಗುವರು. ಏಕೆಂದರೆ ಅದರ ವೈಭವವು ಅದರಿಂದ ಕುಂದಿಹೋಯಿತು.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ನಿನ್ನ ಕೀಳಾದ ವೇಶ್ಯತನವನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯ ಕಾರ್ಯಗಳನ್ನು ಕಂಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ಇನ್ನೆಷ್ಟು ಕಾಲ ನೀನು ಅಶುದ್ಧಳಾಗಿರುವೆ?”


“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?


ಆ ಸಮಯದಲ್ಲಿ ಅವರು ಕರುವಿನ ರೂಪದಲ್ಲಿ ಒಂದು ವಿಗ್ರಹ ಮಾಡಿಕೊಂಡರು. ಅದರ ಮುಂದೆ ತಮ್ಮ ಬಲಿಯನ್ನು ಕೊಟ್ಟು, ತಮ್ಮ ಕೈಕೃತಿಗಳಲ್ಲಿ ಹರ್ಷಗೊಂಡರು.


ಅವರು ಇಸ್ರಾಯೇಲಿನಿಂದ ಬಂದವರು. ಕಮ್ಮಾರನು ಈ ಬಸವ ವಿಗ್ರಹವನ್ನು ಮಾಡಿದನು. ಅದು ದೇವರಲ್ಲ, ಆದರೆ ಸಮಾರ್ಯದ ಬಸವನನ್ನು ಚೂರುಚೂರಾಗುವುದು.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.


“ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸಮೀಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತುಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ಏಕೆಂದರೆ ನನ್ನ ರೋಷ ಬೆಂಕಿಯಂತಿದೆ, ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ, ಅದರ ಫಲವನ್ನೂ ತಿಂದು ಬಿಟ್ಟು, ಬೆಟ್ಟಗಳ ಅಸ್ತಿವಾರವನ್ನು ದಹಿಸುವುದು.


ಬೇಕುಬೇಕೆಂದು ಪಾಪಮಾಡದಂತೆ ನಿಮ್ಮ ಸೇವಕನನ್ನು ಕಾಪಾಡು; ಅಂಥ ಪಾಪಗಳು ನನ್ನ ಮೇಲೆ ಆಳಿಕೆ ಮಾಡದಿರಲಿ. ಆಗ ನಾನು ತಪ್ಪಿಲ್ಲದವನಾಗಿ, ಮಹಾಪರಾಧದಿಂದ ಬಿಡುಗಡೆಯಾಗಿರುವೆನು.


ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ, ಹಾಗೆಯೇ ಮೋವಾಬು ಕೆಮೋಷನ ವಿಷಯ ನಾಚಿಕೆಪಡುವುದು.


ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ. ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ, ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅದೆಲ್ಲವೂ ಕಮ್ಮಾರರ ಕೈಕೆಲಸವೇ. ಅವರು ನರಬಲಿಯನ್ನು ಅರ್ಪಿಸುತ್ತಾರೆ, ಬಸವನ ವಿಗ್ರಹಕ್ಕೆ ಮುದ್ದಿಡುತ್ತಾರೆ,” ಎಂದು ಜನರು ಅವರ ಬಗ್ಗೆ ಹೇಳುತ್ತಾರೆ.


ಅವರು ಸಮಾರ್ಯದ ಪಾಪದ ಮೇಲೆ ಆಣೆ ಇಟ್ಟುಕೊಂಡು, ದಾನೇ, ನಿನ್ನ ದೇವರ ಜೀವದಾಣೆ ಎಂದೂ, ಬೇರ್ಷೆಬದ ಮಾರ್ಗದ ಜೀವದಾಣೆ ಎಂದೂ ಹೇಳುವರು. ಅವರು ಬಿದ್ದು ಮತ್ತೆ ಮೇಲೆ ಏಳಲಾರರು.”


“ಈಗ ದಾವೀದನ ವಂಶಜರ ಕೈಯಲ್ಲಿರುವ ಯೆಹೋವ ದೇವರ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೊಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.


ಇಸ್ರಾಯೇಲಿನ ಪಾಪಕ್ಕೆ ಆಸ್ಪದವಾದ ಆವೆನಿನ ಉನ್ನತ ಪೂಜಾಸ್ಥಳಗಳು ಹಾಳಾಗಿ ಹೋಗುವುವು. ಮುಳ್ಳುಗಿಡಗಳೂ, ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವುವು. ಜನರು ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ! ಗುಡ್ಡಗಳಿಗೆ, ನಮ್ಮನ್ನು ಮುಚ್ಚಿಕೊಳ್ಳಿರಿ!” ಎನ್ನುವರು.


ಅದರ ವಿಗ್ರಹಗಳೆಲ್ಲಾ ತುಂಡುಗಳಾಗುವಂತೆ ಮಾಡುವೆನು. ಅದರ ಆಲಯದ ಕಾಣಿಕೆಗಳೆಲ್ಲಾ ಬೆಂಕಿಯಿಂದ ಸುಟ್ಟುಹೋಗುವುದು. ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು. ಅದು ವೇಶ್ಯಾವೃತ್ತಿಯ ಕೂಲಿಯಿಂದ ಕೂಡಿಸಿಕೊಂಡವು. ವೇಶ್ಯಾವೃತ್ತಿಯ ಕೂಲಿಯನ್ನಾಗಿಯೇ ಅವುಗಳನ್ನು ಉಪಯೋಗಿಸಬೇಕಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು