ಹೋಶೇಯ 8:6 - ಕನ್ನಡ ಸಮಕಾಲಿಕ ಅನುವಾದ6 ಅವರು ಇಸ್ರಾಯೇಲಿನಿಂದ ಬಂದವರು. ಕಮ್ಮಾರನು ಈ ಬಸವ ವಿಗ್ರಹವನ್ನು ಮಾಡಿದನು. ಅದು ದೇವರಲ್ಲ, ಆದರೆ ಸಮಾರ್ಯದ ಬಸವನನ್ನು ಚೂರುಚೂರಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ಬಸವ ಇಸ್ರಯೇಲಿನ ಕೈಕೆಲಸವೇ. ಶಿಲ್ಪಿ ಕೊಟ್ಟ ರೂಪವದು; ಅದು ದೇವರಲ್ಲ. ಸಮಾರ್ಯದ ಬಸವನು ನುಚ್ಚುನೂರಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು. ಅಧ್ಯಾಯವನ್ನು ನೋಡಿ |
ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.